• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿಗರ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 20, 2026 - 11:30 am
in Flash News, ಕರ್ನಾಟಕ
0 0
0
Untitled design 2026 06 20T112906.137

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳ ನಿವಾಸಿಗಳಿಗೆ ಇಂದು (ಜೂನ್ 20) ವಿದ್ಯುತ್ ವ್ಯತ್ಯಯದ ಬಿಸಿ ತಟ್ಟಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಹಾಗೂ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಕೈಗೊಳ್ಳುತ್ತಿರುವ ತುರ್ತು ಮತ್ತು ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಗರದ 25ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಹಲವು ಗಂಟೆಗಳ ಕಾಲ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಬೆಸ್ಕಾಂ ನೀಡಿರುವ ಮಾಹಿತಿ ಪ್ರಕಾರ, ಕೆಲವು ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಾಗೂ ಇನ್ನೂ ಕೆಲವು ಪ್ರದೇಶಗಳಲ್ಲಿ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕರು ತಮ್ಮ ಅಗತ್ಯ ಕೆಲಸಗಳನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

RelatedPosts

ನಜ್ರಿಯಾ ನಜೀಮ್ ಬಾಳಲ್ಲಿ ಬಿರುಕು?: ನಟಿಯ ಪೋಸ್ಟ್‌ ವೈರಲ್‌

ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್

ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

ಬೆಂಗಳೂರು ವಿದ್ಯುತ್ ಚಿತಾಗಾರಗಳಿಗೆ ಹೊಸ ನಿಯಮ: ಇನ್ನು ಅಧಿಕೃತ ವೆಬ್‌ಸೈಟ್‌ನಲ್ಲೇ ಬುಕ್ಕಿಂಗ್ ಕಡ್ಡಾಯ

ADVERTISEMENT
ADVERTISEMENT
ಆರ್.ಆರ್.ನಗರ ಮತ್ತು ಬನಶಂಕರಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಆರ್.ಆರ್.ನಗರ ಹಾಗೂ ಬನಶಂಕರಿ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಈ ಪಟ್ಟಿಯಲ್ಲಿ ಭಾರತ್ ಲೇಔಟ್, ಪಟಾಲಮ್ಮ ದೇವಸ್ಥಾನದ ಹಿಂಭಾಗ, ಹ್ಯಾಪಿ ವ್ಯಾಲಿ ಲೇಔಟ್, ವಿನಾಯಕ ಲೇಔಟ್, ಉತ್ತರಹಳ್ಳಿ, ಅಪ್ಪಯ್ಯ ಸ್ವಾಮಿ ಲೇಔಟ್, ವಡ್ಡರಪಾಳ್ಯ, ಬನಶಂಕರಿ 5ನೇ ಹಂತ, ಪೂರ್ಣಪ್ರಜ್ಞ ಲೇಔಟ್, ಮಂತ್ರಿ ಆಲ್‌ಫೈನ್ಸ್, ದ್ವಾರಕಾನಗರ, ಬನಶಂಕರಿ 6ನೇ ಹಂತ, 80 ಅಡಿ ರಸ್ತೆ, ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಕಾಲೇಜು ಸುತ್ತಮುತ್ತಲಿನ ಪ್ರದೇಶಗಳು ಸೇರಿವೆ.

ಇದರ ಜೊತೆಗೆ ವೀರಭದ್ರನಗರ, ಬ್ಯಾಂಕ್ ಕಾಲೋನಿ, ಎನ್‌ಟಿವೈ ಲೇಔಟ್, ತ್ಯಾಗರಾಜನಗರ, ಬಸವನಗುಡಿ, ಬನಶಂಕರಿ 3ನೇ ಹಂತ, ಕಟ್ಟರಿಗುಪ್ಪೆ, ಗಿರಿನಗರ 4ನೇ ಹಂತ, ಐಟಿಐ ಲೇಔಟ್, 100 ಅಡಿ ರಿಂಗ್ ರಸ್ತೆ ಹಾಗೂ ಕಾಮಾಕ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಮಲ್ಲೇಶ್ವರಂ ವಿಭಾಗದಲ್ಲೂ ವಿದ್ಯುತ್ ಸರಬರಾಜು ಸ್ಥಗಿತ

ಮಲ್ಲೇಶ್ವರಂ ವಿಭಾಗ ಮತ್ತು ಸಿ-6 ಉಪವಿಭಾಗ ವ್ಯಾಪ್ತಿಯಲ್ಲಿ ನಡೆಯಲಿರುವ ನಿರ್ವಹಣಾ ಕಾಮಗಾರಿಗಳ ಪರಿಣಾಮವಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಎಂ.ಎಸ್. ರಾಮಯ್ಯ ಆಸ್ಪತ್ರೆ, ಪೈಪ್‌ಲೈನ್ ರಸ್ತೆ, ಎಂಎಸ್‌ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್‌ಐ ಕ್ವಾರ್ಟರ್ಸ್, ಸದಾಶಿವನಗರ ಪೊಲೀಸ್ ಠಾಣೆ ಸುತ್ತಮುತ್ತ, ಎಜಿಎಸ್ ಲೇಔಟ್, ಜಲದರ್ಶಿನಿ ಲೇಔಟ್, ರಾಮಯ್ಯ ಬಾಯ್ಸ್ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತನ ಅಪಾರ್ಟ್‌ಮೆಂಟ್ ಸೇರಿದಂತೆ ಹಲವು ಪ್ರದೇಶಗಳು ಈ ವ್ಯತ್ಯಯದ ವ್ಯಾಪ್ತಿಗೆ ಬರುತ್ತವೆ.

