• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಶಿಕ್ಷಣ

ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅಶೋಕ ವಿವಿ 100% ಸಾಧನೆ

ಗರಿಷ್ಠ 42.5 ಲಕ್ಷ ಪ್ಯಾಕೇಜ್ ಪಡೆದು ಬೀಗಿದ ವಿದ್ಯಾರ್ಥಿಗಳು!

ಕವಿತಾ by ಕವಿತಾ
August 13, 2026 - 4:33 pm
in ಶಿಕ್ಷಣ
0 0
0
Untitled design (6)

ದೆಹಲಿ-ಎನ್‌ಸಿಆರ್ ಮೂಲದ ಪ್ರಸಿದ್ಧ ಅಶೋಕ ವಿಶ್ವವಿದ್ಯಾಲಯವು 2025–26ನೇ ಸಾಲಿನ ಪ್ಲೇಸ್‌ಮೆಂಟ್‌ನಲ್ಲಿ ನೂರಕ್ಕೆ ನೂರರಷ್ಟು ಸಾಧನೆ ಮಾಡಿದೆ. ಉದ್ಯೋಗದ ನಿರೀಕ್ಷೆಯಲ್ಲಿದ್ದ ಎಲ್ಲ ವಿದ್ಯಾರ್ಥಿಗಳಿಗೂ ಭರ್ಜರಿ ಉದ್ಯೋಗಾವಕಾಶಗಳು ಒಲಿದುಬಂದಿದ್ದು, ವಿದ್ಯಾರ್ಥಿಯೊಬ್ಬರು ಬರೋಬ್ಬರಿ 42.5 ಲಕ್ಷ ರೂ.ಗಳ ವಾರ್ಷಿಕ ವೇತನದ ಪ್ಯಾಕೇಜ್ ಪಡೆದಿದ್ದಾರೆ.

ಈ ಬಾರಿ ಒಟ್ಟು 163 ಪ್ರತಿಷ್ಠಿತ ಸಂಸ್ಥೆಗಳು ಕ್ಯಾಂಪಸ್ ಸಂದರ್ಶನ ನಡೆಸಿದ್ದು, ವಿದ್ಯಾರ್ಥಿಗಳಿಗೆ 450ಕ್ಕೂ ಹೆಚ್ಚು ಆಫರ್‌ಗಳನ್ನು ನೀಡಿವೆ. ವಿಶೇಷವೆಂದರೆ, 78 ಹೊಸ ಕಂಪನಿಗಳು ವಿವಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ತಮ್ಮ ಕಂಪನಿಗೆ ಆಯ್ಕೆ ಮಾಡಿಕೊಂಡಿವೆ.

RelatedPosts

NEET PG 2026 ಫಲಿತಾಂಶ ಪ್ರಕಟ

CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

ADVERTISEMENT
ADVERTISEMENT

ಕಂಪ್ಯೂಟರ್ ಸೈನ್ಸ್‌ಗೆ ಅತಿಹೆಚ್ಚು ಡಿಮ್ಯಾಂಡ್!

ಈ ವರ್ಷ ಎಲ್ಲಾ ವಲಯಗಳಲ್ಲೂ ವಿದ್ಯಾರ್ಥಿಗಳ ಆರಂಭಿಕ ವೇತನದಲ್ಲಿ (ಸಿಟಿಸಿ) ಭಾರಿ ಏರಿಕೆ ಕಂಡು ಬಂದಿದೆ. ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯೊಬ್ಬರು ಅತಿ ಹೆಚ್ಚು, ಅಂದರೆ ವಾರ್ಷಿಕ 42.5 ಲಕ್ಷ ರೂ.ಗಳ ಆಫರ್ ಪಡೆದಿದ್ದಾರೆ.

ಇನ್ನು ವಿವಿಯ ಟಾಪ್ ಶೇ. 20ರಷ್ಟು ವಿದ್ಯಾರ್ಥಿಗಳ ಸರಾಸರಿ ವಾರ್ಷಿಕ ವೇತನ 22.5 ಲಕ್ಷ ರೂ.ಗಳಷ್ಟಿದ್ದರೆ, ಮಧ್ಯಮ ವೇತನ 22.0 ಲಕ್ಷ ರೂ. ಆಗಿದೆ.

