- ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ನ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು
ಹೆಲಿಕಾಪ್ಟರ್ ದುರಂತರದಲ್ಲಿ ಇರಾನ್ನ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಅಬ್ದೊಲ್ಲಾಹಿಯಾನ್ ಹಾಗೂ ಕೆಲ ಹಿರಿಯ ಅಧಿಕಾರಿಗಳು ಮೃತಪಟ್ಟಿದ್ದಾರೆ. ಎಂದು ರಾಯಿಟರ್ಸ್ ವರದಿ ಮಾಡಿದೆ.
ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಭಾನುವಾರ ಅಜೆರ್ ಬೈಜಾನ್ ಪ್ರಾಂತ್ಯದ ಗಡಿಯ ಗುಡ್ಡಪ್ರದೇಶಗಳ ವ್ಯಾಪ್ತಿಯಲ್ಲಿ ಅಪಘಾತಕ್ಕಿಡಾಗಿತ್ತು. ರೈಸಿ ನೆರೆಯ ರಾಷ್ಟ್ರವಾದ ಅಝರ್ಬೈಜಾನ್ನಲ್ಲಿ ಆ ದೇಶದ ಅಧ್ಯಕ್ಷ ಅಲ್ಹಾಮ್ ಅಲಿಯಎವ್ ಜತೆ ಅಣೆಕಟ್ಟು ಉದ್ಘಾಟಿಸಿದ್ದರು. ಉಭಯ ರಾಷ್ಟ್ರಗಳ ಅರಾಸ್ ನದಿಗೆ ನಿರ್ಮಿಸಿದ ಮೂರನೇ ಅಣೆಕಟ್ಟು ಇದಾಗಿದೆ.