• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಥೈಲ್ಯಾಂಡ್‌ನಲ್ಲಿ ಭೀಕರ ಅಗ್ನಿ ದುರಂತ; 11 ಮಂದಿ ಸಜೀವ ದಹನ, 16 ಜನರಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2026 - 2:06 pm
in ವಿದೇಶ
0 0
0
Untitled Design 2026 11 16T140544.580

ಥೈಲ್ಯಾಂಡ್: ಪ್ರವಾಸಿಗರ ಸ್ವರ್ಗ ಎಂದೇ ಖ್ಯಾತಿ ಪಡೆದಿರುವ ಥೈಲ್ಯಾಂಡ್‌ನ ಫುಕೆಟ್ ದ್ವೀಪದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ಮುಂಜಾನೆ ವಾಣಿಜ್ಯ ಕಟ್ಟಡವೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಕಟ್ಟಡಗಳಿಗೂ ವ್ಯಾಪಿಸಿದ್ದು, ಘಟನೆಯಲ್ಲಿ 11 ಮಂದಿ ಸಜೀವ ದಹನವಾಗಿದ್ದಾರೆ. ಅಲ್ಲದೆ, 16 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂಜಾನೆ 3.17ಕ್ಕೆ ಕಾಣಿಸಿಕೊಂಡ ಬೆಂಕಿ

ಥೈಲ್ಯಾಂಡ್‌ನ ದಕ್ಷಿಣ ಭಾಗದಲ್ಲಿರುವ ಜನಪ್ರಿಯ ಪ್ರವಾಸಿ ತಾಣ ಫುಕೆಟ್ ದ್ವೀಪದ ಪಟಾಂಗ್ ಕಡಲತೀರದ ಸಮೀಪ ಈ ಭೀಕರ ಅಗ್ನಿ ಅವಘಡ ಸಂಭವಿಸಿದೆ. ವಾಹನಗಳನ್ನು ಬಾಡಿಗೆಗೆ ನೀಡುವ ವ್ಯವಹಾರ ನಡೆಸುತ್ತಿದ್ದ ವಾಣಿಜ್ಯ ಕಟ್ಟಡವೊಂದರಲ್ಲಿ ಸೋಮವಾರ ಮುಂಜಾನೆ ಸುಮಾರು 3.17ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ.

RelatedPosts

ಫಿಲಿಪ್ಪೀನ್ಸ್‌‌ನ ಐತಿಹಾಸಿಕ ಗುರುದ್ವಾರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ಗಡಿಯಲ್ಲಿ ಸಿಆರ್‌ಪಿಎಫ್ ಅಪರೇಷನ್‌ಗೆ ಇಬ್ಬರು ಉಗ್ರರು ಬಲಿ

ವಿಶ್ವಸಂಸ್ಥೆಯಲ್ಲಿ ಮರಣದಂಡನೆ ರದ್ದತಿ ನಿರ್ಣಯಕ್ಕೆ 133 ದೇಶಗಳ ಬೆಂಬಲ: ಭಾರತ, ಅಮೆರಿಕ, ಚೀನಾ ವಿರೋಧ

ರಷ್ಯಾ-ಉಕ್ರೇನ್ ಯುದ್ಧಕ್ಕೆ ಬ್ರೇಕ್ ಹಾಕುತ್ತಾ ಭಾರತ?

ADVERTISEMENT
ADVERTISEMENT

ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆ ಅಕ್ಕಪಕ್ಕದ ಹಲವು ಕಟ್ಟಡಗಳಿಗೂ ವ್ಯಾಪಿಸಿದೆ. ಮುಂಜಾನೆ ಸಮಯವಾಗಿದ್ದರಿಂದ ಹಲವರು ಕಟ್ಟಡಗಳ ಒಳಗೆ ನಿದ್ರಿಸುತ್ತಿದ್ದರು ಎನ್ನಲಾಗಿದೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯ ಮಾಹಿತಿ ಲಭಿಸುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ವ್ಯಾಪಿಸಿದ್ದ ಕಟ್ಟಡಗಳ ಸುತ್ತಮುತ್ತ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ.

ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣ

 ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಹರಸಾಹಸ ಪಟ್ಟ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಥಾಯ್ಲೆಂಡ್ ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಅಷ್ಟರಲ್ಲಾಗಲೇ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ 11 ಮಂದಿ ಮೃತಪಟ್ಟಿದ್ದಾರೆ. ಕಟ್ಟಡದೊಳಗೆ ಸಿಲುಕಿದ್ದವರನ್ನು ರಕ್ಷಿಸುವ ಕಾರ್ಯಾಚರಣೆ ವೇಳೆ ಹಲವರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಈ ದುರಂತದಲ್ಲಿ ಒಟ್ಟು 16 ಜನರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿಯ ತೀವ್ರತೆಯಿಂದ ಕಟ್ಟಡಕ್ಕೆ ಭಾರೀ ಹಾನಿಯಾಗಿದೆ. ಸುತ್ತಮುತ್ತಲಿನ ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿದ್ದರಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿತ್ತು.

