ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳ ಮೇಲೆ ನಿರ್ಬಂಧ ಹೇರಿದ ನಂತರ, ಭಜರಂಗ ದಳದ ಮೇಲೂ ನಿಷೇಧ ಆಚರಣೆಗೆ ತರಬೇಕು ಎಂದು, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಭಜರಂಗ ದಳವನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಹರಿಪ್ರಸಾದ್ ,ಭಜರಂಗ ದಳವನ್ನು ನಿಷೇಧಿಸಬೇಕು. ಅಗತ್ಯವಿದ್ದರೆ ಬ್ಯಾನ್ ಮಾಡಬೇಕು ಎಂದಿದ್ದಾರೆ. ಬೇಡಿಕೆ 2023ರ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಮಾಡಿದ ಭರವಸೆಯ ಹಿನ್ನೆಲೆಯಲ್ಲಿ ಬಂದಿದೆ. ಕಾಂಗ್ರೆಸ್, ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗ ದಳವನ್ನು ನಿಷೇಧಿಸುವುದಾಗಿ ಘೋಷಿಸಿತ್ತು.
ಸರ್ಕಾರಿ ಜಾಗ, ಸಾರ್ವಜನಿಕ ಸ್ಥಳಗಳು, ಉದ್ಯಾನವನ, ಸರ್ಕಾರಿ ಶಾಲೆ ಮತ್ತು ಅನುದಾನಿತ ಶಾಲೆಗಳಲ್ಲಿ ಆರ್.ಎಸ್.ಎಸ್. ಮತ್ತು ಇತರ ಸಂಘ-ಸಂಸ್ಥೆಗಳ ಚಟುವಟಿಕೆಗಳು, ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿದೆ. ಈ ಹಿನ್ನೆಲೆಯಲ್ಲಿ, ಭಜರಂಗ ದಳಕ್ಕೂ ಅಂಕುಶ ಬೀಳಲಿದೆಯೇ ಎಂಬ ಚರ್ಚೆ ಆರಂಭವಾಗಿದೆ.
ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳನ್ನು ನಿಷೇಧಿಸಿದ್ದು ಮತ್ತು ಈಗ ಭಜರಂಗ ದಳದ ಬಗ್ಗೆ ಬರುವ ಬೇಡಿಕೆಗಳು ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗಳನ್ನು ಪ್ರಾರಂಭಿಸಿವೆ.ಸರ್ಕಾರವು ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಹರಿಪ್ರಸಾದ್ ಅವರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದೇ ಎಂಬುದು ಇನ್ನೂ ಸ್ಪಷ್ಟವಿಲ್ಲ.