ನಮ್ಮ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಆಸ್ಪತ್ರೆಗೆ ದಾಖಲು

Untitled design 2025 08 11t233952.760

ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾತ್ರಿ 10:20ರ ಸುಮಾರಿಗೆ, ಫ್ಲಾಟ್‌ಫಾರ್ಮ್ ನಂಬರ್ ಒಂದರಲ್ಲಿ ನಿಂತಿದ್ದ 35 ವರ್ಷದ ಒಬ್ಬ ವ್ಯಕ್ತಿ ಮೆಟ್ರೋ ರೈಲು ಬರುವ ಸಮಯದಲ್ಲಿ ಟ್ರ್ಯಾಕ್‌ಗೆ ಜಿಗಿದಿದ್ದಾನೆ. ಈ ಘಟನೆಯಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತುರ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ:
ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದ ನಂತರ, ಸುರಕ್ಷತಾ ಸಿಬ್ಬಂದಿ ಮತ್ತು ಪ್ರಯಾಣಿಕರು ವ್ಯಕ್ತಿಯನ್ನು ರಕ್ಷಿಸಲು ತಕ್ಷಣ ಕಾರ್ಯನಿರ್ವಹಿಸಿದ್ದಾರೆ. ಆದರೆ, ವ್ಯಕ್ತಿಯು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಘಟನೆಯಿಂದಾಗಿ ಗ್ರೀನ್ ಲೈನ್ ಮೆಟ್ರೋ ಸೇವೆ ಸ್ವಲ್ಪ ಸಮಯದವರೆಗೆ ಅಡ್ಡಿಯಾಗಿತ್ತು. ನಂತರ ಸಂಚಾರ ವ್ಯವಸ್ಥೆಯನ್ನು ಮತ್ತೆ ಸುಗಮಗೊಳಿಸಲಾಯಿತು.

ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಈ ಘಟನೆಗೆ ಸ್ಪಷ್ಟನೆ ನೀಡಿದೆ. “ಮೆಜೆಸ್ಟಿಕ್ ನಿಲ್ದಾಣದಲ್ಲಿ ಒಬ್ಬ ಪ್ರಯಾಣಿಕ ರೈಲು ಬರುವ ಸಮಯದಲ್ಲಿ ಟ್ರ್ಯಾಕ್‌ಗೆ ಜಿಗಿದಿದ್ದಾರೆ. ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ವ್ಯವಸ್ಥೆಯನ್ನು ಮರಳಿ ಸುಗಮಗೊಳಿಸಲಾಗಿದೆ ” ಎಂದು BMRCL ಪ್ರತಿನಿಧಿ ತಿಳಿಸಿದ್ದಾರೆ.

Exit mobile version