ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಮಾಲತಿ ನದಿ ಆರ್ಭಟ, ನಾಬಳಿ ಸೇತುವೆ ಬಂದ್!

ಆಗುಂಬೆ ಬಳಿ ಪ್ರವಾಹ: ಕುಂದಾದ್ರಿ ಮಾರ್ಗ ಬಂದ್, ಕಮ್ಮರಡಿಗೆ ರೂಟ್ ಬದಲು!

Untitled design 2025 08 18t100842.154

ಶಿವಮೊಗ್ಗ: ಮಲೆನಾಡು ಪ್ರದೇಶದ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯ ಆರ್ಭಟ ಮುಂದುವರಿದಿದೆ. ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕುಗಳಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಪ್ರಮುಖ ನದಿಗಳಾದ ತುಂಗಾ, ಮಾಲತಿ ಮತ್ತು ಇತರ ಉಪನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ, ಇದರಿಂದಾಗಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ತೀರ್ಥಹಳ್ಳಿ ತಾಲೂಕಿನ ಮಾಲತಿ ನದಿ ಉಕ್ಕಿ ಹರಿಯುತ್ತಿದ್ದು, ಹೊನ್ನೆತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಬಳಿ ಸೇತುವೆ ಬಳಿ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಮಾಲತಿ ನದಿಯ ನೀರು ರಸ್ತೆಯ ಮೇಲೆ ನಾಲ್ಕೈದು ಅಡಿ ಎತ್ತರದಲ್ಲಿ ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ. ಶೃಂಗೇರಿಯಿಂದ ಕುಂದಾದ್ರಿಗೆ ತೆರಳುವ ಮಾರ್ಗ ಹಾಗೂ ಗುಡ್ಡೇಕೇರಿಗೆ ಸಂಪರ್ಕಿಸುವ ರಸ್ತೆಗಳು ಬಂದ್ ಆಗಿವೆ. ಆಗುಂಬೆ ಅಥವಾ ಕಮ್ಮರಡಿ ಮಾರ್ಗವಾಗಿ ಶೃಂಗೇರಿಗೆ ತೆರಳಲು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

ಮಾಲತಿ ನದಿ, ತುಂಗಾ ನದಿಯ ಉಪನದಿಯಾಗಿದ್ದು, ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿಯ ಹೊನ್ನೆತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಪ್ರವಾಹದಿಂದ ಹೆಚ್ಚಿನ ತೊಂದರೆಯಾಗಿದೆ. ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.

Exit mobile version