ಕೆನಡಾದ ರಾಕ್‌ಲ್ಯಾಂಡ್‌ನಲ್ಲಿ ಭಾರತೀಯ ಪ್ರಜೆಗೆ ಚಾಕು ಇರಿದು ಕೊಲೆ

Untitled design (20)

ಭಾರತೀಯ ಪ್ರಜೆಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೆನಡಾದ ರಾಕ್‌ಲ್ಯಾಂಡ್ ಪ್ರದೇಶದಲ್ಲಿ ನಡೆದಿದೆ ಎಂದು ಕೆನಡಾದಲ್ಲಿರು ಭಾರತೀಯ ರಾಯಭೇರಿ ಕಚೇರಿ ಶನಿವಾರ ತಿಳಿಸಿದೆ.

ಒಟ್ಟಾವ ಬಳಿಯ ರಾಕ್‌ಲ್ಯಾಂಡ್‌ನಲ್ಲಿ ಚಾಕುವಿನಿಂದ ಇರಿದು ಭಾರತೀಯನನ್ನು ಕೊಲೆ ಮಾಡಿರುವ ದುರಂತದ ಘಟನೆಗೆ ನಾವು ತೀವ್ರ ದುಃಖಿತರಾಗಿದ್ದೇವೆ . ಶಂಕಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT
ADVERTISEMENT


ಸ್ಥಳೀಯ ಸಮುದಾಯದ ಸಂಘದ ಮೂಲಕ ಕೊಲೆಯಾದ ವ್ಯಕ್ತಿಯ ಸಂಬಂಧಿಕರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲು ನಾವು ನಿಕಟ ಸಂಪರ್ಕದಲ್ಲಿದ್ದೇವೆ ಎಂದು ಭಾರತೀಯ ರಾಯಭೇರಿ ಕಚೇರಿ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಕೆನಡಾದಲ್ಲಿ ವಾಸಿಸುವ ಭಾರತೀಯರಿಗೆ ಈ ಘಟನೆ ಆತಂಕ ಹುಟ್ಟಿಸಿದೆ. ನಮ್ಮ ಸಮುದಾಯದ ಸುರಕ್ಷತೆಗೆ ಹೆಚ್ಚಿನ ಗಮನ ಬೇಕು. ಇಂತಹ ಘಟನೆಗಳು ಪುನರಾವರ್ತನೆಯಾಗಬಾರದು ಎಂದು ಸ್ಥಳೀಯ ಭಾರತೀಯ ಸಂಘಟನೆಗಳು ರಾಯಭಾರಿ ಕಚೇರಿ ಮತ್ತು ಪೊಲೀಸ್ ಇಲಾಖೆಗೆ ತಾಕೀತು ಮಾಡಿವೆ.

ಇಂದು ಬೆಳಗ್ಗೆ ಕ್ಲಾರೆನ್ಸ್‌ ರಾಕ್‌ಲ್ಯಾಂಡ್‌ನಲ್ಲಿ ಓರ್ವನನ್ನು ಕೊಲೆ ಮಾಡಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂಬುದು ತಿಳಿದುಬಂದಿದ್ದು, ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೋಲಿಸರು ತನಿಖೆ ನಡೆಸುತ್ತಿದ್ದಾರೆ  ಎಂದು ಮೂಲಗಳು ತಿಳಿಸಿವೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

 

Exit mobile version