ಟಿಕೆಟ್ ದರ ಏರಿಕೆ ಎಫೆಕ್ಟ್: ನಮ್ಮ ಮೆಟ್ರೋ ಪ್ರಯಾಣ ಸಂಖ್ಯೆಯಲ್ಲಿ ಭಾರಿ ಕುಸಿತ

ನಮ್ಮ ಮೆಟ್ರೋ ಪ್ರಯಾಣ ಸಂಖ್ಯೆಯಲ್ಲಿ ಭಾರಿ ಕುಸಿತ

Untitled Design 2025 03 04t121424.488

ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆಯಿಂದಾಗಿ ಬೆಂಗಳೂರಿನಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಜನವರಿಯಲ್ಲಿ 2.49 ಕೋಟಿ ಪ್ರಯಾಣಿಕರು ಮೆಟ್ರೋ ಬಳಕೆ ಮಾಡಿದ್ದರೆ, ಫೆಬ್ರವರಿಯಲ್ಲಿ ಈ ಸಂಖ್ಯೆ 2.09 ಕೋಟಿಗೆ ಇಳಿದಿದೆ. ಪ್ರತಿದಿನ ಸರಾಸರಿ 8 ಲಕ್ಷ ಜನರು ಮೆಟ್ರೋ ಪ್ರಯಾಣ ಮಾಡುತ್ತಿದ್ದರು, ಆದರೆ ಈಗ ಇದು 7.46 ಲಕ್ಷಕ್ಕೆ ಕುಸಿತ ಕಂಡಿದೆ.

ಟಿಕೆಟ್ ದರ ಏರಿಕೆ: ಜನರ ಅಸಮಾಧಾನ ಸ್ಪಷ್ಟ!

ಟಿಕೆಟ್ ದರ ಏರಿಕೆಯಿಂದ ಪ್ರಯಾಣಿಕರು ಬೇಸರಗೊಂಡಿದ್ದು, ಮೆಟ್ರೋ ಬದಲು ಪರ್ಯಾಯ ಸಾರಿಗೆ ವ್ಯವಸ್ಥೆ ಅಥವಾ ಸ್ವಂತ ವಾಹನಗಳನ್ನು ಬಳಸಲು ಪ್ರಾರಂಭಿಸಿದ್ದಾರೆ. ದರ ಏರಿಕೆಯಾದ ನಂತರ ಪ್ರಯಾಣಿಕರ ಸಂಖ್ಯೆಯಲ್ಲಿ ಏಕಕಾಲದಲ್ಲಿ 40 ಲಕ್ಷ ಮಂದಿ ಕಡಿಮೆಯಾಗಿರುವುದು ಗಮನಾರ್ಹ ಸಂಗತಿ.

ಬಿಎಂಆರ್​ಸಿಎಲ್ ದರ ಕಡಿಮೆ ಮಾಡಬಹುದೇ?

ಬೇಸಿಗೆಯಲ್ಲಿ ಸಾಮಾನ್ಯವಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿತ್ತು. ಆದರೆ ದರ ಏರಿಕೆಯಿಂದ ಜನರು ಮೆಟ್ರೋ ಕಡೆಗೆ ತಲೆ ಹಾಕದೆ ಇತರ ಸಾರಿಗೆ ವ್ಯವಸ್ಥೆ ಬಳಸುತ್ತಿದ್ದಾರೆ. ಸಾರ್ವಜನಿಕ ಆಕ್ರೋಶದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ ದರ ಇಳಿಕೆ ಮಾಡುವ ಸಾಧ್ಯತೆ ಇದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ

ಮೆಟ್ರೋ ದರ ಏರಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಮಾರ್ಚ್ 22ರಂದು ನಡೆಯಲಿರುವ ಕರ್ನಾಟಕ ಬಂದ್ ವೇಳೆ, ಮೆಟ್ರೋ ದರ ಇಳಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

Exit mobile version