• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

BRICS ಶೃಂಗಸಭೆಯಲ್ಲಿ 10 ಪ್ರಮುಖ ವಿಷಯಗಳ ಮಂಡಿಸಿದ ಪ್ರಧಾನಿ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 12, 2026 - 4:59 pm
in ದೇಶ, ವಿದೇಶ
0 0
0
ಶಾಕ್ ಕೊಟ್ಟ ನಾನಿ.. (1)

ನವದೆಹಲಿ: ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ 18ನೇ BRICS ಶೃಂಗಸಭೆ ಆರಂಭವಾಗಿದ್ದು, ಜಾಗತಿಕ ರಾಜಕೀಯ ಹಾಗೂ ಆರ್ಥಿಕ ಬೆಳವಣಿಗೆಗಳ ನಡುವೆ ಈ ಸಭೆ ವಿಶೇಷ ಮಹತ್ವ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಸೇರಿದಂತೆ ಹಲವು ರಾಷ್ಟ್ರಗಳ ಪ್ರಮುಖ ನಾಯಕರು ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.

ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, BRICS ಒಕ್ಕೂಟದ ಮುಂದಿನ ಕಾರ್ಯಸೂಚಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಪ್ರಸ್ತಾಪಗಳನ್ನು ಮುಂದಿಟ್ಟರು. ಮಾನವೀಯತೆಗೆ ಮೊದಲ ಆದ್ಯತೆ, ಪರಸ್ಪರ ಸಹಕಾರ ಮತ್ತು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಎಂಬ ತತ್ವಗಳ ಆಧಾರದ ಮೇಲೆ BRICS ಅನ್ನು ಮತ್ತಷ್ಟು ಬಲಪಡಿಸಬೇಕಿದೆ ಎಂದು ಪ್ರಧಾನಿ ಒತ್ತಿ ಹೇಳಿದರು.

RelatedPosts

ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

ಕಾಂಗ್ರೆಸ್ ರ‍್ಯಾಲಿಯಿಂದ ದೆಹಲಿ ವ್ಯಾಪಾರಿಗಳಿಗೆ ₹11 ಸಾವಿರ ಕೋಟಿ ನಷ್ಟ: ಬಿಜೆಪಿ ಕಾರಣ ಎಂದ ರಾಹುಲ್ ಗಾಂಧಿ

ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್

ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್

ADVERTISEMENT
ADVERTISEMENT

BRICS ಯಾವುದೇ ಒಂದು ದೇಶದ ವಿರುದ್ಧದ ವೇದಿಕೆಯಲ್ಲ. ಬದಲಾಗಿ ಸದಸ್ಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ, ಸಹಕಾರವನ್ನು ವಿಸ್ತರಿಸುವ ಮತ್ತು ಜಾಗತಿಕ ಸವಾಲುಗಳಿಗೆ ಒಟ್ಟಾಗಿ ಪರಿಹಾರ ಕಂಡುಕೊಳ್ಳುವ ವೇದಿಕೆಯಾಗಬೇಕು ಎಂದು ಮೋದಿ ಅಭಿಪ್ರಾಯಪಟ್ಟರು. ನಾವೀನ್ಯತೆ, ಸಹಕಾರ ಹಾಗೂ ಸುಸ್ಥಿರ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಭಾರತದ ಅಧ್ಯಕ್ಷತೆಯಲ್ಲಿ ದೇಶದ ವಿವಿಧ ನಗರಗಳಲ್ಲಿ 350ಕ್ಕೂ ಹೆಚ್ಚು ಸಭೆಗಳು ಮತ್ತು ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನು ಮೋದಿ ಪ್ರಸ್ತಾಪಿಸಿದರು. ಸುಮಾರು 30 ನಗರಗಳಲ್ಲಿ BRICS ಸಂಬಂಧಿತ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಒಕ್ಕೂಟದ ಚಟುವಟಿಕೆಗಳನ್ನು ದೇಶದ ವಿವಿಧ ಭಾಗಗಳಿಗೆ ಕೊಂಡೊಯ್ಯಲಾಗುವುದು ಎಂದು ಹೇಳಿದರು. ಭಾರತದ BRICS ಅಧ್ಯಕ್ಷತೆಯನ್ನು ಯಶಸ್ವಿಗೊಳಿಸಲು ಸಹಕಾರ ನೀಡಿದ ಎಲ್ಲ ರಾಷ್ಟ್ರಗಳಿಗೂ ಪ್ರಧಾನಿ ಧನ್ಯವಾದ ಅರ್ಪಿಸಿದರು.

