• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಕಸ ವಿಲೇವಾರಿಗೆ 33 ಪ್ಯಾಕೇಜ್‌‌ಗಳಾಗಿ ಟೆಂಡರ್: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 21, 2025 - 6:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
11 (10)

ಬೆಂಗಳೂರು, ಆ.21: “ನಗರದ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್ ಗಳಾಗಿ ವಿಂಗಡಿಸಿ ಟೆಂಡರ್ ಕರೆಯಲಾಗಿದೆ. ನಾಲ್ಕು ಜಾಗಗಳಲ್ಲಿ ತ್ಯಾಜ್ಯದಿಂದ ಗ್ಯಾಸ್, ವಿದ್ಯುತ್ ಉತ್ಪಾದಿಸುವ ಯೋಜನೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕೇಶವ ಪ್ರಸಾದ್ ಅವರು ಬೆಂಗಳೂರಿನ ಕಸ ವಿಲೇವಾರಿ ಹಾಗೂ ಕಸದ ಸೆಸ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

RelatedPosts

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ

ಲಾರಿ ನಿಯಂತ್ರಣ ತಪ್ಪಿ ಕಾರ್, ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ! ಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ

ADVERTISEMENT
ADVERTISEMENT

“ಕಸ ವಿಲೇವಾರಿಗೆ ನೈಸ್ ಸಂಸ್ಥೆಗೆ ಸೇರಿದ ಜಾಗವನ್ನು ಪಡೆಯಲಾಗಿದೆ. ದೊಡ್ಡಬಳ್ಳಾಪುರ ಬಳಿಯ ಜಾಗಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿಯಿತ್ತು. ಕ್ಯಾಬಿನೆಟ್ ಅನುಮತಿ ಪಡೆದು ಮುಂದುವರಿದಿದ್ದೇವೆ. ಕಸ ವಿಲೇವಾರಿಗೆಂದು ಆಧುನಿಕ ತಂತ್ರಜ್ಞಾನದ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಇದನ್ನು ಗುತ್ತಿಗೆ ಆಧಾರದ ಮೇಲೆ ನಿರ್ವಹಣೆ ಮಾಡಬೇಕು ಎನ್ನುವ ಆಲೋಚನೆಯಿದೆ.” ಎಂದು ತಿಳಿದರು.

ಕಸದ ಮಾಫಿಯಾ ಭೇದಿಸುವುದು ಸುಲಭವಿಲ್ಲ

“ಬೆಂಗಳೂರಿನ ಕಸದ ಮಾಫಿಯಾವನ್ನು ಅಷ್ಟು ಸುಲಭದಲ್ಲಿ ಭೇದಿಸಲು ಆಗುವುದಿಲ್ಲ. ನಿಮ್ಮ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ 98 ವಾರ್ಡ್ ಗಳಿಗೆ ಟೆಂಡರ್ ಕರೆದಾಗ ಅದನ್ನೂ ಮಾಡಲು ಬಿಡಲಿಲ್ಲ. ಕಸ ವಿಲೇವಾರಿ ವಿಚಾರಕ್ಕೆ ನಾನೂ ಸಹ ದೊಡ್ಡ ಹೋರಾಟ ಮಾಡಿದೆ. ಈ ಹಿಂದಿನ ಟೆಂಡರ್ ವ್ಯವಸ್ಥೆ ರದ್ದುಗೊಳಿಸಿ ಹೊಸ ಟೆಂಡರ್ ಕರೆಯಬೇಕು ಎಂದು ನ್ಯಾಯಲಯ ನಮ್ಮಿಂದ ಅಫಿಡವಿಟ್ ಬರೆಸಿಕೊಂಡಿದೆ. ಟೆಂಡರ್ ನಲ್ಲಿ ಅಕ್ರಮ ನಡೆದಿದೆ ಎಂದು ವರದಿ ಬಂದ ಮೇಲೆ ತನಿಖೆ ನಡೆಸಿ ರದ್ದುಗೊಳಿಸಲಾಗಿದೆ. ಕಸ ವಿಲೇವಾರಿ ಘಟಕಗಳನ್ನು ಸಹ ತೆರೆಯಲಾಗಿದೆ” ಎಂದರು.

“ಕಸದ ಸಮಸ್ಯೆ ನಿವಾರಿಸಲು ದೆಹಲಿ, ಹೈದರಾಬಾದ್, ಚೆನ್ನೈ ನಗರಗಳಿಗೆ ಹೋಗಿ ಕಸ ವಿಲೇವಾರಿ ಮಾದರಿಯನ್ನು ನೋಡಿಕೊಂಡು ಬಂದಿದ್ದೇನೆ. ನಾನು ಈ ಹಿಂದೆ ಇಂಧನ ಸಚಿವನಾಗಿದ್ದಾಗ ಒಂಬತ್ತು ಕಡೆ ಕಸ ಆಧಾರಿತ ಇಂಧನ ತಯಾರಿಕೆ ಘಟಕಗಳನ್ನು ಸ್ಥಾಪಿಸಲಾಗಿತ್ತು. ಆದರೆ ಒಂದೇ ಒಂದು ಸಹ ಯಶಸ್ವಿಯಾಗಿಲ್ಲ. ಪ್ರಸ್ತುತ ಬಿಡದಿಯಲ್ಲಿ ಒಂದು ಘಟಕ ಮಾತ್ರ ಕಾರ್ಯಾಚರಣೆ ನಡೆಸುತ್ತಿದೆ. ಸಣ್ಣ ವಿದ್ಯುತ್ ಘಟಕಗಳನ್ನು ಮಾಡಲು ಸಾಧ್ಯವಿಲ್ಲ. ಕನಿಷ್ಠ 20 ಮೆ.ವ್ಯಾ. ಉತ್ಪಾದನೆ ಮಾಡಲು ಸಾಧ್ಯವಿದ್ದರೆ ಮಾತ್ರ ಸ್ಥಾಪಿಸಬಹುದು” ಎಂದರು.

