ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ನೌಕರರ ಮುಷ್ಕರದಿಂದಾಗಿ ರಾಜ್ಯಾದ್ಯಂತ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ತುಮಕೂರು ಮತ್ತು ಬೆಂಗಳೂರು ನಡುವೆ ಪ್ರಯಾಣಿಕರ ಸೌಕರ್ಯಕ್ಕಾಗಿ ನೈಋತ್ಯ ರೈಲ್ವೇ ವಿಶೇಷ ಪ್ಯಾಸೆಂಜರ್ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.
ಹೌದು, ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಪ್ರಯಾಣಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ಅರಿತ ರೈಲ್ವೇ ಇಲಾಖೆಯು, ತುಮಕೂರಿಂದ ಬೆಂಗಳೂರಿಗೆ ಹೋಗುವವರಿಗೆ ನೈಋತ್ಯ ರೈಲ್ವೇ ವಿಶೇಷ ಪ್ಯಾಸೆಂಜರ್ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದೆ. ಈ ರೈಲು ಕೆಳಗಿನ ವೇಳಾಪಟ್ಟಿಯಂತೆ ಸಂಚರಿಸಲಿದೆ.
ರೈಲು ವೇಳಾಪಟ್ಟಿ:
- ತುಮಕೂರಿನಿಂದ ಬೆಂಗಳೂರು: ಬೆಳಗ್ಗೆ 9:20ಕ್ಕೆ ತುಮಕೂರಿನಿಂದ ಹೊರಟು ಕೆಎಸ್‌ಆರ್ ಬೆಂಗಳೂರು ನಿಲ್ದಾಣಕ್ಕೆ ಬೆಳಗ್ಗೆ 11:00ಕ್ಕೆ ತಲುಪಲಿದೆ.
- ಬೆಂಗಳೂರಿನಿಂದ ತುಮಕೂರು: ಬೆಳಗ್ಗೆ 11:20ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 1:10ಕ್ಕೆ ತುಮಕೂರಿಗೆ ಆಗಮಿಸಲಿದೆ.
ನೈಋತ್ಯ ರೈಲ್ವೇ ಅಧಿಕಾರಿಗಳ ಪ್ರಕಾರ, ಈ ವಿಶೇಷ ರೈಲು ಸೇವೆಯು ಕೆಎಸ್‌ಆರ್‌ಟಿಸಿ ಮುಷ್ಕರ ಮುಗಿಯುವವರೆಗೆ ಮಾತ್ರ ಲಭ್ಯವಿರಲಿದೆ. ಈ ವ್ಯವಸ್ಥೆಯಿಂದ ಪ್ರಯಾಣಿಕರಿಗೆ ಪರ್ಯಾಯ ಸಾರಿಗೆ ಸೌಲಭ್ಯ ಒದಗಲಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.