• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಏರ್ ಶೋ ವೇಳೆ ಗ್ರೀಕ್ ವಾಯುಪಡೆಯ ಯುದ್ಧವಿಮಾನ ಪತನ: ಇಬ್ಬರು ಪೈಲಟ್‌ಗಳು ದುರ್ಮರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 6, 2026 - 8:53 am
in ವಿದೇಶ
0 0
0
ಮಾಡಲು (5)

ಅಥೆನ್ಸ್: ಸಾವಿರಾರು ಪ್ರೇಕ್ಷಕರ ಸಮ್ಮುಖದಲ್ಲಿ ನಡೆಯುತ್ತಿದ್ದ ವೈಮಾನಿಕ ಪ್ರದರ್ಶನದ ವೇಳೆ ಗ್ರೀಕ್ ವಾಯುಪಡೆಯ ಯುದ್ಧವಿಮಾನವೊಂದು ಪತನಗೊಂಡು ಇಬ್ಬರು ಪೈಲಟ್‌ಗಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಗ್ರೀಸ್ ರಾಜಧಾನಿ ಅಥೆನ್ಸ್‌ನ ಉತ್ತರ ಭಾಗದಲ್ಲಿರುವ ಟನಾಗ್ರಾ ವಾಯುಪಡೆ ನೆಲೆಯ ಬಳಿ ಶನಿವಾರ ಈ ಅಪಘಾತ ಸಂಭವಿಸಿದೆ.

ವಾರ್ಷಿಕ ಅಥೆನ್ಸ್ ಫ್ಲೈಯಿಂಗ್ ವೀಕ್ ಏರ್‌ಶೋದಲ್ಲಿ ಭಾಗವಹಿಸಿದ್ದ ಅವಳಿ ಆಸನಗಳ ಫ್ಯಾಂಟಮ್ F-4 ಜೆಟ್ ಕಡಿಮೆ ಎತ್ತರದಲ್ಲಿ ವೈಮಾನಿಕ ಕಸರತ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದು, ಇಬ್ಬರೂ ಮೃತಪಟ್ಟಿದ್ದಾರೆ ಎಂದು ಗ್ರೀಕ್ ವಾಯುಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

RelatedPosts

ಇರಾನಿನ 3 ತೈಲ ಟ್ಯಾಂಕರ್‌ಗಳನ್ನು ಧ್ವಂಸಗೊಳಿಸಿದ ಅಮೆರಿಕ

ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ

ಕಸ ತುಂಬಿದ್ದ ನದಿ ಸ್ವಚ್ಛಗೊಳಿಸಿದ್ದ 20ರ ಯುವಕ: ನೆದರ್ಲೆಂಡ್ಸ್‌ನಿಂದ ಉದ್ಯೋಗ ಆಫರ್!

ಖಾರ್ಗ್ ದ್ವೀಪದ ಬಳಿ ಇರಾನ್‌‌ನ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ

ADVERTISEMENT
ADVERTISEMENT

ಪ್ರಾಥಮಿಕ ಮಾಹಿತಿಯ ಪ್ರಕಾರ, ವೈಮಾನಿಕ ಪ್ರದರ್ಶನದ ವೇಳೆ ಜೆಟ್‌ ಇದ್ದಕ್ಕಿದ್ದಂತೆ ಎತ್ತರದಿಂದ ಕೆಲವೇ ಕ್ಷಣಗಳಲ್ಲಿ ವಿಮಾನ ನೆಲಕ್ಕೆ ಅಪ್ಪಳಿಸಿದ್ದು, ನಂತರ ಭಾರೀ ಸ್ಫೋಟ ಸಂಭವಿಸಿದೆ. ಅಪಘಾತದ ಬಳಿಕ ಸ್ಥಳದಿಂದ ದಟ್ಟವಾದ ಕಪ್ಪು ಹೊಗೆ ಆಕಾಶಕ್ಕೆ ಏರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ವಿಮಾನವು ನೆಲಕ್ಕೆ ಅಪ್ಪಳಿಸಿದ ಬಳಿಕ ಮತ್ತೊಂದು ಸ್ಫೋಟ ಸಂಭವಿಸಿರುವುದೂ ವಿಡಿಯೊ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ.

