ಮಹಿಳೆಗೆ ಚಾಕು ತೋರಿಸಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

Untitled design 2025 05 01t144014.717

ವರದಿ: ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ಭಯಾನಕ ದರೋಡೆ ನಡೆದಿದೆ. ಒಂಟಿಯಾಗಿ ಮನೆಯಲ್ಲಿದ್ದ ವೇದಾವತಿ ಎಂಬ ಮಹಿಳೆಯ ಮನೆಗೆ ದುಷ್ಕರ್ಮಿಯೊಬ್ಬನು ನುಗ್ಗಿ, ಚಾಕು ತೋರಿಸಿ ಬೆದರಿಸಿ ಚಿನ್ನಾಭರಣ ದೋಚಿದ ಘಟನೆ ನಡೆದಿದೆ.

ಮಹಿಳೆ ವೇದಾವತಿ ತಿಳಿಸಿದಂತೆ ದರೋಡೆಗೆ ಬಂದಿದ್ದ ದುಷ್ಕರ್ಮಿಯು ಸುಮಾರು 25-30 ವರ್ಷದವನಾಗಿದ್ದು, ಸುಮಾರು 6 ಅಡಿ ಎತ್ತರ, ಕಪ್ಪು ಮೈಬಣ್ಣ, ಕೋಲು ಮುಖ, ತಲೆಗೂದಲಿಗೆ ಮೆಹೆಂದಿ ಬಣ್ಣ ಇದ್ದು, ಮುಖಕ್ಕೆ ಕಪ್ಪು ಮಾಸ್ಕ್ ಹಾಕಿಕೊಂಡಿದ್ದನು ಎಂದು ತಿಳಿಸಿದ್ದಾರೆ.

ಮನೆಯವರು ತುಂಬಾ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಸಮಯದಲ್ಲಿ ಈ ಕೃತ್ಯ ನಡೆದಿದ್ದು, ವೇದಾವತಿಯ ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಹೊರವಲಯದಲ್ಲಿ ಕಳ್ಳತನ ಮತ್ತು ದರೋಡೆ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

ನೆಲಮಂಗಲ ಗ್ರಾಮಾಂತರ ವ್ಯಾಪ್ತಿಯಲ್ಲಿ ಘಟನೆ ನಡೆದಿರುವುದರಿಂದ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಕಲಂ 308(2) ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

| Reported by: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ
Exit mobile version