ಮೃತಪಟ್ಟವರಲ್ಲಿ ವಿದೇಶಿ ಪ್ರವಾಸಿಗರಿಲ್ಲ

ಈ ಅಗ್ನಿ ದುರಂತದಲ್ಲಿ ಸ್ಥಳೀಯರಿಗೇ ಹೆಚ್ಚಿನ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ 16 ಮಂದಿಯಲ್ಲಿ 15 ಜನರು ಥೈಲ್ಯಾಂಡ್ ಪ್ರಜೆಗಳಾಗಿದ್ದರೆ, ಮತ್ತೊಬ್ಬರು ಮ್ಯಾನ್ಮಾರ್ ಮೂಲದವರಾಗಿದ್ದಾರೆ.

ಈ ಘಟನೆಯಲ್ಲಿ ಮೃತಪಟ್ಟವರಲ್ಲಿ ಅಥವಾ ಗಾಯಗೊಂಡವರಲ್ಲಿ ಯಾವುದೇ ವಿದೇಶಿ ಪ್ರವಾಸಿಗರು ಇಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. 

ಸ್ಥಳೀಯ ನಿವಾಸಿಗಳು ಹಾಗೂ ಕಾರ್ಮಿಕರು ಈ ಅವಘಡಕ್ಕೆ ತುತ್ತಾಗಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಮೃತರ ಗುರುತು ಹಾಗೂ ದುರಂತಕ್ಕೆ ಸಂಬಂಧಿಸಿದ ಇತರ ವಿವರಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಅಗ್ನಿ ಅವಘಡಕ್ಕೆ ಕಾರಣವೇನು?

ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ವಿದ್ಯುತ್ ಅವಘಡ ಅಥವಾ ಇತರ ಕಾರಣಗಳಿಂದ ಬೆಂಕಿ ಕಾಣಿಸಿಕೊಂಡಿದೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಅಗ್ನಿಶಾಮಕ ಹಾಗೂ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design 2026 11 17T154449.353

100 ಥಿಯೇಟರ್ಸ್‌‌ 50 ಡೇಸ್..OTTಲಿ ‘ಪ್ರೇಮದ ಊರಲಿ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 17, 2026 - 3:45 pm
0

Untitled Design 2026 11 17T152637.816

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ M.S ಧೋನಿ

by ಶಾಲಿನಿ ಕೆ. ಡಿ
November 17, 2026 - 3:27 pm
0

Untitled Design 2026 11 17T142025.982

KPSC ನೇಮಕಾತಿ ಹಗರಣ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ED

by ಶಾಲಿನಿ ಕೆ. ಡಿ
November 17, 2026 - 2:20 pm
0

Untitled Design 2026 11 17T134021.669

ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

by ಶಾಲಿನಿ ಕೆ. ಡಿ
November 17, 2026 - 1:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 17T120859.916
    ಫಿಲಿಪ್ಪೀನ್ಸ್‌‌ನ ಐತಿಹಾಸಿಕ ಗುರುದ್ವಾರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ
    November 17, 2026 | 0
  • Your paragraph text (23)
    ಗಡಿಯಲ್ಲಿ ಸಿಆರ್‌ಪಿಎಫ್ ಅಪರೇಷನ್‌ಗೆ ಇಬ್ಬರು ಉಗ್ರರು ಬಲಿ
    November 16, 2026 | 0
  • Untitled Design 2026 11 16T112759.817
    ವಿಶ್ವಸಂಸ್ಥೆಯಲ್ಲಿ ಮರಣದಂಡನೆ ರದ್ದತಿ ನಿರ್ಣಯಕ್ಕೆ 133 ದೇಶಗಳ ಬೆಂಬಲ: ಭಾರತ, ಅಮೆರಿಕ, ಚೀನಾ ವಿರೋಧ
    November 16, 2026 | 0
  • Untitled Design 2026 11 14T105341.918
    ರಷ್ಯಾ-ಉಕ್ರೇನ್ ಯುದ್ಧಕ್ಕೆ ಬ್ರೇಕ್ ಹಾಕುತ್ತಾ ಭಾರತ?
    November 14, 2026 | 0
  • Your paragraph text (10)
    ಖಾಲಿಯಾಗುತ್ತಿದೆ ಜಪಾನ್ ನಗರ: 90 ಲಕ್ಷಕ್ಕೂ ಅಧಿಕ ಮನೆಗಳು ಖಾಲಿ ಖಾಲಿ
    November 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version