• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪ್ರವಾದಿ ಪೈಗಂಬರ್ ಕುರಿತು ಅವಹೇಳನ: ನಾಳೆ ವಿಜಯಪುರದಲ್ಲಿ ಯತ್ನಾಳ್ ವಿರುದ್ಧ ಬೃಹತ್ ಪ್ರತಿಭಟನೆ

ಯತ್ನಾಳ್ ವಿರುದ್ಧ 10,000ಕ್ಕೂ ಹೆಚ್ಚು ಜನರಿಂದ ಬೃಹತ್ ಪ್ರತಿಭಟನೆ

admin by admin
April 27, 2025 - 6:21 pm
in ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
123 2025 04 27t182039.041

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಮುಸ್ಲಿಂ ಸಮುದಾಯದ ಮುಖಂಡರು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ವಿಚಾರವಾಗಿ ಯತ್ನಾಳ್ ಸ್ಪಷ್ಟನೆ ನೀಡಿದ್ದರೂ, ಅಲ್ಪಸಂಖ್ಯಾತ ಮುಖಂಡರು ತಮ್ಮ ಕೋಪವನ್ನು ಶಾಂತಗೊಳಿಸಿಲ್ಲ. ನಾಳೆ ವಿಜಯಪುರ ನಗರದಲ್ಲಿ ಶಾಸಕ ಯತ್ನಾಳ್ ವಿರುದ್ಧ ಬೃಹತ್ ಹೋರಾಟ ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

RelatedPosts

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

ಈದ್ ಮಿಲಾದ್‌ಗೆ ಶಿವಮೊಗ್ಗದಲ್ಲಿ ಬಿಗಿ ರೂಲ್ಸ್; ಬೈಕ್ Rally, ಡಿಜೆ ಬಳಕೆಗೆ ನಿರ್ಬಂಧ!

ಹಾನಗಲ್ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು; ಮೃತದೇಹವಿಟ್ಟು ಕುಟುಂಬಸ್ಥರ ಪ್ರತಿಭಟನೆ!

ವಿಷಕಾರಿ ತಪ್ಪುಲು ತಿಂದು 13 ಕುರಿಗಳ ಸಾವು: ಲಕ್ಷಾಂತರ ರೂ. ನಷ್ಟ

ADVERTISEMENT
ADVERTISEMENT

ಹೌದು, ಕಳೆದ ಏಪ್ರಿಲ್ 7ರಂದು ರಾಮನವಮಿ ದಿನದಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಯತ್ನಾಳ್, “ಬಾಳಾಸಾಹೇಬ್ ಠಾಕ್ರೆ ಮನೆಯಲ್ಲಿ ಪೈಗಂಬರ್ ಹುಟ್ಟಿದ್ದಾರೆ” ಎಂದು ಹೇಳಿದ್ದ ಆರೋಪವಿದೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಯತ್ನಾಳ್, ತಾವು ಮಹಮ್ಮದ್ ಅಲಿ ಜಿನ್ನಾ ಎನ್ನಲು ಹೋಗಿ ಮಾತಿನ ವೇಗದಲ್ಲಿ ತಪ್ಪಾಗಿ ಹೇಳಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ಈ ಸ್ಪಷ್ಟನೆಯನ್ನು ಒಪ್ಪದ ಮುಸ್ಲಿಂ ಸಮುದಾಯದ ಮುಖಂಡರು, ರಾಜ್ಯದಾದ್ಯಂತ ಹಲವೆಡೆ ಪ್ರತಿಭಟನೆಗಳನ್ನು ಆಯೋಜಿಸಿದ್ದಾರೆ.

ಈಗ ವಿಜಯಪುರದಲ್ಲಿ ಸುಮಾರು 10,000 ಜನರನ್ನು ಸೇರಿಸಿ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಸಿದ್ಧತೆ ನಡೆದಿದೆ. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತವಾಗಿ ಮೆರವಣಿಗೆ ನಡೆಸುವ ಯೋಜನೆಯಿದೆ. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕ ಯತ್ನಾಳ್, “ಪ್ರತಿಭಟನೆಯ ಹೆಸರಿನಲ್ಲಿ ಹಿಂದೂಗಳ ಆಸ್ತಿಗೆ ಹಾನಿಯಾದರೆ, ಸಂಘಟಕರೇ ನೇರ ಹೊಣೆಗಾರರು. ಈಗಾಗಲೇ ಗೃಹ ಸಚಿವರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. ಪ್ರತಿಭಟನೆಗೂ ಮುನ್ನ ಸಂಘಟಕರಿಂದ ಬಾಂಡ್ ಬರೆಸಿಕೊಳ್ಳಬೇಕು,” ಎಂದು ಆಗ್ರಹಿಸಿದ್ದಾರೆ.

