• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ನೇಪಾಳದಲ್ಲಿ ಪ್ರವಾಹ: 35ಕ್ಕೂ ಹೆಚ್ಚು ಮನೆಗಳು, ಸೇತುವೆಗಳು ನೀರುಪಾಲು!

ಕವಿತಾ by ಕವಿತಾ
October 11, 2026 - 2:39 pm
in ವಿದೇಶ
0 0
0
Untitled design (12)

ಕಠ್ಮಂಡು, ಅಕ್ಟೋಬರ್ 11: ನೇಪಾಳದಲ್ಲಿ ಮತ್ತೊಮ್ಮೆ ಪ್ರಕೃತಿಯ ರುದ್ರನರ್ತನ ಮುಂದುವರಿದಿದೆ. ಗೂರ್ಖಾ ಜಿಲ್ಲೆಯ ಬುಧಿ ಗಂಡಕಿ ನದಿಯಲ್ಲಿ ಇಂದು ಭಾನುವಾರ ಸಂಭವಿಸಿದ ಹಠಾತ್ ಪ್ರವಾಹದಿಂದ ಭಾರೀ ಹಾನಿ ಉಂಟಾಗಿದೆ. ಪ್ರವಾಹದ ರಭಸಕ್ಕೆ 35ಕ್ಕೂ ಹೆಚ್ಚು ಮನೆಗಳು ಹಾಗೂ ಹಲವು ಸೇತುವೆಗಳು ಕೊಚ್ಚಿಹೋಗಿದ್ದು, 341 ಮೆಗಾವಾಟ್ ಸಾಮರ್ಥ್ಯದ ಬುಧಿ ಗಂಡಕಿ ಜಲವಿದ್ಯುತ್ ಯೋಜನೆಗೂ ಹಾನಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಅದೃಷ್ಟವಶಾತ್, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾದ ಗಡಿಯ ಸಮೀಪದಲ್ಲಿರುವ ಚುಮ್ನುಬ್ರಿ ಗ್ರಾಮೀಣ ಪುರಸಭೆಯ ಜಗತ್, ಸಲ್ಲೇರಿ ಸೇರಿದಂತೆ ಹಲವು ಪ್ರದೇಶಗಳು ಪ್ರವಾಹದಿಂದ ತೀವ್ರವಾಗಿ ಬಾಧಿತವಾಗಿವೆ. ನದಿಯಲ್ಲಿ ಏಕಾಏಕಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಸೇತುವೆಗಳು ಕೊಚ್ಚಿಹೋಗಿರುವುದರಿಂದ ಕೆಲವು ಪ್ರದೇಶಗಳ ನಡುವಿನ ಸಂಪರ್ಕವೂ ಕಡಿತಗೊಂಡಿದೆ.

RelatedPosts

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾ*ವು

ರಷ್ಯಾದಿಂದ ತೈಲ ಖರೀದಿಸುತ್ತಾ ಅಮೆರಿಕ?: ಸೀಕ್ರೆಟ್‌ ಡೀಲ್‌ಗೆ ಮುಂದಾದ್ರ ಇಬ್ಬರು ಬದ್ದವೈರಿಗಳು?

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌‌ನಿಂದ ಶೌರ್ಯ ಪ್ರಶಸ್ತಿ ಘೋಷಣೆ

ADVERTISEMENT
ADVERTISEMENT

10 ನಿಮಿಷಗಳಲ್ಲಿ ಎರಡು ಮೀಟರ್‌ಗೂ ಹೆಚ್ಚು ಏರಿದ ನೀರಿನ ಮಟ್ಟ!

ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರದ (NDRRMA) ಪ್ರಕಾರ, ಭಾನುವಾರ ಇಂದು ಬೆಳಗ್ಗೆ 6:30ರ ವೇಳೆಗೆ 3.66 ಮೀಟರ್ ಇದ್ದ ನದಿಯ ನೀರಿನ ಮಟ್ಟ, ಬೆಳಗ್ಗೆ 8:40ರ ವೇಳೆಗೆ 8.43 ಮೀಟರ್‌ಗೆ ಏರಿಕೆಯಾಗಿದೆ. ಇದು ಅಪಾಯದ ಮಟ್ಟವಾದ ಐದು ಮೀಟರ್‌ಗಿಂತ ಗಣನೀಯವಾಗಿ ಹೆಚ್ಚಾಗಿದೆ. ವಿಶೇಷವಾಗಿ, ಬೆಳಗ್ಗೆ 8:30ರಿಂದ 8:40ರ ನಡುವಿನ ಕೇವಲ ಹತ್ತು ನಿಮಿಷಗಳಲ್ಲಿ ನೀರಿನ ಮಟ್ಟ ಎರಡು ಮೀಟರ್‌ಗೂ ಹೆಚ್ಚು ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ ನದಿಯು ಕಪ್ಪು ಮತ್ತು ಬೂದು ಬಣ್ಣದ ಕೆಸರು, ಕಲ್ಲು ಹಾಗೂ ಶಿಲಾಖಂಡರಾಶಿಗಳೊಂದಿಗೆ ಭೀಕರವಾಗಿ ಹರಿಯುತ್ತಿರುವ ದೃಶ್ಯಗಳು ಕಂಡುಬಂದಿವೆ.

