ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಅತ್ಯಾಚಾರ ಎಸಗಿ, ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚುವುದಾಗಿ ಬೆದರಿಕೆ ಹಾಕಿದ್ದ ಆರೋಪದಡಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಅರುಣ್ ಎಂಬುವವರನ್ನು ಬಂಧಿಸಿರುವ ಘಟನೆ ನಡೆದಿದೆ.
ಅತ್ಯಾಚಾರ ಹಾಗೂ ಬ್ಲಾಕ್‌ಮೇಲ್
ಅಪ್ರಾಪ್ತ ಬಾಲಕಿಯನ್ನು ನಂಬಿಸಿ, ಡಿಸೆಂಬರ್ 30ರಂದು ಬಿಟಿಎಂ ಲೇಔಟ್‌ನ ಓಯೋ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಅರುಣ್, ಬಿಯರ್ ಕುಡಿಸಿ ಪಾಪಕೃತ್ಯ ಎಸಗಿದ್ದಾನೆ. ಬಳಿಕ ಆಕೆಯ ವಿಡಿಯೋ ಚಿತ್ರೀಕರಣ ಮಾಡಿ, ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡಿದ್ದಾನೆ.
ಸಹಾಯ ಮಾಡುವ ನೆಪದಲ್ಲಿ ಮೋಸ
ಯುವತಿ, ವಿಕ್ಕಿ ಎಂಬ ಯುವಕನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಲು ಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ಬಂದಿದ್ದಳು. ಆ ಸಮಯದಲ್ಲಿ ಕಾನ್ಸ್‌ಟೇಬಲ್ ಅರುಣ್ ಪರಿಚಯಗೊಂಡು, ಕೇಸ್‌ನಲ್ಲಿ ಸಹಾಯ ಮಾಡುವುದಾಗಿ ನಂಬಿಸಿ, ಕೆಲಸ ಕೊಡಿಸುವ ಭರವಸೆ ನೀಡಿ, ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದನು.
ಇಬ್ಬರು ಆರೋಪಿಗಳ ಬಂಧನ
ಈ ಗಂಭೀರ ಪ್ರಕರಣ ಸಂಬಂಧ, ಪೊಲೀಸ್ ಕಾನ್ಸ್‌ಟೇಬಲ್ ಅರುಣ್ ಮತ್ತು ವಿಕ್ಕಿ ಇಬ್ಬರನ್ನೂ ಬಂಧಿಸಿದ್ದು, ತನಿಖೆಯನ್ನು ಮೈಕೊ ಲೇಔಟ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.