ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್ ಇಲಾಖೆ ನೋಟಿಸ್ ಕೊಟ್ಟು ವಿಚಾರಣೆಗೆ ಹಾಜರಾಗುವಂತೆ ಹೇಳಿದೆ. ಅಕ್ರಮವಾಗಿ ಐಪಿಎಲ್ ಪ್ರಸಾರ ಮಾಡಿದ ಆರೋಪ ಹೊಂದಿರುವ ಫೇರ್ಪ್ಲೇ ಆ್ಯಪ್ನ ಪ್ರಚಾರದಲ್ಲಿ ನಟಿ ತಮನ್ನಾ ಭಾಟಿಯಾ ಭಾಗಿ ಆಗಿದ್ದರು ಎನ್ನಲಾಗಿದ್ದು, ಈ ಆ್ಯಪ್ ಮಹದೇವ್ ಆನ್ಲೈನ್ ಗೇಮಿಂಗ್ ಆ್ಯಪ್ನ ಅಂಗಸಂಸ್ಥೆ ಆಗಿದೆ.
2023ರ ಐಪಿಎಲ್ ಒಟಿಟಿ ಹಕ್ಕು ಜಿಯೋ ಸಿನಿಮಾ ಬಳಿ ಇತ್ತು. ಯಾವುದೇ ಬ್ರಾಡಕಾಸ್ಟಿಂಗ್ ಹಕ್ಕು ಪಡೆಯದೇ ಆ ವರ್ಷ ಐಪಿಎಲ್ನ ಫೇರ್ಪ್ಲೇ ಆ್ಯಪ್ನಲ್ಲಿ ಪ್ರಸಾರ ಮಾಡಲಾಗಿತ್ತು. ಇದರಿಂದ ಅಧಿಕೃತವಾಗಿ ಪ್ರಸಾರ ಹಕ್ಕು ಪಡೆದ ಜಿಯೋ ಸಿನಿಮಾಗೆ ಸಾಕಷ್ಟು ನಷ್ಟ ಆಗಿತ್ತು. ಹೀಗಾಗಿ ಫೇರ್ಪ್ಲೇ ಆ್ಯಪ್ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.