ನಿನ್ನೆ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಬಾದಾಮಿಯಿಂದ ಗುಳೇದಗುಡ್ಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಬೃಹತ್ ನೀಲಗಿರಿ ಮರವೊಂದು ರಸ್ತೆಗೆ ಬಿದ್ದಿದ್ದರಿಂದ ವಾಹನ ಸವಾರರು ತೊಂದರೆ ಅನಿಭವಿಸಿದರು.
ಬಾಗಲಕೋಟೆ ಜಿಲ್ಲೆಯ ಬಾದಾಮಿ-ಗುಳೇದಗುಡ್ಡ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಬಿರುಗಾಳಿಯಿಂದಾಗಿ ಮರಗಳು ಧರೆಗೆ ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ವಾಹನ ಸವಾರರು, ವಿಶೇಷವಾಗಿ ಬೈಕ್ ಸವಾರರು, ತಮ್ಮ ವಾಹನಗಳನ್ನು ಎತ್ತಿಕೊಂಡು ಮರದ ಅಡಿಯಿಂದ ದಾಟಿ ತಮ್ಮ ಊರುಗಳಿಗೆ ತೆರಳಿದ್ದಾರೆ.
ADVERTISEMENT
ADVERTISEMENT
ಅದೃಷ್ಠವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಬಿರುಗಾಳಿ ಮತ್ತು ಮಳೆಯಿಂದಾಗಿ ರಸ್ತೆಯಲ್ಲಿ ತಾತ್ಕಾಲಿಕವಾಗಿ ಅಡಚಣೆ ಉಂಟಾಗಿದ್ದು, ಸಂಚಾರ ಸ್ಥಗಿತಗೊಂಡಿತು.