ಯಾದಗಿರಿ: ಗುರುಮಠಕಲ್ ತಾಲೂಕಿನ ಸಣ್ಣಸಂಬರ ಹಾಗೂ ಅನಪೂರ ಗ್ರಾಮಗಳಲ್ಲಿ ಶಾಸಕ ಶರಣಗೌಡ ಕಂದಕೂರ ಅವರು ಜನರ ಸಮಸ್ಯೆಗಳನ್ನು ಆಲಿಸಿದರು.
ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಗ್ರಾಮಸ್ಥರು ಕುಡಿಯುವ ನೀರಿನ ಕೊರತೆ ಬಗ್ಗೆ ತಮ್ಮ ನೋವು ತೊಡಿಕೊಂಡಾಗ, ಕೂಡಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಪರಿಹರಿಸಲು ಆದೇಶಿಸಿದರು. ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅದೇ ರೀತಿ, ಪಡಿತರ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಮ್ಮ ನೋವನ್ನು ಶಾಸಕರ ಮುಂದೆ ಹಂಚಿಕೊಂಡರು. ಕಳೆದ ಐದು ತಿಂಗಳಿಂದ ಬೆರಳಚ್ಚು ಸಮಸ್ಯೆಯಿಂದ ಪಡಿತರ ವಿತರಣೆ ಸ್ಥಗಿತಗೊಂಡಿರುವ ಕುರಿತು ಅವರು ತೀವ್ರ ಆತಂಕ ವ್ಯಕ್ತಪಡಿಸಿದರು. ಈ ಕುರಿತು ಕೂಡಲೇ ಆಹಾರ ಇಲಾಖೆ ಅಧಿಕಾರಿಗಳಿಗೆ ಕಂದಕೂರ ಸೂಚನೆ ನೀಡಿ, ಪಡಿತರ ವಿತರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಆದೇಶಿಸಿದರು.
ಶಾಸಕರ ಈ ತ್ವರಿತ ಪ್ರತಿಕ್ರಿಯೆ ಮತ್ತು ಜನಸಂಪರ್ಕ ಕಾರ್ಯಕ್ರಮ ಗ್ರಾಮಸ್ಥರ ಮೆಚ್ಚುಗೆ ವ್ಯಕ್ತಪಡಿಸಿದರು.