ಆದರೆ, ಯತ್ನಾಳ್ ಅವರ ಈ ಹೇಳಿಕೆಗೆ ಕಿಡಿಕಾರಿರುವ ಮುಸ್ಲಿಂ ಮುಖಂಡರು, “ನಮ್ಮ ಹೋರಾಟ ಹಿಂದೂಗಳ ವಿರುದ್ಧ ಅಥವಾ ಅವರ ಆಸ್ತಿಯ ವಿರುದ್ಧ ಅಲ್ಲ. ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಯತ್ನಾಳ್ ವಿರುದ್ಧ ಮಾತ್ರ ಇದು. ವಿಶ್ವಕ್ಕೆ ಶಾಂತಿ ಸಂದೇಶ ನೀಡಿದ ಪೈಗಂಬರ್ ಅವರಿಗೆ ಅಶಾಂತಿ ಉಂಟುಮಾಡುವ ಕಾರ್ಯ ನಮ್ಮಿಂದ ಆಗುವುದಿಲ್ಲ. ಯತ್ನಾಳ್ ಮತ್ತು ಅವರ ಬೆಂಬಲಿಗರಿಂದಲೇ ಬಾಂಡ್ ಬರೆಸಿಕೊಳ್ಳಬೇಕು. ಪ್ರತಿಭಟನೆ ಮುಗಿಯುವರೆಗೆ ಅವರನ್ನು ಗಡಿಪಾರು ಮಾಡಬೇಕು,” ಎಂದು ಪೊಲೀಸ್ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಈ ಪ್ರತಿಭಟನೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಬಿಗಿ ಭದ್ರತೆಯನ್ನು ಒದಗಿಸಿದೆ. ವಿಜಯಪುರ ನಗರದಲ್ಲಿ ನಾಳೆ ನಡೆಯಲಿರುವ ಈ ಹೋರಾಟ ಯಾವ ರೀತಿಯ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಯಶ್ (5)

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

by ಕವಿತಾ
August 25, 2026 - 5:39 pm
0

ಯಶ್ (4)

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!

by ಕವಿತಾ
August 25, 2026 - 5:16 pm
0

ಯಶ್ (3)

ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!

by ಕವಿತಾ
August 25, 2026 - 4:59 pm
0

ಯಶ್ (2)

ಈದ್ ಮಿಲಾದ್‌ಗೆ ಶಿವಮೊಗ್ಗದಲ್ಲಿ ಬಿಗಿ ರೂಲ್ಸ್; ಬೈಕ್ Rally, ಡಿಜೆ ಬಳಕೆಗೆ ನಿರ್ಬಂಧ!

by ಕವಿತಾ
August 25, 2026 - 4:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (5)
    ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!
    August 25, 2026 | 0
  • ಯಶ್ (2)
    ಈದ್ ಮಿಲಾದ್‌ಗೆ ಶಿವಮೊಗ್ಗದಲ್ಲಿ ಬಿಗಿ ರೂಲ್ಸ್; ಬೈಕ್ Rally, ಡಿಜೆ ಬಳಕೆಗೆ ನಿರ್ಬಂಧ!
    August 25, 2026 | 0
  • ಯಶ್ (1)
    ಹಾನಗಲ್ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು; ಮೃತದೇಹವಿಟ್ಟು ಕುಟುಂಬಸ್ಥರ ಪ್ರತಿಭಟನೆ!
    August 25, 2026 | 0
  • Untitled design (11)
    ವಿಷಕಾರಿ ತಪ್ಪುಲು ತಿಂದು 13 ಕುರಿಗಳ ಸಾವು: ಲಕ್ಷಾಂತರ ರೂ. ನಷ್ಟ
    August 25, 2026 | 0
  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version