• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

3ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರದ ವಿರುದ್ಧ ಕಿಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 19, 2026 - 11:19 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled Design 2026 11 19T111852.205

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಹಗಲು-ರಾತ್ರಿ ಎನ್ನದೆ ಧರಣಿ ನಡೆಸುತ್ತಿದ್ದಾರೆ. ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ, ನಿವೃತ್ತಿ ಸಂದರ್ಭದಲ್ಲಿ ₹5 ಲಕ್ಷ ಇಡಿಗಂಟು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿರುವ ಕಾರ್ಯಕರ್ತೆಯರು, ಸರ್ಕಾರ ಲಿಖಿತ ಭರವಸೆ ನೀಡುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪರಿಣಾಮವಾಗಿ ಫ್ರೀಡಂ ಪಾರ್ಕ್‌ನ ಆವರಣದಲ್ಲೇ ಪ್ರತಿಭಟನಾಕಾರರಿಗೆ ಜಾಗ ಸಾಲದಂತಾಗಿದೆ. ಹೀಗಾಗಿ ಪಾರ್ಕ್‌ನ ಪಕ್ಕದ ಕಾಳಿದಾಸ ರಸ್ತೆ ಹಾಗೂ ಮುಂಭಾಗದ ಶೇಷಾದ್ರಿ ರಸ್ತೆಯಲ್ಲೂ ಕುಳಿತು ಪ್ರತಿಭಟನೆ ಮುಂದುವರಿಸಿದ್ದಾರೆ. ತಮ್ಮ ಕುಟುಂಬ, ಮನೆ-ಮಠಗಳನ್ನು ಬಿಟ್ಟು ಬಂದಿರುವ ಕಾರ್ಯಕರ್ತೆಯರು ಸರ್ಕಾರದ ಗಮನ ಸೆಳೆಯಲು ಹೋರಾಟ ತೀವ್ರಗೊಳಿಸಿದ್ದಾರೆ.

RelatedPosts

ಬಸವಣ್ಣನ ಕುರಿತು ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಲೇಖಕ ರವಿ ಹಂಜ್

ರಾಜ್ಯದ ಜನರೇ ಎಚ್ಚರ! ಮುಂದಿನ ಎರಡು ದಿನ ಮೈಕೊರೆಯುವ ಚಳಿ, ಹಲವೆಡೆ ಒಣಹವೆ

ಸಮಸ್ಯೆ ಬಗೆಹರಿಸುವುದಾಗಿ ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿಕೆಶಿ ಭರವಸೆ

ಹಾಸನದಲ್ಲಿ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ: ಕಾಡಾನೆ ಕೊನೆಗೂ ಲಾಕ್

ADVERTISEMENT
ADVERTISEMENT
ಕೊರೆವ ಚಳಿಯಲ್ಲೂ ಮುಂದುವರಿದ ಅಹೋರಾತ್ರಿ ಧರಣಿ

ಬೆಂಗಳೂರಿನಲ್ಲಿ ರಾತ್ರಿ ಚಳಿಯ ಪ್ರಮಾಣ ಹೆಚ್ಚಾಗುತ್ತಿದ್ದರೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ. ಕಂಬಳಿ ಹೊದ್ದು ಫ್ರೀಡಂ ಪಾರ್ಕ್‌ನಲ್ಲೇ ರಾತ್ರಿ ಕಳೆಯುತ್ತಿದ್ದಾರೆ. ಕೆಲವರು ತಮ್ಮ ಪುಟ್ಟ ಮಕ್ಕಳನ್ನೂ ಜೊತೆಯಲ್ಲಿ ಕರೆತಂದು ಬೀದಿಯಲ್ಲೇ ಪ್ರತಿಭಟನೆ ನಡೆಸುತ್ತಿರುವ ದೃಶ್ಯಗಳು ಗಮನ ಸೆಳೆಯುತ್ತಿವೆ.

ಹಗಲು ಬಿಸಿಲು, ರಾತ್ರಿ ಚಳಿ ಎನ್ನದೆ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರು, ಸರ್ಕಾರ ತಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. ಹಲವು ಬಾರಿ ಮನವಿ ಸಲ್ಲಿಸಿದರೂ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ ಎಂಬುದು ಪ್ರತಿಭಟನಾಕಾರರ ಅಸಮಾಧಾನಕ್ಕೆ ಕಾರಣವಾಗಿದೆ.

ಇಂದಿನ ಸಚಿವ ಸಂಪುಟ ಸಭೆಯತ್ತ ಆಶಾ ಕಾರ್ಯಕರ್ತೆಯರ ಚಿತ್ತ

ಆಶಾ ಕಾರ್ಯಕರ್ತೆಯರ ಹೋರಾಟದ ನಡುವೆಯೇ ಇಂದು ನಡೆಯಲಿರುವ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ. ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಯಾದ ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನದ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

ಆರೋಗ್ಯ ಇಲಾಖೆಯ ನಿರ್ದೇಶಕಿ ರಜನಿ ಅವರು, ₹15 ಸಾವಿರ ಗೌರವಧನ ನಿಗದಿಪಡಿಸುವ ಪ್ರಸ್ತಾವನೆಯನ್ನು ಇಂದಿನ ಸಚಿವ ಸಂಪುಟ ಸಭೆಗೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಂಪುಟ ಸಭೆಯಲ್ಲಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ಆಶಾ ಕಾರ್ಯಕರ್ತೆಯರಲ್ಲಿ ಮೂಡಿದೆ.

