• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಚಳಿಗಾಲದಲ್ಲಿ ತೂಕ ಇಳಿಸುವುದು ಸುಲಭ: ಈ ಆಹಾರಗಳನ್ನು ಸೇವಿಸಿ ಫಿಟ್ ಆಗಿರಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 30, 2025 - 7:21 am
in ಆರೋಗ್ಯ-ಸೌಂದರ್ಯ
0 0
0
Untitled design 2025 12 30T071940.926

ಬೆಂಗಳೂರು, ಡಿ. 26: ಈ ಬಾರಿ ಚಳಿಗಾಲ ಭರ್ಜರಿಯಾಗಿ ಎಂಟ್ರಿ ಕೊಟ್ಟಿದೆ. ಬೆಳಗ್ಗಿನ ಜಾವದ ತಣ್ಣನೆಯ ಗಾಳಿ, ಸಂಜೆ ಹೊತ್ತು ಹೆಚ್ಚಾಗುವ ಚಳಿ ಇವೆಲ್ಲವೂ ಮೈ ನಡುಗಿಸುವ ಅನುಭವ ನೀಡುತ್ತಿವೆ. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ನಾವು ಸಹಜವಾಗಿ ಬಿಸಿ ಬಿಸಿಯಾದ, ಎಣ್ಣೆ ಮತ್ತು ಕ್ಯಾಲೋರಿ ಹೆಚ್ಚಿರುವ ಆಹಾರದತ್ತ ಆಕರ್ಷಿತರಾಗುತ್ತೇವೆ. ಇದರ ಪರಿಣಾಮವಾಗಿ ದೈಹಿಕ ಚಟುವಟಿಕೆ ಕಡಿಮೆಯಾಗಿ ತೂಕ ಹೆಚ್ಚಾಗುವುದು ಸಾಮಾನ್ಯ ಸಮಸ್ಯೆಯಾಗುತ್ತದೆ.

ಚಳಿಗಾಲವೇ ತೂಕ ಇಳಿಸಲು ಅತ್ಯುತ್ತಮ ಕಾಲ. ಈ ಸಮಯದಲ್ಲಿ ದೇಹದ ಮೆಟಾಬಾಲಿಸಂ ಸ್ವಲ್ಪ ಹೆಚ್ಚಾಗಿದ್ದು, ಸರಿಯಾದ ಆಹಾರ ಮತ್ತು ಜೀವನಶೈಲಿ ಅಳವಡಿಸಿಕೊಂಡರೆ ಸುಲಭವಾಗಿ ಕೊಬ್ಬು ಕರಗಿಸಬಹುದು. ಮುಖ್ಯವಾಗಿ ದೇಹಕ್ಕೆ ಉಷ್ಣತೆ ನೀಡುವ, ಜೀರ್ಣಕ್ರಿಯೆ ಸುಧಾರಿಸುವ ಹಾಗೂ ಹಸಿವನ್ನು ನಿಯಂತ್ರಿಸುವ ಆಹಾರಗಳನ್ನು ಸೇವಿಸುವುದು ಅಗತ್ಯ.

RelatedPosts

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಇದರಿಂದ ಕರುಳಿನ ಆರೋಗ್ಯ ಹಾಳಾಗುತ್ತೆ ಹುಷಾರ್!

ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ

ಕೂದಲು ಉದುರುವಿಕೆ ತಡೆಗೆ ಇಲ್ಲಿದೆ ನೋಡಿ ಸುಲಭ ರಾಮಬಾಣ

ಬೇಸಿಗೆಯಲ್ಲಿ ಅನಾನಸ್ ಜ್ಯೂಸ್ ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು.?

ADVERTISEMENT
ADVERTISEMENT
ಕ್ಯಾರೆಟ್

ಚಳಿಗಾಲದಲ್ಲಿ ದೊರೆಯುವ ಕ್ಯಾರೆಟ್‌ಗಳು ನೈಸರ್ಗಿಕವಾಗಿ ಸಿಹಿಯಾಗಿರುತ್ತವೆ. ಇದರಲ್ಲಿ ಫೈಬರ್ ಮತ್ತು ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದೆ. ಕ್ಯಾರೆಟ್ ಸೇವನೆಯಿಂದ ಹೊಟ್ಟೆ ತುಂಬಿದ ಅನುಭವ ಸಿಗುತ್ತಿದ್ದು, ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಅಚಾನಕ್ ಹೆಚ್ಚಿಸುವುದಿಲ್ಲ. ಇದರಿಂದ ದೇಹದಲ್ಲಿ ಅನಗತ್ಯ ಕೊಬ್ಬು ಶೇಖರಣೆಯಾಗುವುದನ್ನು ತಡೆಯಬಹುದು.

