ಬೆಂಗಳೂರು, ಏಪ್ರಿಲ್ 05: ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದವರು ಹಾಗೂ ದಮನಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು. ಮಹಾನ್ ನಾಯಕರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಇಂದು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾಸೌಧದ ಪಶ್ಚಿಮ ದ್ವಾರದ ಬಳಿ ಆಯೋಜಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 118 ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.
ಬಾಬು ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ನಾಯಕರು. ದೀರ್ಘ ಕಾಲ ಕೇಂದ್ರ ಸರ್ಕಾರದ ಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು. ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ಎಲ್ಲಾ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು. ಅವರ ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. “ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ” ಎಂದು ನುಡಿದ ಅವರು ಅಪ್ರತಿಮ ದೇಶಭಕ್ತರೂ ಆಗಿದ್ದರು. ದೇಶಕ್ಕೆ ಮಾದರಿ ಎನ್ನುವ ನಾಯಕರು. ಅವರ ಜನ್ಮದಿನೋತ್ಸವದಂದು ಅವರಿಗೆ ನಮನಗಳನ್ನು ಸಲ್ಲಿಸಲಾಗಿದೆ ಎಂದರು.
ಕೊಡಗು ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ: ತಪ್ಪಿತಸ್ಥರ ವಿರುದ್ಧ ಕ್ರಮ
ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪ್ರಕರಣದಲ್ಲಿ ಎಫ್ಐಆರ್ ಆಗಿದ್ದು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಬಿಜೆಪಿಯವರು ಹತಾಶರಾಗಿದ್ದಾರೆ
ಬಿಜೆಪಿಯ ಬೇಡಿಕೆಗೆಲ್ಲಾ ಉತ್ತರಿಸಲು ಸಾಧ್ಯವಿಲ್ಲ. ಬಿಜೆಪಿಯವರು ಹತಾಶರಾಗಿದ್ದು, ಈ ರೀತಿಯ ಹೇಳಿಕೆ ನೀಡಿದ್ದಾರೆ. ಸಾವಿನಲ್ಲೂ ರಾಜಕೀಯ ಮಾಡುವುದು ಬಿಜೆಪಿಗೆ ಅಭ್ಯಾಸ. ಅವರು ಹೇಳಿದ್ದಕ್ಕೆಲ್ಲಾ ಪ್ರತಿಕ್ರಿಯೆ ನೀಡಲಾಗದು ಎಂದರು.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54