ಪಾಕಿಸ್ತಾನದಲ್ಲಿ ರೈಲು ಹೈಜಾಕ್‌ ಮಾಡಿದ ಬಿಎಲ್‌ಎ

100ಕ್ಕೂ ಹೆಚ್ಚು ಪಾಕ್ ಸೈನಿಕರ ಒತ್ತೆ..!

Untitled design (23)

ನವದೆಹಲಿ: ಪಾಕಿಸ್ತಾನದಲ್ಲಿ ಬಲೂಚಿಸ್ತಾನ ಲಿಬರೇಷನ್ ಆರ್ಮಿ ಜಾಫರ್ ಎಕ್ಸ್‌‌ಪ್ರೆಸ್‌ ರೈಲನ್ನು ಹೈಜಾಕ್‌ ಮಾಡಿದೆ. ಕೈಟ್ನಾದಿಂದ ಪೇಶಾವರಕ್ಕೆ ತೆರಳುತ್ತಿದ್ದ ಈ ರೈಲಿಗೆ ಉಗ್ರರು ಬೆಂಕಿ ಹಚ್ಚಿದ್ದು, 400ಕ್ಕೂ ಹೆಚ್ಚು ಪ್ರಯಾಣಿಕರು ಒತ್ತೆಯಾಳುಗಳಾಗಿದ್ದಾರೆ ಎಂದು ಬಿಎಲ್ಎ ಹೇಳಿಕೆ ನೀಡಿದೆ. 

ಪಾಕಿಸ್ತಾನದ ಭದ್ರತಾ ಪಡೆಗಳು ಈ ಪ್ರದೇಶಕ್ಕೆ ದೌಡಾಯಿಸಿದ್ದು, ರೈಲು ಚಾಲಕ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನದ ರೈಲ್ವೆ ಅಧಿಕಾರಿಗಳ ಪ್ರಕಾರ, ದಾಳಿ ಪ್ರತ್ಯೇಕತಾವಾದಿ ಉಗ್ರ ಸಂಘಟನೆಯ ಕೈವಾಡವಿದೆ ಎನ್ನಲಾಗಿದೆ.

ಬಿಎಲ್‌ಎ ಉಗ್ರರು ದಾಳಿಯ ಜವಾಬ್ದಾರಿ ವಹಿಸಿಕೊಂಡಿದ್ದು, ಭದ್ರತಾ ಪಡೆಗಳ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದ್ದಾರೆ.

Exit mobile version