ಮೆಂತೆ ಸೊಪ್ಪು

ಭಾರತೀಯ ಅಡುಗೆಯಲ್ಲಿ ಚಳಿಗಾಲದ ಪ್ರಮುಖ ಸೊಪ್ಪು ಎಂದರೆ ಮೆಂತೆ ಸೊಪ್ಪು. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಮೆಂತೆಯಲ್ಲಿರುವ ನಾರು ಇನ್ಸುಲಿನ್ ಸಂವೇದನೆಯನ್ನು ಸುಧಾರಿಸುತ್ತದೆ. ಹೀಗಾಗಿ ತೂಕ ಇಳಿಸಲು ಬಯಸುವವರು ಮೆಂತೆ ಸೊಪ್ಪನ್ನು ನಿಯಮಿತವಾಗಿ ಆಹಾರದಲ್ಲಿ ಸೇರಿಸಬೇಕು.

ಸಾಸಿವೆ ಸೊಪ್ಪು

ಸಾಸಿವೆ ಸೊಪ್ಪಿನಲ್ಲಿ ಕ್ಯಾಲೋರಿ ಕಡಿಮೆ, ಪೋಷಕಾಂಶಗಳು ಹೆಚ್ಚು. ಇದರಲ್ಲಿ ಆಂಟಿ-ಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು, ಜೀರ್ಣಕ್ರಿಯೆಯನ್ನು ವೇಗಗೊಳಿಸುತ್ತವೆ. ದೇಹದಲ್ಲಿನ ವಿಷಪದಾರ್ಥಗಳನ್ನು ಹೊರಹಾಕಲು ಸಹ ಇದು ಸಹಾಯ ಮಾಡುತ್ತದೆ.

ಗೆಣಸು

ಚಳಿಗಾಲದಲ್ಲಿ ಹೆಚ್ಚು ದೊರೆಯುವ ಗೆಣಸು ನಾರಿನಂಶದಲ್ಲಿ ಶ್ರೀಮಂತವಾಗಿದೆ. ಇದು ಕರುಳಿನ ಆರೋಗ್ಯವನ್ನು ಉತ್ತಮಪಡಿಸಿ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಬೇಯಿಸಿದ ಅಥವಾ ಹುರಿದ ಗೆಣಸನ್ನು ಮಿತವಾಗಿ ಸೇವಿಸಿದರೆ ದೀರ್ಘಕಾಲ ಹಸಿವಾಗದಂತೆ ತಡೆಯುತ್ತದೆ.

ಶೇಂಗಾ ಮತ್ತು ಕಡಲೆಕಾಯಿ

ಪ್ರೋಟೀನ್ ಹಾಗೂ ಆರೋಗ್ಯಕರ ಕೊಬ್ಬು ಹೊಂದಿರುವ ಶೇಂಗಾ ಮತ್ತು ಕಡಲೆಕಾಯಿ ಹೆಚ್ಚು ಸಮಯ ಹೊಟ್ಟೆ ತುಂಬಿದ ಅನುಭವ ನೀಡುತ್ತವೆ. ಮಿತ ಪ್ರಮಾಣದಲ್ಲಿ ಸೇವಿಸಿದರೆ ಇವು ದೇಹದ ಕೊಬ್ಬು ಕರಗಿಸಲು ಸಹಾಯಕವಾಗುತ್ತವೆ.

ಸೀಬೆಹಣ್ಣು

ವಿಟಮಿನ್ ಸಿ ಸಮೃದ್ಧವಾಗಿರುವ ಸೀಬೆಹಣ್ಣು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸಂಶೋಧನೆಗಳ ಪ್ರಕಾರ, ದೇಹದಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚು ಇದ್ದರೆ ವ್ಯಾಯಾಮದ ಸಮಯದಲ್ಲಿ ಕೊಬ್ಬು ವೇಗವಾಗಿ ಕರಗುತ್ತದೆ.