ಭೂಕುಸಿತದಿಂದ ಪ್ರವಾಹ ಉಂಟಾಯಿತೇ?

ಪ್ರಾಥಮಿಕ ಮಾಹಿತಿಯ ಪ್ರಕಾರ, ಲೋಕ್ಪಾ ಮತ್ತು ಚುಮ್ಲಿಂಗ್ ನಡುವಿನ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ನದಿಯ ಹರಿವು ತಾತ್ಕಾಲಿಕವಾಗಿ ತಡೆಯಲ್ಪಟ್ಟಿರಬಹುದು. ಬಳಿಕ ಸಂಗ್ರಹವಾದ ನೀರು ಏಕಾಏಕಿ ಹರಿದು ಹಠಾತ್ ಪ್ರವಾಹ ಸೃಷ್ಟಿಯಾಗಿರುವ ಸಾಧ್ಯತೆಯಿದೆ. ಸದ್ಯಕ್ಕೆ ಮಳೆಯೇ ಪ್ರವಾಹಕ್ಕೆ ನೇರ ಕಾರಣವಲ್ಲ ಎಂದು ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ (NDRRMA) ತಿಳಿಸಿದ್ದು, ಘಟನೆಯ ನಿಖರ ಕಾರಣ ಪತ್ತೆಹಚ್ಚಲು ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದೆ.

ರಕ್ಷಣಾ ಕಾರ್ಯಾಚರಣೆಗೆ ನೇಪಾಳ ಸೇನೆ ನಿಯೋಜನೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ನೇಪಾಳ ಸೇನೆಯನ್ನು ವಾಯು ಹಾಗೂ ಭೂಮಾರ್ಗದ ಮೂಲಕ ನಿಯೋಜಿಸಲಾಗಿದೆ. ಭೂಕುಸಿತದ ಅಪಾಯವಿರುವ ಪ್ರದೇಶದಿಂದ ಆರು ಜನರನ್ನು ವಿಮಾನದ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಹಾಗೂ ನೆಲಮಟ್ಟದ ಪರಿಶೀಲನೆಯನ್ನೂ ನಡೆಸಲಾಗುತ್ತಿದೆ.

ನದಿಯ ದಡದ ನಿವಾಸಿಗಳು ಮತ್ತು ಕೆಳಭಾಗದ ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಲ್ಲಿ ಉಳಿಯುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ನದಿಯ ನೀರಿನ ಮಟ್ಟ ಮತ್ತಷ್ಟು ಏರುವ ಆತಂಕವಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಮುಂದುವರಿಸಲಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (15)

ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 11, 2026 - 3:22 pm
0

Untitled design (14)

ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ

by ಕವಿತಾ
October 11, 2026 - 3:09 pm
0

Untitled design (13)

ಚೆನ್ನೈ: ಜಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಿಎಂ ಮೋದಿ ಪೂಜೆ

by ಕವಿತಾ
October 11, 2026 - 2:53 pm
0

Untitled design (12)

ನೇಪಾಳದಲ್ಲಿ ಪ್ರವಾಹ: 35ಕ್ಕೂ ಹೆಚ್ಚು ಮನೆಗಳು, ಸೇತುವೆಗಳು ನೀರುಪಾಲು!

by ಕವಿತಾ
October 11, 2026 - 2:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (7)
    ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾ*ವು
    October 11, 2026 | 0
  • Untitled design (6)
    ರಷ್ಯಾದಿಂದ ತೈಲ ಖರೀದಿಸುತ್ತಾ ಅಮೆರಿಕ?: ಸೀಕ್ರೆಟ್‌ ಡೀಲ್‌ಗೆ ಮುಂದಾದ್ರ ಇಬ್ಬರು ಬದ್ದವೈರಿಗಳು?
    October 11, 2026 | 0
  • Untitled design 2026 10 09T161158.887
    ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ
    October 9, 2026 | 0
  • Untitled design 2026 10 09T114559.131
    ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌‌ನಿಂದ ಶೌರ್ಯ ಪ್ರಶಸ್ತಿ ಘೋಷಣೆ
    October 9, 2026 | 0
  • Untitled design (41)
    ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ; 30ಕ್ಕೂ ಹೆಚ್ಚು ಸಾ*ವು!
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version