• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ವಿಧಾನ ಪರಿಷತ್ ಚುನಾವಣೆ ಫಲಿತಾಂಶ: 4 ಕ್ಷೇತ್ರಗಳಲ್ಲಿ NDA ಮೇಲುಗೈ, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 27, 2026 - 7:19 pm
in ಎಲೆಕ್ಷನ್, ಕರ್ನಾಟಕ
0 0
0
“ಧಮ್ ಇದ್ರೆ ನಾನು ಹೊರಗೆ ಬಂದ್ಮೇಲೆ ಮಾತಾಡಲಿ” ಜೈಲಿನಿಂದಲೇ ಧನ್ವೀರ್ ಗೆ ದರ್ಶನ್ ವಾರ್ನಿಂಗ್ (1)

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ (ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳು) ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳಗೊಂಡ ಎನ್‌ಡಿಎ ಮೈತ್ರಿಕೂಟ ಭಾರೀ ಮುನ್ನಡೆ ಸಾಧಿಸಿದೆ. ಆಡಳಿತರೂಢ ಕಾಂಗ್ರೆಸ್ ಭಾರೀ ಹಿನ್ನಡೆಯಾಗಿದೆ.

ಅಕ್ಟೋಬರ್ 23ರಂದು ನಡೆದಿದ್ದ ಮತದಾನದ ಬಳಿಕ ಅಂತಿಮ ಫಲಿತಾಂಶಕ್ಕಾಗಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿತ್ತು. ನಾಲ್ಕರ ಪೈಕಿ ಮೂರರಲ್ಲಿ ಬಿರುಸಿನ ಮತ ಎಣಿಕೆ ನಡೆದಿದ್ದು, ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ತಾಂತ್ರಿಕ ಕಾರಣದಿಂದ ಎಣಿಕೆ ತಡವಾಗಿದೆ.

RelatedPosts

ಆರೋಗ್ಯ ಸೇವೆ ದಕ್ಷತೆ ಹೆಚ್ಚಿಸಲು ತಜ್ಞ ವೈದ್ಯರ ಸಮಿತಿ ರಚನೆ: ಯು. ಟಿ. ಖಾದರ್

ಕೆಂಪೇಗೌಡ ಏರ್‌ಪೋರ್ಟ್‌ನ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಬಂತು ‘ಡಿಜಿ ಯಾತ್ರಾ’!

SIR ಅಂತಿಮ ಮತದಾರರ ಪಟ್ಟಿ ಪ್ರಕಟ; ಬೆಂಗಳೂರಿನಲ್ಲಿ ಅರ್ಧಕ್ಕರ್ಧ ಮತದಾರರೇ ಡಿಲೀಟ್

ಪರಮೇಶ್ವರ್‌ ಹೃದಯ ಬಡಿತ ಹೆಚ್ಚಾಗಿತ್ತು, ಭಯವಪಡುವ ಅಗತ್ಯವಿಲ್ಲ: ಇಂದು ಸಂಜೆ ಡಿಸ್ಚಾರ್ಜ್

ADVERTISEMENT
ADVERTISEMENT

ಬೆಂಗಳೂರು ಶಿಕ್ಷಕರ ಕ್ಷೇತ್ರ: ರಂಗನಾಥ್ ಗೆಲುವು

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ (ಎನ್‌ಡಿಎ) ಅಭ್ಯರ್ಥಿ ಎ.ಪಿ. ರಂಗನಾಥ್ 899 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅವರು ಒಟ್ಟು 10,810 ಮತಗಳನ್ನು ಪಡೆದು ಗೆದ್ದು ಬೀಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಭಾರಿ ಮುಖಭಂಗ ಅನುಭವಿಸಿದ್ದು, ಸೋಲು ಕಂಡಿದ್ದಾರೆ.

ಎರಡನೇ ಸುತ್ತಿನಲ್ಲಿ ಒಟ್ಟು 7 ಸಾವಿರ ಮತಗಳ ಎಣಿಕೆ ನಡೆದಿದ್ದು, 6,363 ಮತಗಳು ಸಿಂಧು ಹಾಗೂ 637 ಮತಗಳು ಅಸಿಂಧು ಎಂದು ಪರಿಗಣಿಸಲಾಗಿತ್ತು. 2ನೇ ಸುತ್ತಿನ ಬಳಿಕ ರಂಗನಾಥ್ 3,317 ಮತಗಳನ್ನು ಪಡೆದಿದ್ದರೆ, ಪುಟ್ಟಣ್ಣ 2,956 ಮತಗಳನ್ನು ಪಡೆದಿದ್ದರು.

