ಜನಿವಾರ ತೆಗೆಸಿದ ಕೇಸ್ ವಿಚಾರಣೆ: ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

ಅಭ್ಯರ್ಥಿಗೆ ಮರು ಪರಿಕ್ಷೆಗೆ ಅವಕಾಶ ನೀಡುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ PIL ಅರ್ಜಿ

123 2025 04 26t151226.889

ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದು, ಮರು ಸಿಇಟಿ ಪರೀಕ್ಷೆ ನಡೆಸಲು ಮನವಿ ಮಾಡಿದೆ.

ಈ ಘಟನೆ ರಾಜ್ಯಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಜನಿವಾರ ತೆಗೆಸಿದ ವಿಷಯಕ್ಕೆ ಸಂಬಂಧಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಜನರು ಪ್ರತಿಭಟನೆಗಳ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಈಗ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್‌ಗೆ PIL ಸಲ್ಲಿಸಿದ್ದು, ಮರು ಪರೀಕ್ಷೆ ನಡೆಸುವಂತೆ ಕೋರಿದೆ. ಅರ್ಜಿದಾರರ ಪರ ವಕೀಲರು ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದು, ಇದಕ್ಕೆ ಪ್ರತಿಕ್ರಿಯೆಯಾಗಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಪ್ರಕರಣದ ವಿಚಾರಣೆಯನ್ನು ಜೂನ್ 9, 2025ಕ್ಕೆ ನಿಗದಿಪಡಿಸಲಾಗಿದೆ.

ವೃತ್ತಿಪರ ಕೋರ್ಸ್‌ಗಳಿಗಾಗಿ ಏಪ್ರಿಲ್ 16, 2025 ರಂದು ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ ಈ ವಿವಾದ ಸೃಷ್ಟಿಯಾಗಿತ್ತು. ಶಿವಮೊಗ್ಗದಲ್ಲಿ ಇಬ್ಬರು ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿ ಅವರನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗಿತ್ತು. ಆದರೆ, ಬೀದರ್‌ನಲ್ಲಿ ಜನಿವಾರ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿಯೊಬ್ಬನನ್ನು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಅವಕಾಶ ನೀಡಿರಲಿಲ್ಲ. ಈ ಘಟನೆಗಳಿಂದ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

Exit mobile version