• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸದನದಲ್ಲಿ ‘ವಂದೇ ಮಾತರಂ’ ಗದ್ದಲ: ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 21, 2026 - 4:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಸದನದಲ್ಲಿ ‘ವಂದೇ ಮಾತರಂ’ ಗದ್ದಲ ಪೂರ್ಣ ಗೀತೆ ಹಾಡಿದ ಬಿಜೆಪಿ ಸದಸ್ಯರು

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮೂರು ದಿನಗಳ ವಿಶೇಷ ಅಧಿವೇಶನದ ಮೊದಲ ದಿನವೇ ‘ವಂದೇ ಮಾತರಂ’ ಗೀತೆಯ ಗಾಯನದ ವಿಚಾರವಾಗಿ ವಿಧಾನ ಪರಿಷತ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು. ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿರುವ ಸರ್ಕಾರದ ನಿಲುವನ್ನು ಬಿಜೆಪಿ ಸದಸ್ಯರು ಪ್ರಶ್ನಿಸಿದರೆ, ಸರ್ಕಾರದ ಕಾರ್ಯಕ್ರಮಗಳಲ್ಲಿ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. 

ವಿಶೇಷ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ‘ವಂದೇ ಮಾತರಂ’ ಗೀತೆಯನ್ನು ಪ್ರಸ್ತುತಪಡಿಸಲಾಯಿತು. ಅಧಿಕೃತ ಗಾಯನ ಎರಡು ಚರಣಗಳ ಬಳಿಕ ಸ್ಥಗಿತಗೊಂಡಿತ್ತು. ಇದರಿಂದ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಉಳಿದ ಚರಣಗಳನ್ನು ತಾವೇ ಹಾಡಲು ಮುಂದಾದರು. ವಿಧಾನಸಭೆಯಲ್ಲೂ ಇದೇ ರೀತಿಯ ಬೆಳವಣಿಗೆ ನಡೆದಿದ್ದು, ಬಿಜೆಪಿ ಸದಸ್ಯರು ಪೂರ್ಣ ಗೀತೆಯನ್ನು ಹಾಡಿ ಸರ್ಕಾರದ ನಿರ್ಧಾರದ ವಿರುದ್ಧ ಘೋಷಣೆ ಕೂಗಿದರು.

RelatedPosts

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್

ಕಸ್ತೂರಿ ರಂಗನ್ ವರದಿ ವಿರೋಧಿ ನಿರ್ಣಯ ಮಂಡನೆ: ಸರ್ವಾನುಮತದಿಂದ ನಿರ್ಣಯ ಅಂಗಿಕಾರ

ಖರ್ಚಿಗೆ ಹಣ ಕೊಡದ ತಂದೆ; ಕೋಪದಲ್ಲಿ ಮಗನಿಂದಲೇ ಬರ್ಬರ ಹ*ತ್ಯೆ

ಕಾಗವಾಡವನ್ನು ಬರಪೀಡಿತ ತಾಲೂಕು ಮಾಡಿ: ರೈತರ ಆಕ್ರೋಶ

ADVERTISEMENT
ADVERTISEMENT

ಈ ವಿಚಾರವಾಗಿ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂಬ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂದು ಹೇಳಿದರು. ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಪ್ರಮುಖ ಸಾಂವಿಧಾನಿಕ ಗಣ್ಯರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಮಾತ್ರ ಪೂರ್ಣ ಗೀತೆಯನ್ನು ಹಾಡಲಾಗುತ್ತದೆ. ಉಳಿದ ಸರ್ಕಾರದ ಕಾರ್ಯಕ್ರಮಗಳಲ್ಲಿ ಎರಡು ಚರಣಗಳ ಗಾಯನಕ್ಕೆ ಮಾತ್ರ ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು.

ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ‘ವಂದೇ ಮಾತರಂ’ ಗೀತೆಯನ್ನು ಪೂರ್ಣವಾಗಿ ಹಾಡದ ಸರ್ಕಾರದ ನಿಲುವನ್ನು ಪ್ರಶ್ನಿಸಿ ಘೋಷಣೆಗಳನ್ನು ಕೂಗಿದರು. ಈ ವಿಚಾರ ಸದನದಲ್ಲಿ ಮತ್ತಷ್ಟು ಗದ್ದಲಕ್ಕೆ ಕಾರಣವಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಮಧ್ಯಪ್ರವೇಶಿಸಿದರು. ಈ ಹಿಂದೆ ಸದನದಲ್ಲಿ ಎರಡು ಚರಣಗಳನ್ನು ಮಾತ್ರ ಹಾಡಲಾಗುತ್ತಿತ್ತು. ಬಿಜೆಪಿ ಸದಸ್ಯರು ಸಭಾಪತಿ ಸ್ಥಾನದಲ್ಲಿದ್ದ ಅವಧಿಯಲ್ಲಿ ಪೂರ್ಣ ಗೀತೆಯನ್ನು ಹಾಡುವ ಪದ್ಧತಿ ಆರಂಭವಾಯಿತು ಎಂದು ಅವರು ಹೇಳಿದರು. ಅಲ್ಲದೆ, ಎರಡು ಚರಣಗಳನ್ನು ಮಾತ್ರ ಏಕೆ ಹಾಡಬೇಕು ಎಂಬುದರ ಕುರಿತು ಸದನದಲ್ಲೇ ಚರ್ಚೆಯಾಗಲಿ ಎಂದು ತಿಳಿಸಿದರು.