ಈಶಾನ್ಯ ಶಿಕ್ಷಕರ ಕ್ಷೇತ್ರ: ಶಶೀಲ್ ನಮೋಶಿ ಗೆಲುವು

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ವಿಜಯದತ್ತ ಧಾಪುಗಾಲಿಟ್ಟಿದ್ದು, ಮೊದಲ ಸುತ್ತಿನಲ್ಲಿ 7,239 ಹಾಗೂ ಎರಡನೇ ಸುತ್ತಿನಲ್ಲಿ 7,311 ಸೇರಿ ಒಟ್ಟು 14,540 ಮತಗಳನ್ನು ಪಡೆದಿದ್ದಾರೆ. ಅಧಿಕೃತ ಘೋಷಣೆ ಬಾಕಿ ಇದ್ದು, ಮತ ಎಣಿಕೆ ಕೇಂದ್ರದ ಎದುರು ಕಾರ್ಯಕರ್ತರ ವಿಜಯೋತ್ಸವ ನಡೆಯುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮತ್ತೂರ್ ಸೋಲು ಕಂಡಿದ್ದಾರೆ. ಮೊದಲ ಸುತ್ತಿನಲ್ಲಿ ಶಶೀಲ್ ನಮೋಶಿ 1,536 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರು. ಮೊದಲ ಸುತ್ತಿನ 14 ಸಾವಿರ ಮತಗಳ ಎಣಿಕೆ ಪೂರ್ಣಗೊಂಡಿದ್ದು, 200ಕ್ಕೂ ಹೆಚ್ಚು ಮತಗಳು ಅಸಿಂಧು ಎಂದು ಘೋಷಣೆಯಾಗಿವೆ.

ಪಶ್ಚಿಮ ಪದವೀಧರರ ಕ್ಷೇತ್ರ: ಸಂಕನೂರ ಮುನ್ನಡೆ

ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತ ಎಣಿಕೆ ಕಾರ್ಯ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಒಟ್ಟು 14,001 ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಸಂಕನೂರ 6,459 ಮತಗಳು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ 4,394 ಮತಗಳನ್ನು ಪಡೆದುಕೊಂಡಿದ್ದಾರೆ. ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ. ಅವರು 2,065 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಎರಡನೇ ಸುತ್ತಿನ ಅಂತ್ಯಕ್ಕೂ ಅವರು ಮುನ್ನಡೆ ಉಳಿಸಿಕೊಂಡಿದ್ದಾರೆ.

ಆಗ್ನೇಯ ಪದವೀಧರರ ಕ್ಷೇತ್ರ: ಸುರೇಶ್ ಮುನ್ನಡೆ

ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ಹಿನ್ನಡೆ ಅನುಭವಿಸಿದ್ದಾರೆ. ತಾಂತ್ರಿಕ ಕಾರಣದಿಂದ ಈ ಕ್ಷೇತ್ರದ ಮತ ಎಣಿಕೆ ತಡವಾಗಿದ್ದು, ಅಂತಿಮ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಕ್ಷೇತ್ರವಾರು ಫಲಿತಾಂಶದ ಪಟ್ಟಿ

ಕ್ರ.ಸಂ. ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎನ್‌ಡಿಎ (ಬಿಜೆಪಿ/ಜೆಡಿಎಸ್) ಅಭ್ಯರ್ಥಿ
1 ಬೆಂಗಳೂರು ಶಿಕ್ಷಕರ ಕ್ಷೇತ್ರ ಪುಟ್ಟಣ್ಣ – ಸೋಲು ಎ.ಪಿ. ರಂಗನಾಥ್ – ಗೆಲುವು
2 ಪಶ್ಚಿಮ ಪದವೀಧರರ ಕ್ಷೇತ್ರ ಮೋಹನ್ ಲಿಂಬಿಕಾಯಿ – ಹಿನ್ನಡೆ ಎಸ್.ವಿ. ಸಂಕನೂರ – ಮುನ್ನಡೆ
3 ಈಶಾನ್ಯ ಶಿಕ್ಷಕರ ಕ್ಷೇತ್ರ ಶರಣಪ್ಪ ಮತ್ತೂರ್ – ಹಿನ್ನಡೆ ಶಶೀಲ್ ಜಿ. ನಮೋಶಿ – ಗೆಲುವು
4 ಆಗ್ನೇಯ ಪದವೀಧರರ ಕ್ಷೇತ್ರ ಶಶಿ ಹುಲಿಕುಂಟೆಮಠ – ಹಿನ್ನಡೆ ಕೆ.ಎಂ. ಸುರೇಶ್ – ಮುನ್ನಡೆ
ಬಿಜೆಪಿ ಮೇಲುಗೈ

ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳು (ಪಶ್ಚಿಮ ಪದವೀಧರ, ಈಶಾನ್ಯ ಶಿಕ್ಷಕ, ಆಗ್ನೇಯ ಪದವೀಧರ) ಈ ಹಿಂದೆ ಬಿಜೆಪಿಯ ವಶದಲ್ಲಿದ್ದವು. ಬೆಂಗಳೂರು ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ಬಳಿ ಇತ್ತು. ಈ ಚುನಾವಣೆಯು ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನ ಜನಪ್ರಿಯತೆ ಹಾಗೂ ವಿರೋಧ ಪಕ್ಷಗಳಾದ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಹೊಂದಾಣಿಕೆಗೆ ಒಂದು ಪ್ರಮುಖ ಪರೀಕ್ಷೆಯಾಗಿದೆ. ಚುನಾವಣಾ ಆಯೋಗವು ಮತ ಎಣಿಕೆ ಮುಗಿದ ತಕ್ಷಣವೇ ಅಧಿಕೃತವಾಗಿ ವಿಜೇತರನ್ನು ಘೋಷಿಸಲಿದೆ.

 ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭಾರೀ ಮೇಲುಗೈ ಸಾಧಿಸಿದ್ದು, ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎ.ಪಿ. ರಂಗನಾಥ್ ಗೆಲುವು ಸಾಧಿಸಿದ್ದರೆ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶೀಲ್ ನಮೋಶಿ ಗೆಲುವಿನತ್ತ ಸಾಗಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

“ಧಮ್ ಇದ್ರೆ ನಾನು ಹೊರಗೆ ಬಂದ್ಮೇಲೆ ಮಾತಾಡಲಿ” ಜೈಲಿನಿಂದಲೇ ಧನ್ವೀರ್ ಗೆ ದರ್ಶನ್ ವಾರ್ನಿಂಗ್ (1)

ವಿಧಾನ ಪರಿಷತ್ ಚುನಾವಣೆ ಫಲಿತಾಂಶ: 4 ಕ್ಷೇತ್ರಗಳಲ್ಲಿ NDA ಮೇಲುಗೈ, ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

by ಶಾಲಿನಿ ಕೆ. ಡಿ
October 27, 2026 - 7:19 pm
0

“ಧಮ್ ಇದ್ರೆ ನಾನು ಹೊರಗೆ ಬಂದ್ಮೇಲೆ ಮಾತಾಡಲಿ” ಜೈಲಿನಿಂದಲೇ ಧನ್ವೀರ್ ಗೆ ದರ್ಶನ್ ವಾರ್ನಿಂಗ್

“ಧಮ್ ಇದ್ರೆ ನಾನು ಹೊರಗೆ ಬಂದ್ಮೇಲೆ ಮಾತಾಡಲಿ”: ಜೈಲಿನಿಂದಲೇ ಧನ್ವೀರ್‌ಗೆ ದರ್ಶನ್ ವಾರ್ನಿಂಗ್

by ಶಾಲಿನಿ ಕೆ. ಡಿ
October 27, 2026 - 6:27 pm
0

Untitled Design 2026 10 27T181437.191

ಧನ್ವೀರ್ ವಿವಾದದ ಬೆನ್ನಲ್ಲೇ ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮೀ, ಝೈದ್ ಖಾನ್

by ಶಾಲಿನಿ ಕೆ. ಡಿ
October 27, 2026 - 6:16 pm
0

Untitled Design 2026 10 27T180734.779

‘ಕಿಂಗ್’ ಚಿತ್ರದ ಪವರ್‌ಫುಲ್ ಹೊಸ ಪೋಸ್ಟರ್ ರಿವೀಲ್ ಮಾಡಿದ ಶಾರುಖ್ ಖಾನ್

by ಶಾಲಿನಿ ಕೆ. ಡಿ
October 27, 2026 - 6:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version