- ‘ಕೋಟಿ’ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ
- ‘ಕೋಟಿ’ ಸಿನಿಮಾದಲ್ಲಿ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡ ಧನಂಜಯ್
ಸ್ಯಾಂಡಲ್ವುಡ್ನ ನಟ ಡಾಲಿ ಧನಂಜಯ್ ಅಭಿನಯದ ‘ಕೋಟಿ’ಸಿನಿಮಾ ಇಂದು ರಾಜ್ಯಾದ್ಯಂತ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚೆನ್ನೈ ಮತ್ತು ಹೈದರಾಬಾದ್ನಲ್ಲೂ ಹಲವು ಶೋಗಳಿವೆ. ನಿನ್ನೆ ಮತ್ತು ಮೊನ್ನೆ ಬೆಂಗಳೂರು, ಮೈಸೂರು, ಶಿವಮೊಗ್ಗಗಳಲ್ಲಿ ಶೋಗಳು ನಡೆದಿದ್ದು ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಈ ಸಿನಿಮಾದಲ್ಲಿ ಧನಂಜಯ್ ಅವರು ‘ಕೋಟಿ’ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ ನಾಯಕನ ಪಾತ್ರದ್ದು. ಈ ‘ಕೋಟಿ’ಸಿನಿಮಾದ ಕಥೆ ಇಡೀ ಪ್ಯಾಮಿಲಿಯೇ ಕೂತು ನೋಡುವಂತ ಸಿನಿಮಾವಾಗಿದೆ.

ಬುಧವಾರ ಬೆಂಗಳೂರಿನಲ್ಲಿ ನಡೆದ ಸೆಲೆಬ್ರಿಟಿ ಪ್ರೀಮಿಯರ್ ಶೋನಲ್ಲಿ600 ಅಧಿಕ ಸಿನಿಮಾ ತಾರೆಗಳು ಈ ಸಿನಿಮಾ ವೀಕ್ಷಿಸಿದರು. ಸಿನಿಮಾದಲ್ಲಿನ ಧನಂಜಯ್ ಅವರ ಕಾಮನ್ ಮ್ಯಾನ್ ‘ಕೋಟಿ’ ಪಾತ್ರದ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಥಿಯೇಟರಿನ ಹೊರಗೂ ಸಿನಿಮಾ ಕ್ಲೈಮ್ಯಾಕ್ಸ್ ನೆರೆದಿದ್ದ ಜನರ ಮಾತಿನ ವಿಷಯವಾಗಿತ್ತು. ರಾಜ್ಯಾದ್ಯಂತ ಬಿಡುಗಡೆಗೊಳ್ಳುತ್ತಿರುವ ‘ಕೋಟಿ’ ಮುಂದಿನ ವಾರಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.