- ‘ನಾಡಪ್ರಭು ಕೆಂಪೇಗೌಡ’ ಪೋಸ್ಟರ್ ಬಿಡುಗಡೆ
- ನಾಡಪ್ರಭು ಕೆಂಪೇಗೌಡ ಪಾತ್ರದಲ್ಲಿ ಡಾಲಿ ಧನಂಜಯ್
ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು, ಬಹುನಿರೀಕ್ಷಿತ ಐತಿಹಾಸಿಕ ಚಿತ್ರ ‘ನಾಡಪ್ರಭು ಕೆಂಪೇಗೌಡ’ ಇದೀಗ ತನ್ನ ಮೊದಲ ಪೋಸ್ಟರ್ ಬಿಡುಗಡೆ ಮಾಡಿ ಭಾರೀ ಸದ್ದು ಮಾಡುತ್ತಿದೆ. ಡಾಲಿ ಧನಂಜಯ್ ಅವರು ನಾಡಪ್ರಭು ಕೆಂಪೇಗೌಡ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮೇರು ಯೋಧ ಮತ್ತು ಬೆಂಗಳೂರಿನ ಕಾರಣಿಕ, ಕೆಂಪೇಗೌಡರ ಜೀವನ ಚರಿತ್ರೆಯನ್ನು ಹೇಳುವ ಕಥೆ ನಾಡಪ್ರಭು ಕೆಂಪೇಗೌಡ ಆಗಿದ್ದು, ಇದನ್ನು ಖ್ಯಾತ ನಿರ್ದೇಶಕ ಡಾ.ಟಿ.ಎಸ್.ನಾಗಾಭರಣ ನಿರ್ದೇಶಿಸಲಿದ್ದಾರೆ. ಈ ಚಿತ್ರದಲ್ಲಿ ನಟರಾಕ್ಷಸ ಡಾಲಿ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ನಲ್ಲಿ, ಧನಂಜಯ ಅವರ ಐತಿಹಾಸಿಕ ಲುಕ್ ಅಭಿಮಾನಿಗಳ ಗಮನ ಸೆಳೆದಿದೆ.

ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ಈ ಚಿತ್ರವನ್ನು ಡಾ.ಎಂ.ಎನ್.ಶಿವರುದ್ರಪ್ಪ ಮತ್ತು ಶುಭಂ ಗುಂಡಲ ಈಶ್ವರ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ. ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.