ಯಾವ ಕ್ಷೇತ್ರಗಳಲ್ಲಿ ಹೆಚ್ಚು ಉದ್ಯೋಗ?

ಆಯ್ಕೆಯಾದ ಒಟ್ಟು ವಿದ್ಯಾರ್ಥಿಗಳಲ್ಲಿ ಶೇ.80ರಷ್ಟು ಮಂದಿ ಆರು ಪ್ರಮುಖ ವಲಯಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಬ್ಯಾಂಕಿಂಗ್ ಮತ್ತು ಹಣಕಾಸು ವಲಯದಲ್ಲಿ ಶೇ. 20ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ಸಿಕ್ಕಿದ್ದು, ಸರಾಸರಿ ವೇತನ 12.7 ಲಕ್ಷ ರೂ. ಆಗಿದೆ. ಇನ್ನು ಕನ್ಸಲ್ಟಿಂಗ್‌ ಕ್ಷೇತ್ರದಲ್ಲಿ ಎರಡನೇ ಗರಿಷ್ಠ ಶೇ. 18ರಷ್ಟು ವಿದ್ಯಾರ್ಥಿಗಳು ಉದ್ಯೋಗ ಗಿಟ್ಟಿಸಿಕೊಂಡಿದ್ದು, ಸರಾಸರಿ 16 ಲಕ್ಷ ರೂ. ವೇತನ ಪಡೆದುಕೊಂಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವಲಯದಲ್ಲಿ ಸಂಬಳ ಶೇ. 30ರಷ್ಟು ಭಾರೀ ಏರಿಕೆಯಾಗಿದೆ.

ಸಾಮಾಜಿಕ ಪ್ರಭಾವ ವಲಯದಲ್ಲಿ ಶೇ. 15ರಷ್ಟು ವಿದ್ಯಾರ್ಥಿಗಳಿಗೆ ಅವಕಾಶಗಳು ಸಿಕ್ಕಿದ್ದು, ಸರಾಸರಿ: 11.5 ಲಕ್ಷ ರೂ. ಆರಂಭಿಕ ವೇತನ ಗಳಿಸಲಿದ್ದಾರೆ. ಟೆಕ್ನಾಲಜಿ ವಿಭಾಗದಲ್ಲಿ ಶೇ. 9ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗಿದ್ದು, ಸರಾಸರಿ 15.1 ಲಕ್ಷ ರೂ. ಸಂಬಳ ಲಭಿಸಿದೆ.

ಡೇಟಾ ಮತ್ತು ರಿಸರ್ಚ್ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕ್ರಮವಾಗಿ ಶೇ. 9 ಹಾಗೂ ಶೇ. 7ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಪಡೆದುಕೊಂಡಿದ್ದು, ಕ್ರಮವಾಗಿ ಸರಾಸರಿ 13.5 ಲಕ್ಷ ರೂ. ಹಾಗೂ 11.9 ಲಕ್ಷ ರೂ. ವೇತನ ಪಡೆದುಕೊಂಡಿದ್ದಾರೆ.

ವಿದೇಶಿ ವಿವಿಗಳಲ್ಲೂ ಅಶೋಕ ವಿವಿ ವಿದ್ಯಾರ್ಥಿಗಳದ್ದೇ ಮೇಲುಗೈ

ಉನ್ನತ ಶಿಕ್ಷಣದ ವಿಚಾರದಲ್ಲೂ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. 135ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಗತಿಕ ಮಟ್ಟದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಿಂದ ಬರೋಬ್ಬರಿ 400ಕ್ಕೂ ಅಧಿಕ ಆಫರ್‌ಗಳನ್ನು ಪಡೆದಿದ್ದಾರೆ. ಆಕ್ಸ್‌ಫರ್ಡ್ – ಕೇಂಬ್ರಿಡ್ಜ್‌ನಿಂದ 24, ಹಾಗೂ ಐವಿ ಲೀಗ್ ವಿವಿಗಳಿಂದ 24 ಆಫರ್‌ಗಳು ಬಂದಿವೆ.