ಕಸದ ಮೇಲಿನ ಸೆಸ್ ಅಳವಡಿಸಿದ್ದು ಬಿಜೆಪಿ

ಕಸದ ಮೇಲಿನ ಸೆಸ್ ವಿಚಾರಾಗಿ ಉತ್ತರಿಸಿದ ಡಿಸಿಎಂ ಅವರು, “2016 ರಲ್ಲಿ ಕೇಂದ್ರ ಸರ್ಕಾರದ ಘನತ್ಯಾಜ್ಯ ನಿರ್ವಹಣಾ ನಿಯಮದ ಪ್ರಕಾರ ನೂತನ ಆದೇಶ ನೀಡಿತು. 2020 ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರ ಕಳುಹಿಸಿದ ಕಸ ಸಂಗ್ರಹ ದರಪಟ್ಟಿಯನ್ನು ಅಳವಡಿಸಿಕೊಂಡಿತು” ಎಂದು ಗೆಜೆಟ್ ಪ್ರತಿಯ ವಿವರವನ್ನು ಸದನಕ್ಕೆ ಓದಿ ತಿಳಿಸಿದರು.

“ಈ ಗೆಜೆಟ್ ಪ್ರತಿಯಲ್ಲಿ ಐದು ಕೆಜಿಗೆ ರೂ.500, ಹತ್ತು ಕೆಜಿಗೆ ರೂ.1,400, ಇಪ್ಪತ್ತೈದು ಕೆಜಿಗೆ ರೂ.3,400, ಐವತ್ತು ಕೆಜಿಗೆ ರೂ.7000, ನೂರು ಕೆಜಿಗೆ ರೂ 14,000 ಶುಲ್ಕ ವಿಧಿಸಬೇಕು ಎಂದು ಹೇಳಲಾಗಿದೆ. ಇದನ್ನು ನೋಡಿ ನನಗೂ ಆಶ್ಚರ್ಯವಾಯಿತು. ಅಲ್ಲದೇ ಖಾಲಿ ಇರುವ ನಿವೇಶನಗಳಿಗೆ ಪ್ರತಿ ಚದರ ಅಡಿಗೆ ರೂ.20 ಶುಲ್ಕ ವಿಧಿಸಬೇಕು ಎಂದಿದೆ. ಈ ದರಗಳು ಹೆಚ್ಚಾಯಿತು ಎಂದು ಅದರಲ್ಲಿ ಕೇವಲ ಶೇ. 25ರಷ್ಟು ಮಾತ್ರ ಸಂಗ್ರಹ ಮಾಡುತ್ತಿದ್ದೇವೆ. ಒಂದು ನಿವೇಶನಕ್ಕೆ ಪ್ರತಿ ಚದರ ಅಡಿಗೆ 2.40 ರೂ. ಸಂಗ್ರಹ ಮಾಡುವಂತೆ ತೀರ್ಮಾನ ಮಾಡಲಾಗಿದೆ” ಎಂದರು.

“ದೊಡ್ಡ ಮಾಲ್ ಗಳು ತಮ್ಮ ಉತ್ಪಾದಿತ ಕಸವನ್ನು ತಾವೇ ವಿಲೇವಾರಿ ಮಾಡಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿಕೊಂಡಿವೆ. ಅದಕ್ಕೆ ನಾವು ಸಹ ಬೆಂಬಲ ನೀಡುತ್ತೇವೆ. ಖಾಲಿ ನಿವೇಶನಗಳು ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದು ಹೊಸ ಕಾನೂನು ಮಾಡಲು ಮುಂದಾಗಿದ್ದೇವೆ. ಇತ್ತೀಚೆಗೆ ಪ್ರಧಾನಿಯವರು ನಗರಕ್ಕೆ ಬಂದಾಗ ಅರಮನೆ ರಸ್ತೆಯಲ್ಲಿ ಹಸಿರು ಪರದೆ ಕಟ್ಟಲಾಯಿತು. ಅಲ್ಲಿಜಾಗ ಖಾಲಿಯಿದೆ ಎಂದು ಜನರು ಕಸ ಎಸೆಯುತ್ತಿದ್ದಾರೆ” ಎಂದು ಹೇಳಿದರು.

“ಯಾವ ರೀತಿಯ ಕಸ ಉತ್ಪಾದನೆಯಾಗುತ್ತದೆ ಎಂದು ನಾಗರೀಕರು ಸ್ವತಃ ಘೋಷಿಸಲು ಅವಕಾಶ ನೀಡಲಾಗಿದೆ. ಇದರ ಅನ್ವಯ 35 ಸಾವಿರ ಜನರು ಸ್ವಯಂ ಘೋಷಣೆ ಮಾಡಿದ್ದಾರೆ. ಇವರುಗಳೇ ಕಸವನ್ನು ವಿಲೇವಾರಿ ಮಾಡಿಕೊಳ್ಳುತ್ತಾರೆ. ಕಟ್ಟಡ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ಸೂಚಿಸಿದ್ದೇನೆ. ಇದರ ಬಗ್ಗೆಯೂ ಟೆಂಡರ್ ಕರೆಯಲಾಗಿದೆ. ಅಲ್ಲಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗವುದು” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version