ಇಸ್ರೇಲ್-ಇರಾನ್ ನಡುವೆ ಭೀಕರ ಯುದ್ದ: ಭಾರತ ರಾಯಭಾರ ಕಚೇರಿಯಿಂದ ತುರ್ತು ‘ರೆಡ್ ಅಲರ್ಟ್’!

ಮಧ್ಯಪ್ರಾಚ್ಯದ ಇಸ್ರೇಲ್ ಮತ್ತು ಇರಾನ್ ನಡುವೆ ಪೂರ್ಣ ಪ್ರಮಾಣದ ಯುದ್ಧ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇಂದು ಮುಂಜಾನೆ ಇರಾನ್ ರಾಜಧಾನಿ ಟೆಹರಾನ್ ಮೇಲೆ ಇಸ್ರೇಲ್ ಭೀಕರ ಕ್ಷಿಪಣಿ ದಾಳಿ ನಡೆಸುವ ಮೂಲಕ ಯುದ್ಧದ ಆರಂಭಿಸಿದೆ. ಈ ಬೆನ್ನಲ್ಲೇ ಇಸ್ರೇಲ್‌ನಲ್ಲಿರುವ ಸಾವಿರಾರು ಭಾರತೀಯ ನಾಗರಿಕರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ರಾಯಭಾರ ಕಚೇರಿಯು ಗಂಭೀರ ಎಚ್ಚರಿಕೆಯನ್ನು (Advisory) ನೀಡಿದೆ.

ಟೆಹರಾನ್ ಮೇಲೆ ಇಸ್ರೇಲ್ ವಾಯುದಾಳಿ:

ಇರಾನ್‌ನಿಂದ ಸಂಭಾವ್ಯ ದಾಳಿಗಳು ನಡೆಯಲಿವೆ ಎಂಬ ಗುಪ್ತಚರ ಮಾಹಿತಿ ಆಧರಿಸಿ ಇಸ್ರೇಲ್ ಪೂರ್ವಭಾವಿ ದಾಳಿಯನ್ನು ಸಂಘಟಿಸಿದೆ. ಟೆಹರಾನ್‌ನಲ್ಲಿರುವ ಅಧ್ಯಕ್ಷರ ಭವನಗಳು ಹಾಗೂ ಪ್ರಮುಖ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎನ್ನಲಾಗಿದೆ. ಈ ಘಟನೆಯಿಂದಾಗಿ ಇತ್ತೀಚೆಗಷ್ಟೇ ಆರಂಭವಾಗಿದ್ದ ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಮಾತುಕತೆಗಳು ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಇಸ್ರೇಲ್ ತನ್ನ ವಾಯುನೆಲೆಯಲ್ಲಿ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದ್ದು, ಯುದ್ಧಕ್ಕೆ ಸಿದ್ದವಾಗಿದೆ.

ಭಾರತೀಯರಿಗೆ ರಾಯಭಾರ ಕಚೇರಿಯ ಕಟ್ಟುನಿಟ್ಟಿನ ಸೂಚನೆ:

ಪರಿಸ್ಥಿತಿಯ ಗಂಭೀರತೆಯನ್ನು ಅರಿತಿರುವ ಟೆಲ್ ಅವಿವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಲ್ಲಿರುವ ಭಾರತೀಯ ನಾಗರಿಕರಿಗೆ ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದೆ:

ತುರ್ತು ಸಹಾಯವಾಣಿ ಲಭ್ಯ: ಯಾವುದೇ ತುರ್ತು ಸಂದರ್ಭದಲ್ಲಿ ಭಾರತೀಯ ನಾಗರಿಕರು ಟೆಲ್‌ ಅವಿವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಲು 24×7 ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ:

ಜಾಗತಿಕ ಪರಿಣಾಮ:

ಇಸ್ರೇಲ್‌ನಾದ್ಯಂತ ಆಗಾಗ ಯುದ್ಧದ ಸೈರನ್‌ಗಳು ಮೊಳಗುತ್ತಿದ್ದು, ಜನರು ಆತಂಕದಲ್ಲಿದ್ದಾರೆ. ಇತ್ತ ಇರಾನ್ ಕೂಡ ಪ್ರತಿದಾಳಿ ನಡೆಸುವ ಎಚ್ಚರಿಕೆ ನೀಡಿದೆ. ಒಂದು ವೇಳೆ ಈ ಸಂಘರ್ಷ ತಾರಕಕ್ಕೇರಿದರೆ ಅದು ಕೇವಲ ಈ ಎರಡು ದೇಶಗಳಿಗಷ್ಟೇ ಸೀಮಿತವಾಗದೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆ ಮತ್ತು ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಬಹುದು. ಭಾರತ ಸರ್ಕಾರವು ಇಸ್ರೇಲ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ತನ್ನ ನಾಗರಿಕರನ್ನು ರಕ್ಷಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

Exit mobile version