• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 21, 2026 - 4:28 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ಔಷಧ ಮಾಫಿಯಾಗೆ

ಬೆಂಗಳೂರು: ರಾಜ್ಯದಲ್ಲಿ ಬೆಳಕಿಗೆ ಬಂದಿರುವ ನಕಲಿ ಔಷಧ ದಂಧೆ ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆದಂಡವಾಗಿದ್ದು, ಸರ್ಕಲ್-1ರ ಸಹಾಯಕ ಔಷಧ ನಿಯಂತ್ರಕ (ADC) ಓಂಕಾರೇಶ್ವರ್ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ. ಚಾಮರಾಜಪೇಟೆಯ ಕೃಪಾ ಹೆಲ್ತ್ ಕೇರ್‌ಗೆ ಸಂಬಂಧಿಸಿದ ನಕಲಿ ಔಷಧ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳದೆ ಕರ್ತವ್ಯಲೋಪ ಎಸಗಿದ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಓಂಕಾರೇಶ್ವರ್ ವಿರುದ್ಧ ನಕಲಿ ಔಷಧ ಪ್ರಕರಣದಲ್ಲಿ ತಮ್ಮ ವ್ಯಾಪ್ತಿಯಲ್ಲಿನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸದ ಆರೋಪ ಕೇಳಿಬಂದಿತ್ತು. ಪ್ರಕರಣದ ತನಿಖೆ ಮುಂದುವರಿದಿರುವ ನಡುವೆಯೇ ಸರ್ಕಾರ ಅಮಾನತು ಆದೇಶ ಹೊರಡಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ. ನಕಲಿ ಔಷಧ ದಂಧೆಯ ಹಿಂದೆ ಇನ್ನಷ್ಟು ಮಂದಿ ಅಧಿಕಾರಿಗಳು, ವಿತರಕರು ಅಥವಾ ಸಂಬಂಧಿತ ವ್ಯಕ್ತಿಗಳ ಪಾತ್ರವಿದೆಯೇ ಎಂಬುದರ ಬಗ್ಗೆಯೂ ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ.

RelatedPosts

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

ಸದನದಲ್ಲಿ ‘ವಂದೇ ಮಾತರಂ’ ಗದ್ದಲ: ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

ಐದು ತಿಂಗಳ ಬಳಿಕ ಪ್ರವಾಸಿಗರಿಗೆ ಮುಕ್ತವಾದ ದುಬಾರೆ ಸಾಕಾನೆ ಶಿಬಿರ; ಹೊಸ ನಿಯಮ ಜಾರಿ

ADVERTISEMENT
ADVERTISEMENT

ಈ ನಡುವೆ ನಕಲಿ ಔಷಧಗಳು ವಿವಿಧ ಆಸ್ಪತ್ರೆಗಳಿಗೂ ಪೂರೈಕೆಯಾಗಿರುವ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಕಲಿ ಔಷಧ ಜಾಲ ಯಾವೆಲ್ಲ ಆಸ್ಪತ್ರೆಗಳಿಗೆ ವ್ಯಾಪಿಸಿತ್ತು ಎಂಬುದನ್ನು ಎಸ್‌ಐಟಿ ಅಧಿಕಾರಿಗಳು ಪತ್ತೆಹಚ್ಚುತ್ತಿದ್ದಾರೆ. ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಆಸ್ಪತ್ರೆಗಳ ಫಾರ್ಮಸಿಗಳ ಮೇಲೂ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಬೆಂಗಳೂರು ಸೇರಿದಂತೆ 15ಕ್ಕೂ ಹೆಚ್ಚು ಆಸ್ಪತ್ರೆಗಳ ಫಾರ್ಮಸಿಗಳಿಗೆ ನೋಟಿಸ್ ನೀಡಲಾಗಿದೆ. ನಿಯಮ ಉಲ್ಲಂಘನೆ ಕಂಡುಬಂದಿರುವ ಫಾರ್ಮಸಿಗಳ ಪರವಾನಿಗೆ ರದ್ದುಪಡಿಸುವ ಕ್ರಮವನ್ನೂ ಕೈಗೊಳ್ಳಲಾಗಿದೆ.

ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಔಷಧಗಳು, ಜೀವ ರಕ್ಷಕ ಔಷಧಗಳು ಹಾಗೂ ಐಸಿಯುನಲ್ಲಿ ಬಳಸುವ ಇಂಜೆಕ್ಷನ್‌ಗಳಂತಹ ಮಹತ್ವದ ಔಷಧಗಳು ನಕಲಿ ಜಾಲದ ಮೂಲಕ ಪೂರೈಕೆಯಾಗಿದ್ದವೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಇಂತಹ ಔಷಧಗಳನ್ನು ಆಸ್ಪತ್ರೆಗಳಿಗೆ ಪೂರೈಸಿದ ಡಿಸ್ಟ್ರಿಬ್ಯೂಟರ್‌ಗಳು ಮತ್ತು ಮೆಡಿಕಲ್ ರೆಪ್ರೆಸೆಂಟೇಟಿವ್‌ಗಳನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಯಾವ ಸಂಸ್ಥೆಗಳು ಔಷಧ ನಿಯಮಗಳನ್ನು ಉಲ್ಲಂಘಿಸಿವೆ? ಯಾವೆಲ್ಲ ಕಡೆ ಔಷಧಗಳ ಗುಣಮಟ್ಟ ಮತ್ತು ಸಂಗ್ರಹಣೆಯ ಮಾನದಂಡಗಳನ್ನು ಪಾಲಿಸಲಾಗಿಲ್ಲ? ನಕಲಿ ಔಷಧಗಳ ಪೂರೈಕೆಯಲ್ಲಿ ಯಾರ ಪಾತ್ರವಿದೆ? ಎಂಬ ಹಲವು ಆಯಾಮಗಳಲ್ಲಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರೆಂದು ಕಂಡುಬಂದರೆ ಆಸ್ಪತ್ರೆಗಳ ಫಾರ್ಮಸಿ ಪರವಾನಿಗೆಯಷ್ಟೇ ಅಲ್ಲದೆ ಸಂಬಂಧಿತ ಡಿಸ್ಟ್ರಿಬ್ಯೂಟರ್‌ಗಳ ಲೈಸೆನ್ಸ್ ರದ್ದುಗೊಳಿಸುವ ಸಾಧ್ಯತೆಯೂ ಇದೆ.

ಇದರ ನಡುವೆ ವ್ಯಾಪಕ ಡಿಸ್ಕೌಂಟ್ ನೀಡುವ ಮೂಲಕ ಔಷಧ ಮಾರಾಟ ಮಾಡುತ್ತಿರುವ ಕಂಪನಿಗಳ ಮೇಲೂ ಆಹಾರ ಮತ್ತು ಔಷಧ ಆಡಳಿತ ಇಲಾಖೆ (FDA) ಕಣ್ಣಿಟ್ಟಿದೆ. ಇಂತಹ ಸಂಸ್ಥೆಗಳು ಮಾರಾಟ ಮಾಡುತ್ತಿರುವ ಔಷಧಗಳ ಗುಣಮಟ್ಟವನ್ನು ರ್ಯಾಂಡಮ್ ಸ್ಯಾಂಪಲ್‌ಗಳ ಮೂಲಕ ಪರೀಕ್ಷಿಸಲು ಇಲಾಖೆ ಮುಂದಾಗಿದೆ. ಕಡಿಮೆ ಬೆಲೆಗೆ ಔಷಧ ಸಿಗುತ್ತದೆ ಎಂಬ ಕಾರಣಕ್ಕೆ ಗ್ರಾಹಕರು ಗುಣಮಟ್ಟ ಮತ್ತು ಮೂಲದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂಬುದು ಅಧಿಕಾರಿಗಳ ಕಾಳಜಿಯಾಗಿದೆ.

