ಬೆಂಗಳೂರು: 9ನೇ ತರಗತಿ ವಿದ್ಯಾರ್ಥಿ ಎರಡು ದಿನ ಶಾಲೆಗೆ ಗೈರರಾಗಿದ್ದಕ್ಕೆ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕಿ ಬಾಸುಂಡೆ ಬರುವಂತೆ ಹೊಡೆದಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ನಡೆದಿದೆ.
ಘಟನೆಯ ವಿವರ
ಈ ತಿಂಗಳ 14ನೇ ತಾರೀಖಿನಲ್ಲಿ ವಿದ್ಯಾರ್ಥಿ ಶಾಲೆಗೆ ಹಾಜರಾದಾಗ, ಪ್ರಾಂಶುಪಾಲ ರಾಕೇಶ್ ಕುಮಾರ್ ಮತ್ತು ಶಿಕ್ಷಕಿ ಪಿವಿಸಿ ಪೈಪ್ ಮೂಲಕ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಆಘಾತದಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೋಷಕರು ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಯ ತಾಯಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶಾಲೆಯ ಪ್ರಾಂಶುಪಾಲ ಮತ್ತು ಶಿಕ್ಷಕಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆದರೂ ಈವರೆಗೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಹೇಳಿದ್ದಾರೆ. ಹಲ್ಲೆಗೆ ಒಳಗಾದ ಮಗನಿಗೆ ತೀವ್ರ ನೋವಿನಿಂದ ಬಳಲುತ್ತಿದ್ದಾನೆ ಕಣ್ಣೀರಿಟ್ಟಿದ್ದಾರೆ.