• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

7ನೇ ದಿನವೂ ಮುಂದುವರೆದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 23, 2026 - 12:49 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design (79)

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸರ್ಕಾರದ ಭರವಸೆ ನೀಡಿದ ಬಳಿಕವೂ ಬೇಡಿಕೆಗಳು ಈಡೇರದ ಹಿನ್ನೆಲೆ ಕಾರ್ಯಕರ್ತೆಯರ ಆಕ್ರೋಶ ಹೆಚ್ಚಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆರಂಭವಾಗಿರುವ ಅಹೋರಾತ್ರಿ ಪ್ರತಿಭಟನೆ ಏಳನೇ ದಿನಕ್ಕೂ ಮುಂದುವರಿದಿದ್ದು, ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವು ದಿನಗಳಿಂದ ಹಗಲು-ರಾತ್ರಿ ಎನ್ನದೆ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ತಮ್ಮ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂಬುದು ಕಾರ್ಯಕರ್ತೆಯರ ಆರೋಪವಾಗಿದೆ. ಕೇವಲ ಭರವಸೆ ನೀಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಕುರಿತು ಸರ್ಕಾರ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

RelatedPosts

ಜಪಾನ್‌ನ ಬುಲೆಟ್ ರೈಲಿನಲ್ಲಿ ಸಿಎಂ ಡಿಕೆಶಿ ಪಯಣ: ಸಚಿವ ಎಂ.ಬಿ ಪಾಟೀಲ್ ಸಾಥ್‌

ರಾಜ್ಯದಲ್ಲಿ ಮುಂದುವರಿದ ಚಳಿ ಅಬ್ಬರ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

ಕಾಡಾನೆ ಸ್ಥಳಾಂತರ ವಿಚಾರ: ರಾಜೀನಾಮೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕರು

ಅಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ

ADVERTISEMENT
ADVERTISEMENT

7ನೇ ದಿನವೂ ಮುಂದುವರಿದ ಹೋರಾಟ

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದ್ದರೂ ಹೋರಾಟದ ಕಿಚ್ಚು ಕಡಿಮೆಯಾಗಿಲ್ಲ. ಬದಲಿಗೆ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುತ್ತಿದ್ದಾರೆ.

ಇಂದು ಪ್ರತಿಭಟನೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಕಾರ್ಯಕರ್ತೆಯರು ಸಿದ್ಧತೆ ನಡೆಸಿದ್ದಾರೆ. ಫ್ರೀಡಂ ಪಾರ್ಕ್ ಸುತ್ತಲೂ ಮಾನವ ಸರಪಳಿ ನಿರ್ಮಿಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಯೋಜಿಸಿದ್ದಾರೆ. ತಮ್ಮ ಹೋರಾಟಕ್ಕೆ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಜೆನ್‌ ಝೀ ಬೆಂಬಲ ಕೋರಿದ ಆಶಾ ಕಾರ್ಯಕರ್ತೆಯರು

ಈ ಬಾರಿ ಆಶಾ ಕಾರ್ಯಕರ್ತೆಯರು ತಮ್ಮ ಹೋರಾಟಕ್ಕೆ ಯುವ ಸಮುದಾಯದ ಬೆಂಬಲವನ್ನೂ ಕೋರಿದ್ದಾರೆ. ವಿಶೇಷವಾಗಿ ಜೆನ್‌ ಝೀ ಯುವಜನತೆ ತಮ್ಮ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ತಳಮಟ್ಟದಿಂದ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಯುವಜನತೆ ಅರ್ಥಮಾಡಿಕೊಳ್ಳಬೇಕು. ಅವರ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಧ್ವನಿಯಾಗಬೇಕು ಎಂಬುದು ಕಾರ್ಯಕರ್ತೆಯರ ಆಶಯವಾಗಿದೆ.

ಇನ್ನೊಂದೆಡೆ, ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಈಗಾಗಲೇ ಸ್ಯಾಂಡಲ್‌ವುಡ್‌ನ ಹಲವು ನಟಿಯರು ಬೆಂಬಲ ಸೂಚಿಸಿದ್ದಾರೆ. ನಟಿ ರಮ್ಯಾ ಪ್ರತಿಭಟನಾಕಾರರ ಪರವಾಗಿ ಧ್ವನಿ ಎತ್ತಿದ ಬೆನ್ನಲ್ಲೇ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಮತ್ತು ನಟಿ ಕಾರುಣ್ಯ ರಾಮ್ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. 

ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳೇನು?

ಆಶಾ ಕಾರ್ಯಕರ್ತೆಯರು ಸರ್ಕಾರದ ಮುಂದೆ ಹಲವು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ. ಅದರಲ್ಲೂ ಮಾಸಿಕ ಗೌರವಧನ ಹೆಚ್ಚಳ, ಬಾಕಿ ಹಣ ಬಿಡುಗಡೆ, ನಿವೃತ್ತಿ ಸೌಲಭ್ಯ ಮತ್ತು ಹೆಚ್ಚುವರಿ ಕೆಲಸದ ಹೊರೆ ಕಡಿತಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು ಹೀಗಿವೆ

  1. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನವನ್ನು 15,000 ರೂಪಾಯಿಗೆ ನಿಗದಿಪಡಿಸಬೇಕು.

  2. ಬಾಕಿ ಉಳಿದಿರುವ ಗೌರವಧನ ಹಾಗೂ ಇತರ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು.

  3. ನಿವೃತ್ತಿ ಸೌಲಭ್ಯ ಮತ್ತು ಆಶಾ ನಿಧಿ ಯೋಜನೆಯಡಿ ಆರ್ಥಿಕ ನೆರವು ಒದಗಿಸಬೇಕು.

