ಕೋಲಾರ: ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಹೈವೇಯಲ್ಲಿ ಭೀಕರ ವಾಹನ ಅಪಘಾತ ಸಂಭವಿಸಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ನಡೆದ ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, 11 ಜನರು ತೀವ್ರ ಗಾಯಗೊಂಡಿದ್ದಾರೆ.
ಹೊಸಕೋಟೆಯಿಂದ ಕೆಜಿಎಫ್ (ಕೋಲಾರ ಗೋಲ್ಡ್ ಫೀಲ್ಡ್ಸ್) ದಿಕ್ಕಿಗೆ ಪ್ರಯಾಣಿಸುತ್ತಿದ್ದ ಒಂದು ಟೆಂಪೋ ಟ್ರಾವೆಲರ್ ಮತ್ತು ಒಂದು ಈಚರ್ ಲಾರಿ (Eicher Lorry) ನಡುವೆ ಡಿಕ್ಕಿಯಾಗಿ ಸಂಭವಿಸಿದೆ. ಡಿಕ್ಕಿಯ ಹೊಡೆತದಲ್ಲಿ ಟೆಂಪೋ ವಾಹನವು ಗಂಭೀರವಾಗಿ ಜಖಂ ಆಗಿದೆ
ಘಟನೆಯಲ್ಲಿ ಗಾಯಗೊಂಡ 11 ಜನರನ್ನು ರೆಸ್ಕ್ಯೂ ತಂಡವು ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರಲ್ಲಿ ಹತ್ತು ಜನರ ಸ್ಥಿತಿ ಗಂಭೀರವಾಗಿದ್ದು, ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಮೂವರು ಮೃತರ ದೇಹಗಳನ್ನು ಪೋಸ್ಟ್ಮಾರ್ಟಮ್ ಗಾಗಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಘಟನಾ ಸ್ಥಳದಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.