ರಾಜಾಜಿನಗರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

Siddu stalin kcr (16)

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

ಈ ಪೈಕಿ ಬೆಂಗಳೂರು ನಗರ ಜಿಲ್ಲೆಯ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ವಿಧಾನಸಭಾ ಚುನವಣೆಯ ಫಲಿತಾಂಶದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಎಸ್. ಸುರೇಶ್ ಕುಮಾರ್ ರವರು-58,624 (49.60%)ಮತಗಳಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನಿಂದ  ಪುಟ್ಟಣ್ಣ -50,564 (42.78%)ಮತ ಗಳಿಸಿದ್ದರು. ಜೆಡಿಎಸ್‌ನಿಂದ ಟಿ. ಹೆಚ್. ಆಂಜನಪ್ಪನವರು- 4081 (3.45%) ಈ ಚುನಾವಣೆಯಲ್ಲಿ ಎಸ್. ಸುರೇಶ್ ಕುಮಾರ್ ರವರು-8,060 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ರಾಜಾಜಿನಗರ ಕ್ಷೇತ್ರದ ಬಗ್ಗೆ ಮಾಹಿತಿ

 ರಾಜಾಜಿನಗರ ವಿಧಾನಸಭಾ ಕ್ಷೇತ್ರವು ಬಿಜೆಪಿಯ ಭದ್ರಕೋಟೆಯಾಗಿದ್ದು, ನಗರದ 7 ವಾರ್ಡ್‌ಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಬಿಜಿಪಿಯ ಹಿರಿಯ ಶಾಸಕರಾಗಿರುವ ಸುರೇಶ್ ಕುಮಾರ್‌ರವರಿಗೆ ಮತದಾರರು 6 ಬಾರಿ ಆಶೀರ್ವಾದ ಮಾಡಿದ್ದಾರೆ. ಅಭಿವೃದ್ಧಿ ಮೂಲಕವೇ ಜನಮನ್ನಣೆಗಳಿಸಿರುವ ಇವರು ಜನರ ಕಷ್ಟಗಳಿಗೆ ತಕ್ಷಣವೇ ಸ್ಪಂದಿಸೋ ಸಜ್ಜನ ರಾಜಕಾರಣಿಯಾಗಿದ್ದಾರೆ. ಪದೇ ಪದೇ ಅಭ್ಯರ್ಥಿಗಳನ್ನು ಬದಲಾವಣೆ ಮಾಡುತ್ತಿರುವುದರಿಂದ ಕಾಂಗ್ರೆಸ್‌ಗೆ ಸೋಲಾಗುತ್ತಿದೆ.

ರಾಜಾಜಿನಗರ ಜನರ ಮೂಡ್ ಹೇಗಿದೆ.?

ಈ ಕ್ಷೇತ್ರದಲ್ಲಿ ಬಿಜೆಪಿಯ ಹಿಂದುತ್ವದ ಅಲೆ ಇರುವುದರಿಂದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಗೆ ಬಲವೆನ್ನಬಹುದು. ಶಾಸಕ ಸುರೇಶ್ ಕುಮಾರ್‌ಗೆ ಜೆಡಿಎಸ್ ನಾಯಕರ ಬೆಂಬಲವಿದೆ. ಇನ್ನೊಂದೆಡೆ ಮೈತ್ರಿ ಮೂಲಕ ಚುನಾವಣೆಗೆ ಹೋದರೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಕೊಡಿ ಎಂದು ಕೇಳುವ ಸಾಧ್ಯತೆಯೂ ಹೆಚ್ಚಿದೆ. ಇತ್ತ, ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ನಡುವೆ ಪೈಪೋಟಿ ಹೆಚ್ಚಿದೆ.

ರಾಜಾಜಿನಗರ ಆಕಾಂಕ್ಷಿಗಳು ಯಾರು.?

ರಾಜಾಜಿನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸುರೇಶ್ ಕುಮಾರ್, ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್‌ನಿಂದ ಜಿ. ಪದ್ಮಾವತಿ/ ಪುಟ್ಟಣ್ಣ ಅಥವಾ ಆರ್ ಮಂಜುಳಾ ಆಕಾಂಕ್ಷಿಗಳಾಗಿದ್ದಾರೆ.

ಮೂಡ್ ಆಫ್ ರಾಜಾಜಿನಗರ

ಈಗಲೂ ರಾಜಾಜಿನಗರ ಕ್ಷೇತ್ರದಲ್ಲಿ ಬಿಜೆಪಿ ಪರ ಒಲವಿದ್ದು, ಬಿಜೆಪಿಯೇ ಇಲ್ಲಿ ಮೇಲುಗೈ ಸಾಧಿಸಲಿದೆ.

 

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version