ಮೇ 4ರಂದು ಕರ್ನಾಟಕದಲ್ಲಿ 381 ಕೇಂದ್ರಗಳಲ್ಲಿ NEET ಪರೀಕ್ಷೆ

Film 2025 04 30t110536.054

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4, 2025 ರಂದು ಮಧ್ಯಾಹ್ನ 2:00 ರಿಂದ ಸಂಜೆ 5:00 ಗಂಟೆಯವರೆಗೆ ಕರ್ನಾಟಕ ರಾಜ್ಯದಾದ್ಯಂತ 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಗೆ ಒಟ್ಟು 1,49,000 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ವಿದ್ಯಾರ್ಥಿಗಳಿಗೆ ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಕ್ಕೆ ಅವಕಾಶವಿರುತ್ತದೆ.

ಪರೀಕ್ಷಾ ಕೇಂದ್ರಕ್ಕೆ ತರಬೇಕಾದ ದಾಖಲೆಗಳು

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಈ ಕೆಳಗಿನ ದಾಖಲೆಗಳನ್ನು ತೆಗೆದುಕೊಂಡು ಹಾಜರಾಗಬೇಕು:

ನೊಂದಣಿ ಮತ್ತು ಸುರಕ್ಷತಾ ತಪಾಸಣೆ

ಬೆಳಿಗ್ಗೆ 11:00 ಗಂಟೆಯಿಂದ NTA ವತಿಯಿಂದ ನೇಮಕಗೊಂಡ ಏಜೆನ್ಸಿಗಳು ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಲಿವೆ. ನಿಯೋಜಿತ ಪೊಲೀಸ್ ಸಿಬ್ಬಂದಿಗಳು ವಿದ್ಯಾರ್ಥಿಗಳ ಸುರಕ್ಷತಾ ತಪಾಸಣೆಯನ್ನು (Frisking) ನಡೆಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದಲ್ಲಿ ನೀಡಲಾದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ಧರಿಸಬಾರದ ವಸ್ತುಗಳು

ವಿದ್ಯಾರ್ಥಿಗಳು ಈ ಕೆಳಗಿನ ವಸ್ತುಗಳನ್ನು ಧರಿಸುವಂತಿಲ್ಲ ಅಥವಾ ತರಬಾರದು:

ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ಸಂಖ್ಯೆ ಇರುವ ಕೊಠಡಿಗೆ ನೇರವಾಗಿ ತೆರಳಬೇಕು.

ಪರೀಕ್ಷಾ ವೇಳಾಪಟ್ಟಿ ಮತ್ತು ವ್ಯವಸ್ಥೆಗಳು

ಪರೀಕ್ಷೆಯು ಮಧ್ಯಾಹ್ನ 2:00 ರಿಂದ ಸಂಜೆ 5:00 ಗಂಟೆಯವರೆಗೆ ನಡೆಯಲಿದೆ. ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಮ್ಮೆ ಬೆಲ್ ಮೂಲಕ ಸೂಚನೆ ನೀಡಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಈ ಕೆಳಗಿನ ವ್ಯವಸ್ಥೆಗಳನ್ನು ಮಾಡಲಾಗಿದೆ:

ಸುರಕ್ಷತಾ ಕ್ರಮಗಳು

NTA ವತಿಯಿಂದ Frisking ಮತ್ತು JAMMER ಅಳವಡಿಕೆಗಾಗಿ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರು JAMMER ಅಳವಡಿಕೆ ಮತ್ತು Frisking ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ವಿದ್ಯಾರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸಲಾಗುವುದು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕರಿಗೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶವಿರುವುದಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

Exit mobile version