ಮತ್ತೊಂದೆಡೆ ಆನ್‌ಲೈನ್ ಔಷಧ ಮಾರಾಟದ ಬಗ್ಗೆಯೂ ಹಲವು ಪ್ರಶ್ನೆಗಳು ಎದ್ದಿವೆ. ವೈದ್ಯರ ಪ್ರಿಸ್ಕ್ರಿಪ್ಷನ್ ಅಗತ್ಯವಿರುವ ಹಲವು ಔಷಧಗಳು ಆನ್‌ಲೈನ್ ಮೂಲಕ ಆರ್ಡರ್ ಮಾಡುವ ಸಂದರ್ಭದಲ್ಲಿ ಸೂಕ್ತವಾಗಿ ಪರಿಶೀಲನೆಯಾಗುತ್ತಿಲ್ಲ ಎಂಬ ಆರೋಪಗಳಿವೆ. ಕೆಲ ಸಂದರ್ಭಗಳಲ್ಲಿ ವೈದ್ಯರು ಬರೆದಿರುವ ಔಷಧದ ಬದಲಿಗೆ ಪರ್ಯಾಯ ಬ್ರ್ಯಾಂಡ್ ಅಥವಾ ಬೇರೆ ಔಷಧದ ಆಯ್ಕೆಯನ್ನು ಗ್ರಾಹಕರಿಗೆ ಸೂಚಿಸಲಾಗುತ್ತಿದೆ ಎಂಬ ದೂರುಗಳೂ ಕೇಳಿಬಂದಿವೆ.

ವೈದ್ಯರ ಸಲಹೆಯಿಲ್ಲದೆ ಅಥವಾ ಪ್ರಿಸ್ಕ್ರಿಪ್ಷನ್ ಪರಿಶೀಲನೆ ಇಲ್ಲದೆ ಔಷಧ ಬದಲಾವಣೆಯಾಗುವುದರಿಂದ ರೋಗಿಯ ಚಿಕಿತ್ಸೆಯ ಪರಿಣಾಮಕಾರಿತ್ವ ಹಾಗೂ ಸುರಕ್ಷತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಭಾರಿ ಡಿಸ್ಕೌಂಟ್ ಜಾಹೀರಾತುಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿರುವ ಔಷಧ ಮಾರಾಟ ವ್ಯವಸ್ಥೆಗಳ ಮೇಲೂ FDA ನಿಯಂತ್ರಣ ಬಿಗಿಗೊಳಿಸಲು ಮುಂದಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 21T165424.207

ಟಾಸ್‌ ಎಲ್ಲೆಡೆ ಹೌಸ್‌‌ಫುಲ್..ಸೆಲೆಬ್ರಿಟಿಗಳೂ ದಿಲ್‌ಖುಷ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 4:54 pm
0

Untitled design 2026 09 21T163803.148

ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್

by ಶಾಲಿನಿ ಕೆ. ಡಿ
September 21, 2026 - 4:42 pm
0

ಔಷಧ ಮಾಫಿಯಾಗೆ

ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್

by ಶಾಲಿನಿ ಕೆ. ಡಿ
September 21, 2026 - 4:28 pm
0

ಸದನದಲ್ಲಿ ‘ವಂದೇ ಮಾತರಂ’ ಗದ್ದಲ ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು

ಸದನದಲ್ಲಿ ‘ವಂದೇ ಮಾತರಂ’ ಗದ್ದಲ: ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು

by ಶಾಲಿನಿ ಕೆ. ಡಿ
September 21, 2026 - 4:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T163803.148
    ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ; ಗುಜರಾತ್‌ನಲ್ಲಿ ಹೈ ಅಲರ್ಟ್
    September 21, 2026 | 0
  • ಸದನದಲ್ಲಿ ‘ವಂದೇ ಮಾತರಂ’ ಗದ್ದಲ ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು
    ಸದನದಲ್ಲಿ ‘ವಂದೇ ಮಾತರಂ’ ಗದ್ದಲ: ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು
    September 21, 2026 | 0
  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version