ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಆತುರದಿಂದ ನಿರೀಕ್ಷಿಸುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪರೀಕ್ಷಾ ದಿನಾಂಕಗಳನ್ನು ಘೋಷಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಮರ್ಪಕ ಅಂತರ ಮತ್ತು ಸಮಯವನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ: ಫೆಬ್ರವರಿ 28ರಿಂದ ಆರಂಭ
2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಆರಂಭವಾಗಿ ಮಾರ್ಚ್ 17ರವರೆಗೆ ನಡೆಯಲಿವೆ. ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿವೆ.
ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ:
-
ಫೆಬ್ರವರಿ 28 – ಕನ್ನಡ, ಅರೇಬಿಕ್
-
ಮಾರ್ಚ್ 2 – ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
-
ಮಾರ್ಚ್ 3 – ಇಂಗ್ಲೀಷ್
-
ಮಾರ್ಚ್ 4 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
-
ಮಾರ್ಚ್ 5 – ಇತಿಹಾಸ
-
ಮಾರ್ಚ್ 6 – ಭೌತಶಾಸ್ತ್ರ
-
ಮಾರ್ಚ್ 7 – ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
-
ಮಾರ್ಚ್ 9 – ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
-
ಮಾರ್ಚ್ 10 – ಅರ್ಥಶಾಸ್ತ್ರ
-
ಮಾರ್ಚ್ 11 – ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
-
ಮಾರ್ಚ್ 12 – ಹಿಂದಿ
-
ಮಾರ್ಚ್ 13 – ರಾಜ್ಯಶಾಸ್ತ್ರ
-
ಮಾರ್ಚ್ 14 – ಲೆಕ್ಕಶಾಸ್ತ್ರ, ಗಣಿತ
-
ಮಾರ್ಚ್ 16 – ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
-
ಮಾರ್ಚ್ 17 – ಹಿಂದುಸ್ತಾನಿ ಸಂಗೀತ, ರೀಟೇಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18ರಿಂದ ಆರಂಭವಾಗಿ ಏಪ್ರಿಲ್ 2ರವರೆಗೆ ನಡೆಯಲಿವೆ. ಪರೀಕ್ಷೆ ಬೆಳಗ್ಗೆ 10:00 ರಿಂದ ಮಧ್ಯಾಹ್ನ 1:15ರವರೆಗೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಹೆಚ್ಚುವರಿ ಸಮಯ ನೀಡಲಾಗುತ್ತದೆ.
SSLC ಪರೀಕ್ಷೆ-1 ವೇಳಾಪಟ್ಟಿ:
-
ಮಾರ್ಚ್ 18 – ಪ್ರಥಮ ಭಾಷೆ (ಕನ್ನಡ, ಇಂಗ್ಲಿಷ್, ಹಿಂದಿ ಇತ್ಯಾದಿ)
-
ಮಾರ್ಚ್ 23 – ವಿಜ್ಞಾನ
-
ಮಾರ್ಚ್ 25 – ದ್ವಿತೀಯ ಭಾಷೆ (ಇಂಗ್ಲಿಷ್/ಕನ್ನಡ)
-
ಮಾರ್ಚ್ 28 – ಗಣಿತ
-
ಮಾರ್ಚ್ 30 – ತೃತೀಯ ಭಾಷೆ
-
ಏಪ್ರಿಲ್ 2 – ಸಮಾಜ ವಿಜ್ಞಾನ
SSLC ಪರೀಕ್ಷೆ-2 (ಪುನಃ ಪರೀಕ್ಷೆ)
SSLC ಪರೀಕ್ಷೆ-2 ಮೇ 18ರಿಂದ ಮೇ 23ರವರೆಗೆ ನಡೆಯಲಿದೆ.
-
ಮೇ 18 – ಪ್ರಥಮ ಭಾಷೆ
-
ಮೇ 19 – ವಿಜ್ಞಾನ
-
ಮೇ 20 – ದ್ವಿತೀಯ ಭಾಷೆ
-
ಮೇ 21 – ಗಣಿತ
-
ಮೇ 22 – ತೃತೀಯ ಭಾಷೆ
-
ಮೇ 23 – ಸಮಾಜ ವಿಜ್ಞಾನ
ವಿದ್ಯಾರ್ಥಿಗಳಿಗೆ ಮುಖ್ಯ ಸೂಚನೆಗಳು
ಶಿಕ್ಷಣ ಸಚಿವರು ವಿದ್ಯಾರ್ಥಿಗಳಿಗೆ ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಕನಿಷ್ಠ 30 ನಿಮಿಷ ಮೊದಲು ಹಾಜರಾಗಬೇಕು. ಪ್ರವೇಶ ಪತ್ರ (ಹಾಲ್ ಟಿಕೆಟ್) ಕಡ್ಡಾಯವಾಗಿ ತರಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಿಳಿಸಿದ್ದಾರೆ.
ಪರೀಕ್ಷಾ ವೇಳಾಪಟ್ಟಿ ಪ್ರಕಟವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಈಗಿನಿಂದಲೇ ಯೋಜಿತ ರೀತಿಯಲ್ಲಿ ತಯಾರಿ ಆರಂಭಿಸುವುದು ಅಗತ್ಯವಾಗಿದೆ.