ಹರಿಪ್ರಸಾದ್ ಅವರ ಮಾತಿಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ‘ಇದು ಕಾಂಗ್ರೆಸ್ ಕಚೇರಿ ಅಲ್ಲ’ ಎಂದು ಘೋಷಣೆ ಕೂಗಿದ ಸದಸ್ಯರು, ‘ವಂದೇ ಮಾತರಂ’ ಗೀತೆಯನ್ನು ಪೂರ್ಣವಾಗಿ ಹಾಡದಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು.

ಇದೇ ವೇಳೆ ಸಭಾಪತಿ ಪೀಠದ ಅಧಿಕಾರದ ಬಗ್ಗೆಯೂ ಬಿಜೆಪಿ ಸದಸ್ಯರು ಪ್ರಶ್ನೆಗಳನ್ನು ಎತ್ತಿದರು. ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕಾರದ ಆದೇಶದಂತೆ ಕಾರ್ಯಕ್ರಮಗಳಲ್ಲಿ ಎರಡು ಚರಣಗಳನ್ನು ಹಾಡಲಾಗುತ್ತಿದೆ ಎಂದು ಹೇಳಿದ ಹಿನ್ನೆಲೆ, ಬಿಜೆಪಿ ಸದಸ್ಯರು ಸಭಾಪತಿಗಳು ಈ ವಿಚಾರದಲ್ಲಿ ಯಾವ ಪಾತ್ರ ವಹಿಸಬಹುದು ಎಂಬುದನ್ನು ಪ್ರಶ್ನಿಸಿದರು. ಸಿ.ಟಿ. ರವಿ ಸೇರಿದಂತೆ ಬಿಜೆಪಿ ಸದಸ್ಯರು ಸಭಾಪತಿ ಪೀಠದ ಬಗ್ಗೆ ಪ್ರಶ್ನೆಗಳನ್ನು ಮುಂದಿಟ್ಟರು. ಛಲವಾದಿ ನಾರಾಯಣಸ್ವಾಮಿ ಕೂಡ ಈ ವಿಚಾರದಲ್ಲಿ ಸಭಾಪತಿಗಳಿಂದ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದರು.

ಈ ನಡುವೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ಮುಂದುವರಿಯಿತು. ‘ವಂದೇ ಮಾತರಂ’ ಗೀತೆಯ ಎಷ್ಟು ಚರಣಗಳನ್ನು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಡಬೇಕು ಎಂಬ ವಿಚಾರ ಇದೀಗ ವಿಧಾನ ಪರಿಷತ್‌ನಲ್ಲೂ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕ ಸರ್ಕಾರ ಸೆಪ್ಟೆಂಬರ್ 8ರಂದು ಹೊರಡಿಸಿರುವ ಆದೇಶದಂತೆ ರಾಜ್ಯ ಸರ್ಕಾರದ ಕಾರ್ಯಕ್ರಮಗಳು ಹಾಗೂ ಅಧಿಕೃತ ಸಮಾರಂಭಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಹಾಡಬೇಕು ಎಂದು ಸೂಚಿಸಲಾಗಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಇದೇ ನಿರ್ಧಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ಸಲ್ಲಿಕೆಯಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (1)

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್

by ಕವಿತಾ
September 22, 2026 - 7:27 pm
0

Your paragraph text

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌

by ಕವಿತಾ
September 22, 2026 - 5:58 pm
0

Untitled design (16)

ಕಸ್ತೂರಿ ರಂಗನ್ ವರದಿ ವಿರೋಧಿ ನಿರ್ಣಯ ಮಂಡನೆ: ಸರ್ವಾನುಮತದಿಂದ ನಿರ್ಣಯ ಅಂಗಿಕಾರ

by ಕವಿತಾ
September 22, 2026 - 5:40 pm
0

Untitled design (15)

ಖರ್ಚಿಗೆ ಹಣ ಕೊಡದ ತಂದೆ; ಕೋಪದಲ್ಲಿ ಮಗನಿಂದಲೇ ಬರ್ಬರ ಹ*ತ್ಯೆ

by ಕವಿತಾ
September 22, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version