• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ಪಿಜಿಗಳಿಗೂ ತಪ್ಪಿದ ಯುದ್ಧದ ಎಫೆಕ್ಟ್: ಊಟದ ಮೆನು ಚೇಂಜ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2026 - 5:00 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 10T165403.580

RelatedPosts

ಕರ್ನಾಟಕ ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ಕಾವೇರಿ ಕಿಚ್ಚು: ಆ.13ರಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ

ಮತಗಳ್ಳತನ ವಿರುದ್ಧ ಕ್ವಿಟ್ ವೋಟ್ ಚೋರಿ ಚಳುವಳಿ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್

‘ಉಸಿರು ಇರುವವರೆಗೂ ರೈತರ ಪರ ಹೋರಾಟ’: ನಿಖಿಲ್ ಕುಮಾರಸ್ವಾಮಿ

ADVERTISEMENT
ADVERTISEMENT

ಬೆಂಗಳೂರು, ಮಾರ್ಚ್ 10: ಮಧ್ಯಪ್ರಾಚ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಈಗ ಭಾರತದಲ್ಲೂ ಕಾಣಿಸಿಕೊಳ್ಳುತ್ತಿದೆ. ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ಉಂಟಾದ ಸಮಸ್ಯೆ ದೇಶದ ಹಲವು ನಗರಗಳ ಜೀವನಶೈಲಿಯ ಮೇಲೆ ಪರಿಣಾಮ ಬೀರಿದೆ. ಅದರಲ್ಲೂ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹೋಟೆಲ್‌ ಉದ್ಯಮ ಹಾಗೂ ಪಿಜಿ (PG) ವ್ಯವಸ್ಥೆಗಳ ಮೇಲೆ ಎಫೆಕ್ಟ್‌‌ ತಟ್ಟಿದೆ. ಗ್ಯಾಸ್ ಕೊರತೆ ಹಾಗೂ ಕಮರ್ಷಿಯಲ್ ಸಿಲಿಂಡರ್ ದರ ಏರಿಕೆಯಿಂದ ಪಿಜಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದಾಗಿ ಪಿಜಿಗಳಲ್ಲಿ ನೀಡುವ ಊಟದ ಮೆನು ಕೂಡ ಬದಲಾವಣೆ ಮಾಡುವ ಪರಿಸ್ಥಿತಿ ಎದುರಾಗಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಮತ್ತು ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದೆ. ಇದರ ಪರಿಣಾಮವಾಗಿ ಭಾರತದಲ್ಲಿಯೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ದರದಲ್ಲಿ ಏರಿಕೆ ಕಂಡುಬಂದಿದೆ. ಸದ್ಯ ಕಮರ್ಷಿಯಲ್ ಸಿಲಿಂಡರ್ ಬೆಲೆ ಸುಮಾರು 115 ರೂಪಾಯಿ ಹೆಚ್ಚಳವಾಗಿದ್ದು, ಇದು ಹೋಟೆಲ್ ಹಾಗೂ ಪಿಜಿ ಮಾಲೀಕರಿಗೆ ಹೆಚ್ಚುವರಿ ಹೊರೆ ತಂದಿದೆ.

ಬೆಂಗಳೂರು ದೇಶದ ಪ್ರಮುಖ ಐಟಿ ನಗರವಾಗಿದ್ದು, ಉದ್ಯೋಗ ಹಾಗೂ ಶಿಕ್ಷಣಕ್ಕಾಗಿ ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಜನರು ಇಲ್ಲಿ ವಾಸಿಸಲು ಬರುತ್ತಾರೆ. ಇವರಲ್ಲಿ ಬಹುತೇಕರು ಪಿಜಿಗಳಲ್ಲೇ ವಾಸಿಸುತ್ತಾರೆ. ನಗರದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಪಿಜಿಗಳು ಕಾರ್ಯನಿರ್ವಹಿಸುತ್ತಿದ್ದು, ಸುಮಾರು 10 ಲಕ್ಷಕ್ಕೂ ಹೆಚ್ಚು ಜನರು ಪಿಜಿಗಳಲ್ಲಿ ವಾಸಿಸುತ್ತಿದ್ದಾರೆ. ಸಾಮಾನ್ಯವಾಗಿ ಪಿಜಿಗಳಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಮೂರು ಬಾರಿ ಊಟದ ವ್ಯವಸ್ಥೆ ಮಾಡಲಾಗುತ್ತದೆ.

ಆದರೆ ಈಗ ಉಂಟಾಗಿರುವ ಗ್ಯಾಸ್ ಕೊರತೆಯಿಂದ ಪಿಜಿ ಮಾಲೀಕರಿಗೆ ಅಡುಗೆ ವ್ಯವಸ್ಥೆ ನಡೆಸುವುದು ಕಷ್ಟಕರವಾಗಿದೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಾಸವಾಗಿರುವುದರಿಂದ ಮುಂದಿನ ದಿನಗಳಲ್ಲಿ ಹೇಗೆ ನಿರ್ವಹಿಸಬೇಕು ಎಂಬ ಆತಂಕ ಪಿಜಿ ಮಾಲೀಕರಲ್ಲಿ ಹೆಚ್ಚಾಗಿದೆ.

