ಫ್ಲೋರಿಡಾ ಸ್ಟೇಟ್ ಯೂನಿವರ್ಸಿಟಿಯಲ್ಲಿ ಗುಂಡಿನ ದಾಳಿ: ಇಬ್ಬರು ಸಾ*ವು

Untitled design 2025 04 18t115400.714

ಅಮೆರಿಕದ ಫ್ಲೋರಿಡಾ ರಾಜ್ಯದ ಪ್ರತಿಷ್ಠಿತ ಫ್ಲೋರಿಡಾ ಸ್ಟೇಟ್ ಯೂನಿವರ್ಸಿಟಿ (Florida State University) ಕ್ಯಾಂಪಸ್‌ನಲ್ಲಿ ಏಪ್ರಿಲ್ 17ರಂದು ಸಂಭವಿಸಿದ ಭೀಕರ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದು, ಇನ್ನೂ ಆರು ಮಂದಿಗೆ ಗಾಯಗಳಾಗಿವೆ. 6 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದುರ್ಘಟನೆ ಬೆಳ್ಳಿಗ್ಗೆ ಸುಮಾರು 11:50ರ ಸಮಯದಲ್ಲಿ ನಡೆದಿದ್ದು, ಗುಂಡಿನ ದಾಳಿಯನ್ನು ನಡೆಸಿದ ವ್ಯಕ್ತಿ 20 ವರ್ಷದ ವಿದ್ಯಾರ್ಥಿಯಾಗಿದ್ದಾನೆ. ಆತನನ್ನು ಫೀನಿಕ್ಸ್ ಇಕ್ಷರ್ (Phoenix Ixcher) ಎಂದು ಗುರುತಿಸಲಾಗಿದೆ. ಇವನು ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ಸ್ಥಳೀಯ ಶೆರಿಫ್ ಡೆಪ್ಯೂಟಿಯ ಮಗನೆಂಬ ಮಾಹಿತಿ ಕೂಡ ಲಭ್ಯವಾಗಿದೆ.

ಘಟನೆಯ ವಿವರ

ಎಂದಿನಂತೆ ಕಾಲೇಜು ವಿದ್ಯಾರ್ಥಿಗಳು ತಮ್ಮ ತರಗತಿಗಳತ್ತ ಮುಖ ಮಾಡುತ್ತಿದ್ದ ಸಂದರ್ಭದಲ್ಲಿ, ಫೀನಿಕ್ಸ್ ಅನಿರೀಕ್ಷಿತವಾಗಿ ತನ್ನ ಬಳಿ ಇದ್ದ ಬಂದೂಕಿನಿಂದ ಅಚಾನಕ್ ಗುಂಡು ಹಾರಿಸಿದ್ದಾನೆ. ಈ ದಾಳಿಯ ಪರಿಣಾಮ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಆರು ಮಂದಿ ವಿದ್ಯಾರ್ಥಿಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ, ಗುಂಡು ಹಾರಿಸಿದ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಗುಂಡಿನ ದಾಳಿ ನಡೆಸಲು ಯುವಕನಿಗೆ ಏನು ಉದ್ದೇಶವಿತ್ತು ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಲಭ್ಯವಾಗಿಲ್ಲ.

ಡೊನಾಲ್ಡ್ ಟ್ರಂಪ್‌ ಮೇಲೆ ಮತ್ತೆ ಗುಂಡಿನ ದಾಳಿ..!

ಅಮೆರಿಕದ ಮಾಜಿ ಅಧ್ಯಕ್ಷ ಹಾಗೂ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್​ ಟ್ರಂಪ್​ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಫ್ಲೋರಿಡಾದ ಗಾಲ್ಫ್​ ಕೋರ್ಸ್​ ಬಳಿ ದಾಳಿ ನಡೆದಿದೆ. ಡೊನಾಲ್ಡ್ ಟ್ರಂಪ್ ಸುರಕ್ಷಿತವಾಗಿದ್ದಾರೆ, ಆದರೆ ಟ್ರಂಪ್​ ಅವರನ್ನೇ ಗುರಿಯಾಗಿಸಿ ಗುಂಡಿನ ದಾಳಿ ನಡೆದಿದೆಯೇ ಇಲ್ಲವೇ ಎಂಬುದಿನ್ನು ಸ್ಪಷ್ಟವಾಗಿಲ್ಲ. ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಗಾಲ್ಫ್ ಕೋರ್ಸ್‌ನಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಪುತ್ರ ಟ್ರಂಪ್ ಜೂನಿಯರ್ ಟ್ವೀಟ್ ಮಾಡಿದ್ದಾರೆ.

ಈ ಗುಂಡಿನ ದಾಳಿಯಲ್ಲಿ ಡೊನಾಲ್ಡ್ ಟ್ರಂಪ್ ಸಂಪೂರ್ಣ ಸೇಫ್ ಆಗಿದ್ದಾರೆ. ವಾಸ್ತವವಾಗಿ, ಭಾನುವಾರ ಮಧ್ಯಾಹ್ನ ಫ್ಲೋರಿಡಾದ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕೋರ್ಸ್ ಬಳಿ, ಟ್ರಂಪ್‌ಗೆ ಬಹಳ ಹತ್ತಿರದಲ್ಲಿ ಬುಲೆಟ್‌ಗಳನ್ನು ಹಾರಿಸಲಾಯಿತು. ಎಫ್‌ಬಿಐ ಇದನ್ನು ಕೊಲೆ ಯತ್ನ ಎಂದು ಪರಿಗಣಿಸಿದೆ. ಅಲ್ಲಿ ಎಕೆ-47 ಅನ್ನು ವಶಪಡಿಸಿಕೊಳ್ಳಲಾಗಿದೆ, ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಅಭ್ಯರ್ಥಿ ಟ್ರಂಪ್ ಭಾನುವಾರ ಗಾಲ್ಫ್ ಆಡುತ್ತಿದ್ದ ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ನ್ಯಾಷನಲ್ ಗಾಲ್ಫ್ ಕ್ಲಬ್‌ನಲ್ಲಿ ಗುಂಡು ಹಾರಿಸಲಾಗಿದೆ.

ಜುಲೈ 13ರಂದು ಪೆನ್ಸಿಲ್ವೇನಿಯಾದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಟ್ರಂಪ್​ ಅವರ ಹತ್ಯೆಗೆ ಪ್ರಯತ್ನಿಸಲಾಗಿತ್ತು. ಓರ್ವ ಸಾವನ್ನಪ್ಪಿದ್ದರು, ಇಬ್ಬರು ಗಾಯಗೊಂಡಿದ್ದರು. ಈ ಘಟನೆಯು ಟ್ರಂಪ್ ಅವರ ಪ್ರಚಾರದ ಮೇಲೆ ಪರಿಣಾಮ ಬೀರುತ್ತದೆಯೇ ಅಥವಾ ಇಲ್ಲವೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.

Exit mobile version