ಆದರೆ, ಕೇವಲ ಭರವಸೆಗಳಿಗೆ ತೃಪ್ತರಾಗುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಪ್ರತಿಭಟನಾಕಾರರು ನೀಡಿದ್ದಾರೆ. ತಮ್ಮ ಬೇಡಿಕೆಗಳ ಕುರಿತು ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡಬೇಕು. ಇಲ್ಲದಿದ್ದರೆ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಎಚ್ಚರಿಕೆ ನೀಡಿದೆ.

ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳು
  • 15,000 ರೂಪಾಯಿ ನಿಶ್ಚಿತ ಮಾಸಿಕ ಗೌರವಧನ ನಿಗದಿ

  • ಸಮಸ್ತ ಆ್ಯಪ್ ಮೂಲಕ ಒತ್ತಾಯದ ಮೊಬೈಲ್ ಕೆಲಸ ಕೈಬಿಡಬೇಕು

  • ನಿವೃತ್ತರಾಗಿರುವವರಿಗೆ ಬಾಕಿ ಇಡಿಗಂಟು ತಕ್ಷಣ ಬಿಡುಗಡೆ

  • ಆಶಾ ನಿಧಿ ಬಾಕಿ ಪ್ರೋತ್ಸಾಹಧನ ಬಿಡುಗಡೆ

  • ಸುಗಮಕಾರರ ಮರುನೇಮಕ ಮತ್ತು ಬಾಕಿ ವೇತನ ಪಾವತಿ

  • ಎನ್ಐಒಎಸ್ ತರಬೇತಿ ಪ್ರೋತ್ಸಾಹಧನ ನೀಡಿಕೆ

  • ತೀವ್ರ ಕಾಯಿಲೆ ಚಿಕಿತ್ಸಾ ಅವಧಿಯಲ್ಲಿ 3 ತಿಂಗಳ ಗೌರವಧನ

  • ಸೇವಾ ನಿವೃತ್ತಿ ಇಡಿಗಂಟನ್ನು ಬಂಗಾಳ ಮಾದರಿ 5 ಲಕ್ಷಕ್ಕೆ ಹೆಚ್ಚಿಸಬೇಕು

  • 6 ತಿಂಗಳ ವೇತನ ಸಹಿತ ಹೆರಿಗೆ ರಜೆ ನೀಡಬೇಕು

  • ಆರೋಗ್ಯ ಇಲಾಖೆಗೆ ಸಂಬಂಧಿಸದ ಇತರ ಇಲಾಖೆಗಳ ಹೆಚ್ಚುವರಿ ಕೆಲಸ ವಹಿಸಬಾರದು

  • 2024-25ನೇ ಸಾಲಿನ 1,500 ರೂಪಾಯಿ ಮಾಸಿಕ ಹಿಂಬಾಕಿ ಮೊತ್ತ ಬಿಡುಗಡೆ

ಈ ನಡುವೆ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಯು.ಟಿ. ಖಾದರ್, ಈ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design

ನೃತ್ಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಜೀ ತೆಲುಗು ಸಜ್ಜು; ಬೆಂಗಳೂರಿನಲ್ಲಿ ನ. 22ರಂದು ಆಡಿಷನ್

by ಶಾಲಿನಿ ಕೆ. ಡಿ
November 20, 2026 - 12:32 pm
0

Untitled Design (6)

ಬಸವಣ್ಣನ ಕುರಿತು ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಲೇಖಕ ರವಿ ಹಂಜ್

by ಶಾಲಿನಿ ಕೆ. ಡಿ
November 20, 2026 - 12:22 pm
0

Untitled Design (4)

ಕಾವೇರಿ ನೀರು ವಿವಾದ: ತಮಿಳುನಾಡಿಗೆ ಬಿಗ್‌ ಶಾಕ್, ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

by ಶಾಲಿನಿ ಕೆ. ಡಿ
November 20, 2026 - 11:55 am
0

Untitled Design (3)

ಬಂಗಾರ ಖರೀದಿಸುವವರಿಗೆ ಬಂಪರ್ ಗುಡ್‌ನ್ಯೂಸ್: ಮತ್ತೆ ಪಾತಾಳಕ್ಕೆ ಕುಸಿದ ಚಿನ್ನ, ಬೆಳ್ಳಿ ಬೆಲೆ

by ಶಾಲಿನಿ ಕೆ. ಡಿ
November 20, 2026 - 11:34 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (6)
    ಬಸವಣ್ಣನ ಕುರಿತು ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಲೇಖಕ ರವಿ ಹಂಜ್
    November 20, 2026 | 0
  • Untitled Design (1)
    ರಾಜ್ಯದ ಜನರೇ ಎಚ್ಚರ! ಮುಂದಿನ ಎರಡು ದಿನ ಮೈಕೊರೆಯುವ ಚಳಿ, ಹಲವೆಡೆ ಒಣಹವೆ
    November 20, 2026 | 0
  • Untitled Design (5)
    ಸಮಸ್ಯೆ ಬಗೆಹರಿಸುವುದಾಗಿ ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿಕೆಶಿ ಭರವಸೆ
    November 19, 2026 | 0
  • Untitled Design (2)
    ಹಾಸನದಲ್ಲಿ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ: ಕಾಡಾನೆ ಕೊನೆಗೂ ಲಾಕ್
    November 19, 2026 | 0
  • Untitled Design 2026 11 19T132558.958
    ₹45 ಕೋಟಿ ಭೂ ಹಗರಣ: ತಹಶೀಲ್ದಾರ್ ವಿರುದ್ಧ ತನಿಖೆಗೆ ಆದೇಶ, ನಾಲ್ವರು ಸಿಬ್ಬಂದಿ ಅಮಾನತು
    November 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version