  4. ಗಂಭೀರ ಅನಾರೋಗ್ಯಕ್ಕೆ ತುತ್ತಾದ ಕಾರ್ಯಕರ್ತೆಯರಿಗೆ ಮೂರು ತಿಂಗಳ ಗೌರವಧನದಷ್ಟು ಆರ್ಥಿಕ ನೆರವು ನೀಡಬೇಕು.

  5. ಸಮಸ್ತ ಆ್ಯಪ್ ಮೂಲಕ ನೀಡಲಾಗುತ್ತಿರುವ ಹೆಚ್ಚುವರಿ ಕೆಲಸಗಳನ್ನು ಹಿಂಪಡೆಯಬೇಕು.

  6. 2024-25ನೇ ಸಾಲಿನ 1,500 ರೂಪಾಯಿ ಮಾಸಿಕ ಹಿಂಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕು.

  7. ನಿವೃತ್ತಿ ಹೊಂದುವ ಆಶಾ ಕಾರ್ಯಕರ್ತೆಯರಿಗೆ 5 ಲಕ್ಷ ರೂಪಾಯಿ ಗ್ರಾಚ್ಯುಟಿ ನೀಡಬೇಕು.

  8. ಈಗಾಗಲೇ ನಿವೃತ್ತರಾದವರಿಗೆ ಬಾಕಿ ಇರುವ ನಿವೃತ್ತಿ ಸೌಲಭ್ಯಗಳನ್ನು ತಕ್ಷಣ ವಿತರಿಸಬೇಕು.

  9. ಆಶಾ ಕಾರ್ಯಕರ್ತೆಯರಿಗೆ ಆರು ತಿಂಗಳ ವೇತನ ಸಹಿತ ಹೆರಿಗೆ ರಜೆ ನೀಡಬೇಕು.

  10. ಆರೋಗ್ಯ ಇಲಾಖೆಗೆ ಸಂಬಂಧಿಸದ ಇತರ ಇಲಾಖೆಗಳ ಹೆಚ್ಚುವರಿ ಕೆಲಸಗಳನ್ನು ವಹಿಸಬಾರದು.

  11. NIOS ತರಬೇತಿ ಪೂರ್ಣಗೊಳಿಸಿದ ಕಾರ್ಯಕರ್ತೆಯರಿಗೆ 5,000 ರೂಪಾಯಿ ವಿಶೇಷ ಪ್ರೋತ್ಸಾಹಧನ ನೀಡಬೇಕು.

ಸರ್ಕಾರದ ವಿರುದ್ಧ ಹೆಚ್ಚುತ್ತಿರುವ ಆಕ್ರೋಶ

ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಆರೋಗ್ಯ ಜಾಗೃತಿ, ತಾಯಿ ಮತ್ತು ಮಕ್ಕಳ ಆರೋಗ್ಯ, ಲಸಿಕೆ ಅಭಿಯಾನ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (79)

7ನೇ ದಿನವೂ ಮುಂದುವರೆದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

by ಶಾಲಿನಿ ಕೆ. ಡಿ
November 23, 2026 - 12:49 pm
0

Untitled Design (78)

ಶಬರಿಮಲೆ ಯಾತ್ರಾರ್ಥಿಗಳಿಗೆ ಹೊಸ ರೂಲ್ಸ್; ಪಂಪಾ ನದಿಗೆ ಬಟ್ಟೆ ಎಸೆದರೆ ₹5,000 ದಂಡ ಫಿಕ್ಸ್!

by ಶಾಲಿನಿ ಕೆ. ಡಿ
November 23, 2026 - 12:36 pm
0

Untitled Design (77)

ಇಂದು ಏರಿಕೆ ಕಂಡ ಚಿನ್ನದ ಬೆಲೆ: ಬೆಳ್ಳಿ ದರ ಎಷ್ಟು? ಇಲ್ಲಿದೆ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
November 23, 2026 - 12:18 pm
0

Untitled Design (75)

ಜಪಾನ್‌ನ ಬುಲೆಟ್ ರೈಲಿನಲ್ಲಿ ಸಿಎಂ ಡಿಕೆಶಿ ಪಯಣ: ಸಚಿವ ಎಂ.ಬಿ ಪಾಟೀಲ್ ಸಾಥ್‌

by ಶಾಲಿನಿ ಕೆ. ಡಿ
November 23, 2026 - 11:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (75)
    ಜಪಾನ್‌ನ ಬುಲೆಟ್ ರೈಲಿನಲ್ಲಿ ಸಿಎಂ ಡಿಕೆಶಿ ಪಯಣ: ಸಚಿವ ಎಂ.ಬಿ ಪಾಟೀಲ್ ಸಾಥ್‌
    November 23, 2026 | 0
  • Untitled Design (72)
    ರಾಜ್ಯದಲ್ಲಿ ಮುಂದುವರಿದ ಚಳಿ ಅಬ್ಬರ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ
    November 23, 2026 | 0
  • Untitled Design (71)
    ಕಾಡಾನೆ ಸ್ಥಳಾಂತರ ವಿಚಾರ: ರಾಜೀನಾಮೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕರು
    November 22, 2026 | 0
  • Untitled Design (66)
    ಅಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ
    November 22, 2026 | 0
  • Untitled Design (63)
    ಶಿಕಾರಿ ನೆಪದಲ್ಲಿ ಬಂದು ಎಸ್ಟೇಟ್ ಮಾಲೀಕನ ಮನೆ ಮೇಲೆ ಫೈರಿಂಗ್‌!
    November 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version