BRICS ಸ್ಥಾಪನೆಯಾಗಿ ಎರಡು ದಶಕಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಶೃಂಗಸಭೆ ವಿಶೇಷ ಮಹತ್ವ ಹೊಂದಿದೆ ಎಂದು ಮೋದಿ ಹೇಳಿದರು. ಮಾನವನ ಜೀವನದಲ್ಲಿ 20ನೇ ವರ್ಷವು ಪರಿಪಕ್ವತೆ ಮತ್ತು ಹೊಸ ಜವಾಬ್ದಾರಿಗಳ ಹಂತಕ್ಕೆ ಪ್ರವೇಶಿಸುವ ಸಮಯ. ಅದೇ ರೀತಿ BRICS ಕೂಡ ಈಗ ತನ್ನ ಪ್ರೌಢಾವಸ್ಥೆಯ ಹಂತಕ್ಕೆ ಪ್ರವೇಶಿಸಿದೆ ಎಂದು ಅವರು ವಿಶ್ಲೇಷಿಸಿದರು.

ಮುಂದಿನ 20 ವರ್ಷಗಳಿಗೆ ಹೊಸ ಹಾಗೂ ಮಹತ್ವಾಕಾಂಕ್ಷೆಯ ಕಾರ್ಯಸೂಚಿ ರೂಪಿಸುವ ಸಮಯ ಬಂದಿದೆ ಎಂದು ಮೋದಿ ಕರೆ ನೀಡಿದರು. ಪ್ರತಿ ವರ್ಷ ಅಧ್ಯಕ್ಷತೆ ಬದಲಾಗುತ್ತಿದ್ದರೂ ಸಂಸ್ಥೆಯ ನಿರಂತರತೆ ಕಾಪಾಡಿಕೊಳ್ಳುವುದು ಅಗತ್ಯ. ಇದಕ್ಕಾಗಿ ಸಮಿತಿಗಳ ನಿರಂತರತೆ ಮತ್ತು ಪರಿಣಾಮಕಾರಿ ಅನುಷ್ಠಾನ ವ್ಯವಸ್ಥೆ ರೂಪಿಸಬೇಕು ಎಂದು ಹೇಳಿದರು.

BRICSನ ಎಲ್ಲಾ ಉಪಕ್ರಮಗಳು ಕೇವಲ ನಿರ್ಧಾರಗಳ ಮಟ್ಟದಲ್ಲಿ ಉಳಿಯದೆ, ಅವುಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುವ ವ್ಯವಸ್ಥೆ ಅಗತ್ಯ ಎಂದು ಮೋದಿ ಪ್ರತಿಪಾದಿಸಿದರು. ಟ್ರೊಯ್ಕಾ ವ್ಯವಸ್ಥೆಯ ಮೂಲಕ ಉಪಕ್ರಮಗಳ ಅನುಷ್ಠಾನ ಮೇಲ್ವಿಚಾರಣೆ ಹಾಗೂ ನಿರ್ಧಾರಗಳಿಗಾಗಿ ಸುರಕ್ಷಿತ ಡಿಜಿಟಲ್ ರೆಪೊಸಿಟರಿ ನಿರ್ಮಿಸುವ ಪ್ರಸ್ತಾಪವನ್ನೂ ಮುಂದಿಟ್ಟರು.

ಇದೇ ವೇಳೆ ಜಾಗತಿಕ ಆಡಳಿತ ವ್ಯವಸ್ಥೆಯ ಸುಧಾರಣೆಯ ಅಗತ್ಯತೆಯನ್ನೂ ಪ್ರಧಾನಿ ಮೋದಿ ಪ್ರಸ್ತಾಪಿಸಿದರು. ಪ್ರಸ್ತುತ ಜಾಗತಿಕ ಆಡಳಿತ ವ್ಯವಸ್ಥೆ ಪಿರಮಿಡ್‌ನಂತೆ ರೂಪುಗೊಂಡಿದ್ದು, ಅಧಿಕಾರ ಮತ್ತು ನಿರ್ಧಾರ ಕೈಗೊಳ್ಳುವ ಶಕ್ತಿ ಮೇಲ್ಭಾಗದಲ್ಲಿ ಕೇಂದ್ರೀಕೃತವಾಗಿದೆ. ಆದರೆ ಜಾಗತಿಕ ಬಿಕ್ಕಟ್ಟುಗಳಿಂದ ಹೆಚ್ಚು ಪ್ರಭಾವಿತರಾಗುವ ಹಲವು ರಾಷ್ಟ್ರಗಳಿಗೆ ನಿರ್ಧಾರ ರೂಪಿಸುವ ಪ್ರಕ್ರಿಯೆಯಲ್ಲಿ ಸಮರ್ಪಕ ಪಾತ್ರ ಸಿಗುತ್ತಿಲ್ಲ ಎಂದು ಅವರು ಹೇಳಿದರು.