ಪ್ರತಿಷ್ಠಿತ ಸ್ಕಾಲರ್‌ಶಿಪ್‌ಗಳ ಸುರಿಮಳೆ

ರೋಡ್ಸ್, ಗೇಟ್ಸ್ ಕೇಂಬ್ರಿಡ್ಜ್, ಫುಲ್‌ಬ್ರೈಟ್ – ನೆಹರು ಸೇರಿದಂತೆ ವಿಶ್ವದ 19 ಅಂತಾರಾಷ್ಟ್ರೀಯ ಪ್ರತಿಷ್ಠಿತ ಸ್ಕಾಲರ್‌ಶಿಪ್‌ಗಳು ಈ ಬಾರಿ ವಿವಿಯ ವಿದ್ಯಾರ್ಥಿಗಳ ಪಾಲಾಗಿವೆ. 16 ವಿದ್ಯಾರ್ಥಿಗಳು ಪಿಎಚ್‌ಡಿ ಪ್ರವೇಶ ಪಡೆದಿದ್ದು, ಅದರಲ್ಲಿ 12 ಮಂದಿಗೆ ವಿದೇಶದಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಲಭ್ಯವಾಗಿದೆ.

ಈ ಅಮೋಘ ಸಾಧನೆಯ ಬಗ್ಗೆ ಮಾತನಾಡಿದ ವಿವಿಯ ಕೆರಿಯರ್ ಅಡ್ವಾನ್ಸ್‌ಮೆಂಟ್ ವಿಭಾಗದ ಉಪಾಧ್ಯಕ್ಷೆ ಪ್ರಿಯಾಂಕಾ ಚಂಧೋಕ್, “ವಿದ್ಯಾರ್ಥಿಗಳ ಪ್ರತಿಭೆ ಹಾಗೂ ವಿವಿಧ ಕಂಪನಿಗಳ ಜೊತೆಗಿನ ನಮ್ಮ ದೀರ್ಘಕಾಲದ ಉತ್ತಮ ಬಾಂಧವ್ಯ ಈ ಶೇ. 100ರಷ್ಟು ಪ್ಲೇಸ್‌ಮೆಂಟ್‌ಗೆ ಕಾರಣವಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಕುಲಪತಿ ಋಷಿಕೇಶ ಟಿ. ಕೃಷ್ಣನ್ ಅವರು, “ನಮ್ಮ ವಿವಿಯ ಬಹುಶಿಸ್ತೀಯ ಶಿಕ್ಷಣ ವ್ಯವಸ್ಥೆಯು ವಿದ್ಯಾರ್ಥಿಗಳನ್ನು ಜಾಗತಿಕ ಮಟ್ಟದ ಪೈಪೋಟಿಗೆ, ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನದ ಜಗತ್ತಿಗೆ ಸಮರ್ಥವಾಗಿ ಸಜ್ಜುಗೊಳಿಸುತ್ತಿದೆ ಎನ್ನುವುದಕ್ಕೆ ಈ ಸಾಧನೆಯೇ ಸಾಕ್ಷಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (49)
    NEET PG 2026 ಫಲಿತಾಂಶ ಪ್ರಕಟ
    September 25, 2026 | 0
  • ಹ್ಮೋ (4)
    CBSE 2027 ಪರೀಕ್ಷೆಗೆ ಸಿದ್ಧತೆ ಶುರು: ವಿದ್ಯಾರ್ಥಿಗಳ LOC ಬಗ್ಗೆ ಮಹತ್ವದ ಸೂಚನೆ
    September 13, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)
    NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್
    September 6, 2026 | 0
  • Your paragraph text (54)
    ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ
    September 1, 2026 | 0
  • Untitled design 2026 08 21T091905.072
    ಆ. 26ಕ್ಕೆ ಟಾಕ್ಸಿಕ್ ಸಿನಿಮಾ ರಿಲೀಸ್: ಇಂದಿನಿಂದ ದೇಶಾದ್ಯಂತ ಟಾಕ್ಸಿಕ್ ಆನ್ಲೈನ್ ಟಿಕೆಟ್ ಬುಕ್ಕಿಂಗ್ ಓಪನ್
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version