ಇದಲ್ಲದೆ ಕಾಫಿ ಡೇ, ರಾಮಯ್ಯ ಆಸ್ಪತ್ರೆ ಎದುರಿನ ವಾಣಿಜ್ಯ ಕಟ್ಟಡಗಳು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಇಸ್ರೋ ಪ್ರದೇಶ, ಡಾಲರ್ಸ್ ಕಾಲೋನಿ, ಚಿಕ್ಕಮಾರನಹಳ್ಳಿ ಹಾಗೂ ಗೌರಿ ಅಪಾರ್ಟ್‌ಮೆಂಟ್ ಪ್ರದೇಶಗಳಲ್ಲೂ ವಿದ್ಯುತ್ ವ್ಯತ್ಯಯ ಇರಲಿದೆ.

ಅಮರಜ್ಯೋತಿ MUSS ವ್ಯಾಪ್ತಿಯಲ್ಲೂ ಪವರ್ ಕಟ್

66/11 ಕೆವಿ ಅಮರಜ್ಯೋತಿ MUSS ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳು ನಡೆಯಲಿರುವ ಹಿನ್ನೆಲೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಜೋಗುಪಾಳ್ಯ, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಜೋಗುಪಾಳ್ಯ ಮುಖ್ಯರಸ್ತೆ, ರಂಕಾ ಕೋರ್ಟ್, ಆರ್ಟಿಲರಿ ರಸ್ತೆ, ಗೌತಂಪುರ, ಕ್ಯಾಂಬ್ರಿಡ್ಜ್ ರಸ್ತೆ, ಆರ್‌ಎಂಝೆಡ್ ಮಿಲೇನಿಯಾ, ಹಲಸೂರು, ಹಲಸೂರು ರಸ್ತೆ ಹಾಗೂ ಅಜಂತಾ ಟ್ರಿನಿಟಿ ಸರ್ಕಲ್ ಪ್ರದೇಶಗಳು ಇದರಲ್ಲಿ ಸೇರಿವೆ.

ಇದೇ ವೇಳೆ ಎಚ್‌ಎಎಲ್ 2ನೇ ಹಂತ, ಬೆನ್ನಿಗಾನಹಳ್ಳಿ, ಎ. ನಾರಾಯಣಪುರ, ಬಿ. ನಾರಾಯಣಪುರ, ಕಗ್ಗದಾಸಪುರ, ಆಕಾಶನಗರ, ಉದಯನಗರ, ಬೈರಸಂದ್ರ, ಸಿ.ವಿ. ರಾಮನ್ ನಗರ, ಎನ್‌ಜಿಇಎಫ್ ಲೇಔಟ್ ಪೂರ್ವ ಭಾಗ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ವರ್ತೂರು ರಸ್ತೆ, ನಾಗವಾರಪಾಳ್ಯ ಹಾಗೂ ಅಬ್ಬೆ ಲೇಔಟ್ ಪ್ರದೇಶಗಳಲ್ಲೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬೆಸ್ಕಾಂ ಅಧಿಕಾರಿಗಳ ಪ್ರಕಾರ, ವಿದ್ಯುತ್ ಜಾಲದ ಸುಧಾರಣೆ ಮತ್ತು ಸುರಕ್ಷಿತ ವಿದ್ಯುತ್ ಸರಬರಾಜು ವ್ಯವಸ್ಥೆಗಾಗಿ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ವಿದ್ಯುತ್ ವ್ಯತ್ಯಯದ ಅವಧಿಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ದಿನಚರಿ ಹಾಗೂ ಅಗತ್ಯ ಕೆಲಸಗಳನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 20T124455.859

ನಜ್ರಿಯಾ ನಜೀಮ್ ಬಾಳಲ್ಲಿ ಬಿರುಕು?: ನಟಿಯ ಪೋಸ್ಟ್‌ ವೈರಲ್‌

by ಶಾಲಿನಿ ಕೆ. ಡಿ
June 20, 2026 - 12:46 pm
0

Untitled design (65)

ಟಿಕೆಟ್ ಇಲ್ಲದೆ ರೈಲು ಹತ್ತಿದ್ರೆ ₹500 ದಂಡ ಫಿಕ್ಸ್!

by ಕವಿತಾ
June 20, 2026 - 12:44 pm
0

Untitled design (64)

ಬೆಂಗಳೂರಿನಲ್ಲಿ ಬಿಟ್ ಕಾಯಿನ್ ಡೀಲ್ ಹೆಸರಿನಲ್ಲಿ ರಾಬರಿ!

by ಕವಿತಾ
June 20, 2026 - 12:10 pm
0

Untitled design 2026 06 20T120047.800

ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್

by ಶಾಲಿನಿ ಕೆ. ಡಿ
June 20, 2026 - 12:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T124455.859
    ನಜ್ರಿಯಾ ನಜೀಮ್ ಬಾಳಲ್ಲಿ ಬಿರುಕು?: ನಟಿಯ ಪೋಸ್ಟ್‌ ವೈರಲ್‌
    June 20, 2026 | 0
  • Untitled design 2026 06 20T120047.800
    ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್
    June 20, 2026 | 0
  • Untitled design 2026 06 20T104923.061
    ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್
    June 20, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version