ಅಪಘಾತ ನಡೆದ ಪ್ರದೇಶದಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದ್ದು, ಅದು ವಾಯುನೆಲೆಯ ಸುತ್ತಮುತ್ತಲಿನ ಅರಣ್ಯ ಪ್ರದೇಶಕ್ಕೂ ಹರಡಿತು. ರಕ್ಷಣಾ ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಿಸುವ ಕಾರ್ಯಾಚರಣೆ ಆರಂಭಿಸಿದರು. ಆರಂಭಿಕ ಹಂತದಲ್ಲಿ ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಪೈಲಟ್‌ಗಳನ್ನು ಪತ್ತೆಹಚ್ಚುವ ರಕ್ಷಣಾ ಕಾರ್ಯಾಚರಣೆಯಲ್ಲೂ ಅಡಚಣೆ ಉಂಟಾಯಿತು. ಬಳಿಕ ಇಬ್ಬರು ಪೈಲಟ್‌ಗಳ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ವೇಳೆ ಏರ್‌ಶೋ ವೀಕ್ಷಿಸಲು ಸಾವಿರಾರು ಜನರು ಸ್ಥಳದಲ್ಲಿದ್ದರು. ಆದರೆ ಜನಸಂದಣಿ ಪ್ರದೇಶದಿಂದ ಸ್ವಲ್ಪ ದೂರದಲ್ಲಿ ವಿಮಾನ ಪತನಗೊಂಡಿದ್ದರಿಂದ ಪ್ರೇಕ್ಷಕರಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಘಟನೆ ಬಳಿಕ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದ್ದು, ವಾರಾಂತ್ಯದಲ್ಲಿ ನಡೆಯಬೇಕಿದ್ದ ಉಳಿದ ವೈಮಾನಿಕ ಪ್ರದರ್ಶನಗಳನ್ನು ಆಯೋಜಕರು ರದ್ದುಗೊಳಿಸಿದ್ದಾರೆ.

ಬೆಂಕಿ ನಿಯಂತ್ರಣಕ್ಕೆ ದೊಡ್ಡ ಪ್ರಮಾಣದ ಅಗ್ನಿಶಾಮಕ ಪಡೆಗಳನ್ನು ನಿಯೋಜಿಸಲಾಗಿತ್ತು. ಸುಮಾರು 115 ಅಗ್ನಿಶಾಮಕ ಸಿಬ್ಬಂದಿ, 36 ವಾಹನಗಳು ಹಾಗೂ ಹಲವಾರು ನೀರು ಸಿಂಪಡಿಸುವ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು. ಟನಾಗ್ರಾ ವಾಯುಪಡೆ ನೆಲೆಯ ಸುತ್ತಲಿನ ಪ್ರದೇಶದಲ್ಲಿ ಬೆಂಕಿ ಹರಡದಂತೆ ತಡೆಯಲು ಹಲವು ತಂಡಗಳು ನಿರಂತರವಾಗಿ ಕಾರ್ಯನಿರ್ವಹಿಸಿದವು.

ಈ ದುರಂತದ ಹಿನ್ನೆಲೆ ಗ್ರೀಸ್‌ನ ರಕ್ಷಣಾ ಸಚಿವರು ತಮ್ಮ ಅಂತರರಾಷ್ಟ್ರೀಯ ಕಾರ್ಯಕ್ರಮದ ವೇಳಾಪಟ್ಟಿಯನ್ನು ಮೊಟಕುಗೊಳಿಸಿ ಅಥೆನ್ಸ್‌ಗೆ ಮರಳಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿತ್ತೇ, ಪೈಲಟ್‌ಗಳ ನಿಯಂತ್ರಣ ತಪ್ಪಿತ್ತೇ ಅಥವಾ ಕಡಿಮೆ ಎತ್ತರದ ಕಸರತ್ತಿನ ವೇಳೆ ಬೇರೆ ಯಾವುದೇ ಕಾರಣದಿಂದ ಘಟನೆ ಸಂಭವಿಸಿತೇ ಎಂಬ ಬಗ್ಗೆ ತನಿಖೆ ನಡೆಯುವ ಸಾಧ್ಯತೆಯಿದೆ.