ವಿಶೇಷವಾಗಿ ಗ್ಲೋಬಲ್ ಸೌತ್ ರಾಷ್ಟ್ರಗಳಿಗೆ ಜಾಗತಿಕ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕಿದೆ. ‘ಪ್ರಿವಿಲೇಜ್ ಪಿರಮಿಡ್’ ಅನ್ನು ‘ಪಾಲುದಾರಿಕೆ ವೇದಿಕೆ’ಯಾಗಿ ಪರಿವರ್ತಿಸಬೇಕು. ಪ್ರತಿಯೊಂದು ದೇಶಕ್ಕೂ ಧ್ವನಿ ಮತ್ತು ಪ್ರತಿಯೊಬ್ಬ ಸದಸ್ಯನಿಗೂ ಸೂಕ್ತ ಸ್ಥಾನ ದೊರೆಯಬೇಕು. ಮಾನವ ಅಭಿವೃದ್ಧಿಯೇ ಎಲ್ಲಾ ಪ್ರಯತ್ನಗಳ ಕೇಂದ್ರಬಿಂದುವಾಗಿರಬೇಕು ಎಂದು ಮೋದಿ ಹೇಳಿದರು.

ಮುಂದಿನ BRICS ಶೃಂಗಸಭೆಯೊಳಗೆ ಸುಧಾರಣೆಯ ಮಾರ್ಗಸೂಚಿ ಸಿದ್ಧಪಡಿಸುವ ಗುರಿಯನ್ನೂ ಮೋದಿ ಮುಂದಿಟ್ಟರು. ಈ ರೋಡ್‌ಮ್ಯಾಪ್‌ನಲ್ಲಿ ಪ್ರತಿಧ್ವನಿ, ಸ್ಪಂದನಾಶೀಲತೆ ಮತ್ತು ನಿಯಮ ರಚನೆಗೆ ಪ್ರಮುಖ ಆದ್ಯತೆ ನೀಡಬೇಕು ಎಂದರು.

ಇದರ ಜೊತೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆ ಇನ್ನು ವಿಳಂಬವಾಗಬಾರದು ಎಂದು ಪ್ರಧಾನಿ ಮೋದಿ ಸ್ಪಷ್ಟವಾಗಿ ಹೇಳಿದರು. UNSC ಸುಧಾರಣೆ ಕುರಿತ ಮಾತುಕತೆಗಳಿಗೆ ನಿಗದಿತ ಕಾಲಮಿತಿ ಇರಬೇಕು ಮತ್ತು ಚರ್ಚೆಗಳು ಸ್ಪಷ್ಟ ಫಲಿತಾಂಶಕ್ಕೆ ದಾರಿ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 02T183849.135

ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

by ಶಾಲಿನಿ ಕೆ. ಡಿ
November 2, 2026 - 6:41 pm
0

Untitled Design 2026 11 02T182957.381

ಯಾದಗಿರಿಯಲ್ಲಿ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಶಾಸಕ ಶರಣಗೌಡ ಕಂದಕೂರು ಚಾಲನೆ

by ಶಾಲಿನಿ ಕೆ. ಡಿ
November 2, 2026 - 6:30 pm
0

Untitled Design 2026 11 02T181150.232

ದೀಪಾವಳಿ, ಧನತ್ರಯೋದಶಿಗೆ ಬಂಪರ್‌ ಆಫರ್: ಹತ್ತೇ ನಿಮಿಷದಲ್ಲಿ ಮನೆ ಬಾಗಿಲಿಗೆ ಚಿನ್ನ ಜೊತೆಗೆ ಬೆಳ್ಳಿ ಫ್ರೀ!

by ಶಾಲಿನಿ ಕೆ. ಡಿ
November 2, 2026 - 6:13 pm
0

Untitled Design 2026 11 02T180931.494

ರೋಬೋಟ್‌ ಜಿಯಾಗೆ ಆ್ಯಕ್ಷನ್ ಕಟ್ ಹೇಳಿದ ಸಿಂಪಲ್ ಸುನಿ

by ಶಾಲಿನಿ ಕೆ. ಡಿ
November 2, 2026 - 6:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 02T183849.135
    ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ
    November 2, 2026 | 0
  • Untitled design 2026 11 02T164938.624
    ಕಾಂಗ್ರೆಸ್ ರ‍್ಯಾಲಿಯಿಂದ ದೆಹಲಿ ವ್ಯಾಪಾರಿಗಳಿಗೆ ₹11 ಸಾವಿರ ಕೋಟಿ ನಷ್ಟ: ಬಿಜೆಪಿ ಕಾರಣ ಎಂದ ರಾಹುಲ್ ಗಾಂಧಿ
    November 2, 2026 | 0
  • Untitled Design 2026 11 02T122648.908
    ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್
    November 2, 2026 | 0
  • Untitled Design 2026 11 02T112542.788
    ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್
    November 2, 2026 | 0
  • Untitled Design 2026 11 01T130556.631
    SIR ವಿರುದ್ಧ ದೆಹಲಿಯಲ್ಲಿ INDIA ಒಕ್ಕೂಟದ ಬೃಹತ್ ಪ್ರತಿಭಟನೆ: ಬಿಜೆಪಿಯಿಂದಲೂ ಪ್ರತ್ಯೇಕ ರ‍್ಯಾಲಿ
    November 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version