ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ: ಏರ್‌ಪೋರ್ಟ್ ಸಿಬ್ಬಂದಿ ಅರೆಸ್ಟ್‌‌

Untitled design 2026 01 22T162333.742

ಬೆಂಗಳೂರು: ದೇಶದ ಪ್ರಮುಖ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಒಂದಾಗಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯೊಬ್ಬರು ಟಿಕೆಟ್ ಮತ್ತು ಲಗೇಜುಗಳನ್ನು ಪರಿಶೀಲಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಕೊರಿಯಾದ ಪ್ರವಾಸಿಯೊಬ್ಬರು ಆರೋಪಿಸಿದ್ದಾರೆ.

ಭದ್ರತಾ ತಪಾಸಣೆ ಹೆಸರಿನಲ್ಲಿ ವಿದೇಶಿ ಮಹಿಳೆಯನ್ನು ಶೌಚಾಲಯಕ್ಕೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ ಆರೋಪದಡಿ ಏರ್‌ಪೋರ್ಟ್ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಎಫ್.ಡಿ. ಅಪ್ಪನ್ ಅಹ್ಮದ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ದಕ್ಷಿಣ ಕೊರಿಯಾ ಮೂಲದ 36 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಪ್ರವಾಸದ ಉದ್ದೇಶದಿಂದ ಭಾರತಕ್ಕೆ ಬಂದಿದ್ದ ಆ ಮಹಿಳೆ, ತಮ್ಮ ಪ್ರವಾಸ ಮುಗಿಸಿ ಸ್ವದೇಶಕ್ಕೆ ಹಿಂತಿರುಗಲು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಎಲ್ಲಾ ಭದ್ರತಾ ತಪಾಸಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಬೋರ್ಡಿಂಗ್ ಗೇಟ್ ಕಡೆಗೆ ಸಾಗುತ್ತಿದ್ದ ವೇಳೆ, ಸಿಬ್ಬಂದಿ ಅಪ್ಪನ್ ಅಹ್ಮದ್ ಮಹಿಳೆಯನ್ನು ತಡೆದು ನಿಲ್ಲಿಸಿದ್ದಾನೆ. ಅವರ ಬ್ಯಾಗೇಜ್ ಪರಿಶೀಲನೆ ಅಗತ್ಯವಿದೆ ಎಂದು ಹೇಳಿ ಮರುತಪಾಸಣೆಗೆ ಒಳಪಡಿಸಿದ್ದಾನೆ. ಇದಾದ ಬಳಿಕ ವೈಯಕ್ತಿಕ ತಪಾಸಣೆ ನಡೆಸಬೇಕೆಂದು ಹೇಳಿ ಮಹಿಳೆಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದಿದ್ದಾನೆ.

ಆದರೆ, ಆರೋಪಿಯು ಮಹಿಳೆಯನ್ನು ಪುರುಷರ ಶೌಚಾಲಯಕ್ಕೆ ಕರೆದೊಯ್ದು ಅಲ್ಲಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬುದು ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆಯ ಮೈ-ಕೈ ಮುಟ್ಟುವುದು, ತಬ್ಬಿಕೊಳ್ಳಲು ಯತ್ನಿಸುವುದು ಸೇರಿದಂತೆ ಗಂಭೀರ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ವರ್ತನೆಯಿಂದ ಮಹಿಳೆ ತೀವ್ರ ಆತಂಕಕ್ಕೊಳಗಾಗಿದ್ದು, ತಕ್ಷಣವೇ ಅಲ್ಲಿಂದ ಹೊರಬಂದು ಸಿಐಎಸ್‌ಎಫ್ ಸಿಬ್ಬಂದಿಗೆ ವಿಷಯ ತಿಳಿಸಿದ್ದಾಳೆ.

ಸಿಐಎಸ್‌ಎಫ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ವಿಮಾನ ನಿಲ್ದಾಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತನಿಖೆ ಮುಂದುವರಿದಿದ್ದು, ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗುತ್ತಿದೆ.

https://youtu.be/LMp1WjL312Q?si=t6pyaLtjst_DUM0b

ಬೆಂಗಳೂರಲ್ಲಿ ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಲೈಂಗಿಕ ಕಿರುಕುಳ!

 