ಸೈಪ್ರಸ್‌ನ ರಕ್ಷಣಾ ಸಚಿವ ವಾಸಿಲಿಸ್ ಪಾಲ್ಮಾಸ್ ಅವರು ಗ್ರೀಕ್ ರಕ್ಷಣಾ ಸಚಿವ ನಿಕೋಸ್ ಡೆಂಡಿಯಾಸ್ ಅವರಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ. ಇಬ್ಬರು ಗ್ರೀಕ್ ವಾಯುಪಡೆ ಅಧಿಕಾರಿಗಳ ಸಾವಿಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಅವರು, ಕರ್ತವ್ಯದ ವೇಳೆ ಜೀವ ಕಳೆದುಕೊಂಡ ಪೈಲಟ್‌ಗಳ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (5)

ಏರ್ ಶೋ ವೇಳೆ ಗ್ರೀಕ್ ವಾಯುಪಡೆಯ ಯುದ್ಧವಿಮಾನ ಪತನ: ಇಬ್ಬರು ಪೈಲಟ್‌ಗಳು ದುರ್ಮರಣ

by ಶಾಲಿನಿ ಕೆ. ಡಿ
September 6, 2026 - 8:53 am
0

ಮಾಡಲು (4)

ಇರಾನಿನ 3 ತೈಲ ಟ್ಯಾಂಕರ್‌ಗಳನ್ನು ಧ್ವಂಸಗೊಳಿಸಿದ ಅಮೆರಿಕ

by ಶಾಲಿನಿ ಕೆ. ಡಿ
September 6, 2026 - 8:17 am
0

ಮಾಡಲು (3)

ಬೆಂಗಳೂರು, ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 6, 2026 - 7:55 am
0

ಮಾಡಲು (2)

ವಿಟಮಿನ್ ಡಿ ಪಡೆಯಲು ಯಾವ ಸಮಯದಲ್ಲಿ ಬಿಸಿಲಿಗೆ ನಿಲ್ಲಬೇಕು? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
September 6, 2026 - 7:36 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (4)
    ಇರಾನಿನ 3 ತೈಲ ಟ್ಯಾಂಕರ್‌ಗಳನ್ನು ಧ್ವಂಸಗೊಳಿಸಿದ ಅಮೆರಿಕ
    September 6, 2026 | 0
  • ಚಕಮಕಿ (14)
    ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ
    September 5, 2026 | 0
  • ಚಕಮಕಿ (8)
    ಕಸ ತುಂಬಿದ್ದ ನದಿ ಸ್ವಚ್ಛಗೊಳಿಸಿದ್ದ 20ರ ಯುವಕ: ನೆದರ್ಲೆಂಡ್ಸ್‌ನಿಂದ ಉದ್ಯೋಗ ಆಫರ್!
    September 5, 2026 | 0
  • Untitled design 2026 09 05T154532.624
    ಖಾರ್ಗ್ ದ್ವೀಪದ ಬಳಿ ಇರಾನ್‌‌ನ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ
    September 5, 2026 | 0
  • ಪಶ್ಚಾತ್ತಾಪ (37)
    ಭೀಕರ ಪ್ರವಾಹಕ್ಕೆ ನೇಪಾಳ ತತ್ತರ: ಸಾವಿನ ಸಂಖ್ಯೆ 1,344ಕ್ಕೆ ಏರಿಕೆ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version