ತುಮಕೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Untitled design 2025 03 06t171839.277

ತುಮಕೂರು: ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಶಿರಾ ತಾಲೂಕಿನ ಕುಂಟೆಗೌಡನಪಾಳ್ಯ ಮೂಲದ ದೀಪಿಕಾ (19) ಆತ್ಯೆಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತುಮಕೂರಿನ ಕುಣಿಗಲ್ ರಸ್ತೆಯಲ್ಲಿರುವ ಸಿದ್ದಾರ್ಥ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಘಟನೆ ವಿವರ
ದೀಪಿಕಾ ಎಂಬ ವಿದ್ಯಾರ್ಥಿನಿ ಸಿದ್ದಾರ್ಥ ಪಿಯುಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ವಸತಿ ನಿಲಯದಲ್ಲಿ ವಾಸವಾಗಿದ್ದಳು. ಹಾಸ್ಟೆಲ್‌ನ ಮಹಡಿಯಲ್ಲಿ ತನ್ನ ವೇಲಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದುರ್ಘಟನೆ ತಿಳಿಯುತ್ತಿದ್ದಂತೆ ಜಯನಗರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದೀಪಿಕಾ ಮನೆಯಲ್ಲಿ ಅಥವಾ ಕಾಲೇಜಿನಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದಳಾ ಎಂಬುದರ ಕುರಿತು ಮಾಹಿತಿ ಹೊರಬರಬೇಕಿದೆ.

ಪೋಲೀಸ್ ಪರಿಶೀಲನೆ 
ಈ ಘಟನೆಯ ನಂತರ ದೀಪಿಕಾ ಮೃತದೇಹವನ್ನು ತುಮಕೂರು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆ ಮುಂದುವರಿದಿದೆ.

Exit mobile version