ತುಮಕೂರು: ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೈರಾಪುರ ಗ್ರಾಮದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ರಾಹುಲ್ (16) ಅಕಸ್ಮಿಕವಾಗಿ ಕುಸಿದುಬಿದ್ದು, ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ.
ರಾಹುಲ್ ಬೈರಾಪುರ ಗ್ರಾಮದ ಜಯರಾಮ ಅವರ ಪುತ್ರನಾಗಿದ್ದು, ಗುರುವಾರ ರಾತ್ರಿ 9:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಕುಟುಂಬದವರು ರಾಹುಲ್ ನನ್ನು ಹುಳಿಯಾರ ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ದುಃಖದ ಘಟನೆ ರಾಹುಲ್‌ನ ಪೋಷಕರಿಗೆ ಭಾರೀ ಆಘಾತ ಉಂಟುಮಾಡಿದ್ದು, ಊರಿನಲ್ಲಿ ತೀವ್ರ ಸಂತಾಪ ವ್ಯಕ್ತವಾಗುತ್ತಿದೆ. ಈ ಘಟನೆ ಸಂಬಂಧ ಹುಳಿಯಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.