ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಬಾಲ ಗರ್ಭಿಣಿಯರ ಸಂಖ್ಯೆ

Siddu stalin kcr (12)

ಹೆಚ್ಚುತ್ತಿರುವ ಅನಕ್ಷರತೆ, ಕುಟುಂಬ ಸದಸ್ಯರ ಒತ್ತಡ, ಏಕಪೋಷಕತ್ವ, ಸಾಮಾಜಿಕ, ಧಾರ್ಮಿಕ, ಆರ್ಥಿಕ, ಗಂಡು ಸಂತಾನ ಬೇಕೆಂಬ ಹೆಬ್ಬಯಕೆ, ಪ್ರೇಮ ಪ್ರಕರಣ ಇತರೆ ಕಾರಣಗಳಿಂದ ರಾಜ್ಯದಲ್ಲಿ ಬಾಲ ಗರ್ಭಿಣಿ ಪ್ರಕರಣಗಳು ಹೆಚ್ಚಾಗಿರುವುದು ಬೆಳಕಿಗೆ ಬಂದಿದೆ. ಕಳೆದ ವರ್ಷ ರಾಜ್ಯದಲ್ಲಿ ಒಟ್ಟು 13,447 ಬಾಲ ಗರ್ಭಿಣಿ ಪ್ರಕರಣ ದಾಖಲಾಗಿದ್ದವು.

ಕಳೆದ ಮೂರು ವರ್ಷದ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 18 ವರ್ಷದೊಳಗಿನ ಗರ್ಭಿಣಿಯರ ಸಂಖ್ಯೆ ಹೆಚ್ಚಳವಾಗಿದೆ. ಈ ಅವಧಿಯಲ್ಲಿ 55 ಬಾಲ ಗರ್ಭಿಣಿಯರು ಪತ್ತೆಯಾಗಿದ್ದಾರೆ. ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ, ಪ್ರೇಮ ಪ್ರಕರಣಗಳು ಅಪ್ರಾಪ್ತ ಗರ್ಭಿಣಿಯರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿವೆ. ಈ ಬಗ್ಗೆ ಬಾಲಕಿಯರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ಮಕ್ಕಳ ಹಕ್ಕು ರಕ್ಷಣಾ ಸಮಿತಿ ಶ್ರಮಿಸುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಜಾಗೃತಿ, ಆಪ್ತ ಸಮಾಲೋಚನೆ, ಪೊಲೀಸರ ಮೂಲಕ ಅರಿವು ಸೇರಿ ಅನೇಕ ಬಗೆಯ ಕಾರ್ಯಾಗಾರಗಳು ನಡೆಯುತ್ತಿವೆಯಾದರೂ, ಅದು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ.

ADVERTISEMENT
ADVERTISEMENT
ನಿಯಂತ್ರಣಕ್ಕೆ ಕ್ರಮಗಳೇನು?

ಎಲ್ಲಾ ಸಂಬಂಧಿತ ಇಲಾಖೆಗಳು ಬಾಲ್ಯವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕಣಗಳ ತಡೆಗಟ್ಟಲು ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುವುದು ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಾಲ್ಯವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ತಡೆಗಟ್ಟಲು ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಬೇಕು.

 

Exit mobile version