ಬೆಂಗಳೂರಿನಲ್ಲಿ ಯುವತಿ ಆಪಹರಿಸಿ ಅತ್ಯಾಚಾರ: ಇಬ್ಬರು ಅರೆಸ್ಟ್

Untitled design 2025 04 03t093826.711

ಬೆಂಗಳೂರು: ಬಿಹಾರ ಮೂಲದ ಯುವತಿ ಮತ್ತು ಅವಳ ಅಣ್ಣ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಅವರ ಮಾರ್ಗ ತಡೆದು, ಯುವತಿಯ ಅಣ್ಣನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ನಂತರ ಯುವತಿಯನ್ನು ಬಲವಂತವಾಗಿ ಎಳೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿರುವ ಘಟನೆ ನಗರದ ಕೆ.ಆರ್.ಪುರಂ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಘಟನೆ ಸಂಬಂಧ ಮಹದೇವಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆ ವಿವರ

ಪೊಲೀಸ್ ಮೂಲಗಳ ಪ್ರಕಾರ, ಅತ್ಯಾಚಾರಕ್ಕೊಳಗಾದ ಯುವತಿ ಕೇರಳದ ಎರ್ನಾಕುಲಂನಿಂದ ರೈಲಿನಲ್ಲಿ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದರು. ತಾನು ಬೆಂಗಳೂರಿಗೆ ಬರುತ್ತಿರುವುದಾಗಿ ತನ್ನ ದೊಡ್ಡಮ್ಮನ ಮಗನಿಗೆ ಮುಂಚಿನೆಯೇ ಮಾಹಿತಿ ನೀಡಿದ್ದರು. ಅಣ್ಣ ಯುವತಿಯನ್ನು ಕರೆದುಕೊಳ್ಳಲು ಬಂದಿದ್ದರು. ನಂತರ ಇಬ್ಬರೂ ಊಟಕ್ಕಾಗಿ ಮಹದೇವಪುರ ಕಡೆಗೆ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಅಪರಿಚಿತ, ಇಬ್ಬರು ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಯುವತಿಯ ಅಣ್ಣನ ಮೇಲೆ ಹಲ್ಲೆ ನಡೆಸಿದರು. ನಂತರ, ಯುವತಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದರು.

ಅಪಹರಣದ ನಂತರ, ಯುವತಿ ವಿರೋಧಿಸಿ ಕೂಗಾಡುತ್ತಿದ್ದಾಗ ಸ್ಥಳೀಯರು ತಕ್ಷಣವೇ ಧಾವಿಸಿದರು. ತಕ್ಷಣ ಸ್ಥಳೀಯರು  ಆರೋಪಿಗಳನ್ನು ಹಿಡಿಯಲು ಪ್ರಯತ್ನಿಸಿದರು. ಈ ವೇಳೆ, ಒಬ್ಬ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.  ಪೊಲೀಸರು ಕೂಡಲೇ ಕ್ರಮ ಕೈಗೊಂಡಿದ್ದಾರೆ.

ಪೊಲೀಸರು ಕೈಗೊಂಡ ಕ್ರಮ

ಮಹದೇವಪುರ ಠಾಣೆಯ ಪೊಲೀಸರು ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಮತ್ತು ತನಿಖೆಯನ್ನು ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಆಶಿಫ್ ಎಂಬಾತ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಈ ಘಟನೆಯ ಹಿಂದಿನ ಇತರ ಸಂಗತಿಗಳನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

 

Exit mobile version