ಮೂಲಂಗಿ

ಮೂಲಂಗಿಯಲ್ಲಿ ನೀರಿನಾಂಶ ಹೆಚ್ಚಿದ್ದು, ಕ್ಯಾಲೋರಿ ಅತಿ ಕಡಿಮೆ. ಇದು ಬೇಗ ಹೊಟ್ಟೆ ತುಂಬುವಂತೆ ಮಾಡುತ್ತದೆ ಮತ್ತು ತೂಕ ಹೆಚ್ಚಾಗದಂತೆ ತಡೆಯುತ್ತದೆ.

ಶುಂಠಿ

ಶುಂಠಿಯು ದೇಹದ ಉಷ್ಣತೆಯನ್ನು ಹೆಚ್ಚಿಸುವ ಗುಣ ಹೊಂದಿದೆ. ಇದು ಮೆಟಾಬಾಲಿಸಂ ವೇಗಗೊಳಿಸಿ, ಇನ್ಸುಲಿನ್ ಪ್ರತಿರೋಧವನ್ನು ಕಡಿಮೆ ಮಾಡುವ ಮೂಲಕ ಫ್ಯಾಟ್ ಬರ್ನ್ ಪ್ರಕ್ರಿಯೆಗೆ ನೆರವಾಗುತ್ತದೆ.

ಚಳಿಗಾಲದಲ್ಲಿ ಸರಿಯಾದ ಆಹಾರ ಸೇವನೆ, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಂಡರೆ ತೂಕ ಇಳಿಸುವುದು ಸುಲಭ. ಚಳಿ ಎನ್ನುವ ಕಾರಣಕ್ಕೆ ಜಡವಾಗದೇ, ಆರೋಗ್ಯದ ಕಡೆ ಗಮನ ಕೊಡುವುದು ಅತ್ಯಂತ ಮುಖ್ಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 15T191105.188

8 ಚಿತ್ರಗಳ ನಡುವೆ ಬೆಳ್ಳಿತೆರೆಗೆ ಕೋಟಿಗೊಬ್ಬ ವಿಷ್ಣು ಬಾಸ್

by ಶಾಲಿನಿ ಕೆ. ಡಿ
April 15, 2026 - 7:13 pm
0

Untitled design 2026 04 15T185619.802

ಯೋಗೇಶ್ ಗೌಡ ಕೊ*ಲೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಶಾಸಕ ಸ್ಥಾನಕ್ಕೂ ಕುತ್ತು

by ಶಾಲಿನಿ ಕೆ. ಡಿ
April 15, 2026 - 6:57 pm
0

Untitled design 2026 04 15T183417.794

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ: ಈ ಬಾರಿಯೂ ಹುಡುಗಿಯರೇ ಮೇಲುಗೈ

by ಶಾಲಿನಿ ಕೆ. ಡಿ
April 15, 2026 - 6:37 pm
0

Untitled design 2026 04 15T181310.748

ದೀಪಿಕಾ ವಿಚ್ಚೇದನ..? ಬಿಟೌನ್ ಜ್ಯೋತಿಷಿಯಿಂದ ಬಿಗ್ ಶಾಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 14T071533.350
    ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಇದರಿಂದ ಕರುಳಿನ ಆರೋಗ್ಯ ಹಾಳಾಗುತ್ತೆ ಹುಷಾರ್!
    April 14, 2026 | 0
  • BeFunky collage (55)
    ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ
    April 13, 2026 | 0
  • Untitled design (68)
    ಕೂದಲು ಉದುರುವಿಕೆ ತಡೆಗೆ ಇಲ್ಲಿದೆ ನೋಡಿ ಸುಲಭ ರಾಮಬಾಣ
    April 6, 2026 | 0
  • Untitled design 2026 04 06T071733.539
    ಬೇಸಿಗೆಯಲ್ಲಿ ಅನಾನಸ್ ಜ್ಯೂಸ್ ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು.?
    April 6, 2026 | 0
  • Untitled design (36)
    ನಿದ್ರಾಹೀನತೆಯಿಂದ ಬಳಲುತ್ತಿದ್ದೀರಾ ? ಹಾಗಾದ್ರೆ ರಾತ್ರಿ ಮಲಗುವ ಮುನ್ನ ಈ ಸಿಂಪಲ್‌ ಟಿಪ್ಸ್‌ ಅನುಸರಿಸಿ ನೋಡಿ
    April 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version