ಬೆಂಗಳೂರಿನಲ್ಲಿ ಫಿಟ್ನೆಸ್ ಮತ್ತು ನ್ಯೂಟ್ರಿಷನ್ ಇನ್ಫ್ಲೂಯೆನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವತಿಗೆ ಇನ್ಸ್ಟಾಗ್ರಾಮ್ ಮೂಲಕ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಹರಿಯಾಣ ಮೂಲದ ಸುಧೀರ್ ಕುಮಾರ್ ಎಂಬಾತನನ್ನು ದಕ್ಷಿಣ ವಿಭಾಗ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಯುವತಿಯನ್ನು ಸೋಶಿಯಲ್ ಮೀಡಿಯಾ ಮೂಲಕ ಫಾಲೋ ಮಾಡಿ, ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರುದಾರೆಯಾದ ಯುವತಿ ಇನ್ಸ್ಟಾಗ್ರಾಮ್‌ನಲ್ಲಿ ಫಿಟ್ನೆಸ್ ಟಿಪ್ಸ್, ವರ್ಕೌಟ್ ವಿಡಿಯೋಗಳು ಮತ್ತು ನ್ಯೂಟ್ರಿಷನ್ ಸಲಹೆಗಳನ್ನು ಹಂಚಿಕೊಳ್ಳುತ್ತಿದ್ದರು. ಆರೋಪಿ ಸುಧೀರ್ ಕುಮಾರ್ ಅವಳನ್ನು ಫಾಲೋ ಮಾಡಿ ಸಂಪರ್ಕ ಸಾಧಿಸಿದ್ದ. ಮೊದಲು ಸಾಮಾನ್ಯ ಸಂದೇಶಗಳಿಂದ ಆರಂಭವಾದ ಸಂಭಾಷಣೆ ನಂತರ ಅಶ್ಲೀಲ ಮತ್ತು ಲೈಂಗಿಕವಾಗಿ ಪ್ರಚೋದಿಸುವ ಸಂದೇಶಗಳಿಗೆ ತಿರುಗಿತು. ಯುವತಿ ಸಂದೇಶಗಳನ್ನು ನಿರಾಕರಿಸಿದರೂ ಆರೋಪಿ ವಾಟ್ಸಾಪ್ ಸಂಖ್ಯೆ ಪಡೆದು ಕಿರುಕುಳ ಮುಂದುವರಿಸಿದ್ದಾನೆ.

ಹರಿಯಾಣದಲ್ಲಿರುವಾಗಲೇ ಆರೋಪಿ ಯುವತಿಯ ಕುಟುಂಬ ಸದಸ್ಯರ ಮನೆಗೆ ಭೇಟಿ ನೀಡಿ ಸಂಪರ್ಕ ಸಾಧಿಸಿದ್ದ. ನಂತರ ಬೆಂಗಳೂರಿಗೆ ಬಂದು ಯುವತಿಯ ಜಿಮ್ ಮತ್ತು ಸಹೋದ್ಯೋಗಿಗಳ ಬಳಿ ಮಾಹಿತಿ ಕಲೆಹಾಕಲು ಪ್ರಯತ್ನಿಸಿದ್ದಾನೆ. ಈ ವಿಷಯ ತಿಳಿದ ಯುವತಿ ಆತಂಕಗೊಂಡು ದಕ್ಷಿಣ ವಿಭಾಗ ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ.

ದೂರು ಆಧರಿಸಿ ಪೊಲೀಸರು ತನಿಖೆ ಆರಂಭಿಸಿ, ಆರೋಪಿ ಸುಧೀರ್ ಕುಮಾರ್ ಅವನನ್ನು ಬಂಧಿಸಿದ್ದಾರೆ. ಆರೋಪಿಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಇತರ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರು ಆರೋಪಿಯಿಂದ ಸಂಗ್ರಹಿಸಿದ ಸಂದೇಶಗಳು ಮತ್ತು ಚಾಟ್‌ಗಳನ್ನು ಪರಿಶೀಲಿಸುತ್ತಿದ್ದು, ಇನ್ನಿತರ ಇಂತಹ ಘಟನೆಗಳಲ್ಲಿ ಭಾಗಿಯಾಗಿದ್ದಾನೇ ಎಂಬುದನ್ನು ತನಿಖೆ ಮಾಡುತ್ತಿದ್ದಾರೆ. ಈ ಪ್ರಕರಣವು ಸೋಶಿಯಲ್ ಮೀಡಿಯಾ ಮೂಲಕ ಮಹಿಳೆಯರಿಗೆ ಆಗುತ್ತಿರುವ ಲೈಂಗಿಕ ಕಿರುಕುಳದ ಗಂಭೀರತೆಯನ್ನು ಎತ್ತಿ ತೋರಿಸಿದೆ.

ದೂರುದಾರೆಯಾದ ಯುವತಿ, “ನಾನು ಫಿಟ್ನೆಸ್ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದೆ. ಆದರೆ ಆರೋಪಿ ನನ್ನನ್ನು ನಿರಂತರವಾಗಿ ಕಿರುಕುಳ ಮತ್ತು ಮಾನಸಿಕ ಒತ್ತಡಕ್ಕೆ ಒಳಪಡಿಸಿದ. ಅವನು ನನ್ನ ಜೀವನವನ್ನು ಭಯಾನಕಗೊಳಿಸಿದ್ದಾನೆ. ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಕ್ಕೆ ಧನ್ಯವಾದಗಳು” ಎಂದು ಹೇಳಿದ್ದಾಳೆ.

ಪೊಲೀಸರು ಈ ರೀತಿಯ ಆನ್‌ಲೈನ್ ಕಿರುಕುಳಗಳ ಬಗ್ಗೆ ಎಚ್ಚರಿಕೆ ನೀಡಿದ್ದು, ಸಂದೇಹಾಸ್ಪದ ಸಂದೇಶಗಳನ್ನು ತಕ್ಷಣ ರಿಪೋರ್ಟ್ ಮಾಡಬೇಕು ಮತ್ತು ವೈಯಕ್ತಿಕ ಮಾಹಿತಿಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಸಲಹೆ ನೀಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

 

Exit mobile version