ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ಧಿ ರಾಜಕಾರಣಿ ಎಸ್ ಎಂ ಕೃಷ್ಣ ಆರೋಗ್ಯದಲ್ಲಿ ಮತ್ತೆ ಏರುಪೇರಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರನ್ನು ದಾಖಲಿಸಲಾಗಿದ್ದು, ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.