ಈ ಕುರಿತು ಪಿಜಿ ಮಾಲೀಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, “ಸದ್ಯ ಪಿಜಿಗಳಿಗೆ ಕಮರ್ಷಿಯಲ್ ಗ್ಯಾಸ್ ಸರಿಯಾಗಿ ಸಿಗುತ್ತಿಲ್ಲ. ನಮ್ಮ ಬಳಿ ಇನ್ನೂ ಒಂದು ವಾರಕ್ಕೆ ಸಾಕಾಗುವಷ್ಟು ಸಿಲಿಂಡರ್ ಮಾತ್ರ ಇದೆ. ಅದರಲ್ಲಿ ಹೇಗಾದರೂ ಮ್ಯಾನೇಜ್ ಮಾಡುತ್ತಿದ್ದೇವೆ. ಆದರೆ ಮುಂದೆ ಏನಾಗುತ್ತದೆ ಎಂಬ ಆತಂಕ ಇದೆ” ಎಂದು ಹೇಳಿದ್ದಾರೆ.

ಗ್ಯಾಸ್ ಬಳಕೆಯನ್ನು ಕಡಿಮೆ ಮಾಡಲು ಪಿಜಿಗಳಲ್ಲಿ ಊಟದ ಮೆನು ಬದಲಾವಣೆ ಮಾಡುವ ನಿರ್ಧಾರ ಮಾಡಲಾಗಿದೆ. ಸಾಮಾನ್ಯವಾಗಿ ಪಿಜಿಗಳಲ್ಲಿ ಚಪಾತಿ, ರೊಟ್ಟಿ, ಪರೋಟಾ ಮುಂತಾದ ಪದಾರ್ಥಗಳನ್ನು ಹೆಚ್ಚು ತಯಾರಿಸಲಾಗುತ್ತದೆ. ಆದರೆ ಈ ಪದಾರ್ಥಗಳನ್ನು ತಯಾರಿಸಲು ಹೆಚ್ಚಿನ ಗ್ಯಾಸ್ ಅಗತ್ಯವಿರುವುದರಿಂದ ಇದೀಗ ಅವುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಇದಕ್ಕೆ ಬದಲು ಗ್ಯಾಸ್ ಕಡಿಮೆ ಬಳಕೆಯಾಗುವ ಅನ್ನ, ಸಾಂಬಾರ್, ಪಲಾವ್, ತರಕಾರಿ ಕರ್ರಿ ಮುಂತಾದ ಪದಾರ್ಥಗಳನ್ನು ಮಾತ್ರ ತಯಾರಿಸುವಂತೆ ಪಿಜಿ ಮಾಲೀಕರು ನಿರ್ಧರಿಸಿದ್ದಾರೆ. ಈಗಾಗಲೇ ಕೆಲ ಪಿಜಿಗಳಲ್ಲಿ ಹೊಸ ಮೆನು ಜಾರಿಗೆ ಬಂದಿದೆ ಎಂದು ತಿಳಿದುಬಂದಿದೆ.

ಇನ್ನು ಕಮರ್ಷಿಯಲ್ ಗ್ಯಾಸ್ ದರ ಏರಿಕೆಯಿಂದ ಪಿಜಿ ಮಾಲೀಕರಿಗೆ ಹೆಚ್ಚುವರಿ ವೆಚ್ಚ ಉಂಟಾದರೂ, ತಕ್ಷಣವೇ ಪಿಜಿ ಬಾಡಿಗೆ ಅಥವಾ ಊಟದ ಶುಲ್ಕ ಹೆಚ್ಚಿಸುವ ಯೋಚನೆ ಇಲ್ಲ ಎಂದು ಪಿಜಿ ಮಾಲೀಕರ ಸಂಘ ತಿಳಿಸಿದೆ. ಸದ್ಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಖರ್ಚನ್ನು ತಾವೇ ಭರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಆದರೆ ಇದೇ ಪರಿಸ್ಥಿತಿ ಮುಂದುವರಿದರೆ ಪಿಜಿ ಮಾಲೀಕರಿಗೆ ಆರ್ಥಿಕವಾಗಿ ದೊಡ್ಡ ಹೊರೆ ಆಗುವ ಸಾಧ್ಯತೆ ಇದೆ. ಹೀಗಾಗಿ ಈ ಸಮಸ್ಯೆ ಪರಿಹರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಪಿಜಿ ಮಾಲೀಕರ ಸಂಘ ಒತ್ತಾಯಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವೋಟ್ (2)

ಕರ್ನಾಟಕ ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

by ಶಾಲಿನಿ ಕೆ. ಡಿ
August 9, 2026 - 5:41 pm
0

ವೋಟ್ (1)

ಕಾವೇರಿ ಕಿಚ್ಚು: ಆ.13ರಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ

by ಶಾಲಿನಿ ಕೆ. ಡಿ
August 9, 2026 - 5:25 pm
0

ವೋಟ್

ಮತಗಳ್ಳತನ ವಿರುದ್ಧ ಕ್ವಿಟ್ ವೋಟ್ ಚೋರಿ ಚಳುವಳಿ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 9, 2026 - 4:58 pm
0

Untitled design 2026 08 09T163701.949

ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2026 - 4:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (2)
    ಕರ್ನಾಟಕ ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ
    August 9, 2026 | 0
  • ವೋಟ್ (1)
    ಕಾವೇರಿ ಕಿಚ್ಚು: ಆ.13ರಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ
    August 9, 2026 | 0
  • ವೋಟ್
    ಮತಗಳ್ಳತನ ವಿರುದ್ಧ ಕ್ವಿಟ್ ವೋಟ್ ಚೋರಿ ಚಳುವಳಿ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 9, 2026 | 0
  • Untitled design 2026 08 09T160913.916
    ‘ಉಸಿರು ಇರುವವರೆಗೂ ರೈತರ ಪರ ಹೋರಾಟ’: ನಿಖಿಲ್ ಕುಮಾರಸ್ವಾಮಿ
    August 9, 2026 | 0
  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version