ಪ್ರಯಾಣಿಕರಿಗೆ ಗುಡ್‌ನ್ಯೂಸ್‌: ಶೀಘ್ರವೇ ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಸಂಚಾರ..!

Untitled design 2025 12 31T230711.444

ಬೆಂಗಳೂರು: ಕರಾವಳಿ ಕರ್ನಾಟಕ ಮತ್ತು ರಾಜಧಾನಿ ಬೆಂಗಳೂರು ನಡುವಿನ ಪ್ರಯಾಣದ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಹಳಿಗೆ ಬರಲಿದ್ದು, ಈ ಕುರಿತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಖಚಿತ ಮಾಹಿತಿ ನೀಡಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡದ ಪುಣ್ಯಕ್ಷೇತ್ರಗಳಿಗೆ ಮತ್ತು ಪ್ರವಾಸಿ ತಾಣಗಳಿಗೆ ತೆರಳುವವರಿಗೆ ಸುಸಜ್ಜಿತ ಹಾಗೂ ವೇಗದ ಪ್ರಯಾಣ ಮಾಡಬಹುದಾಗಿದೆ.

ಸಚಿವ ವಿ. ಸೋಮಣ್ಣ ನೀಡಿದ ಸುಳಿವು

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ವಿ. ಸೋಮಣ್ಣ, ಮಂಗಳೂರು ಮತ್ತು ಬೆಂಗಳೂರು ನಡುವಿನ ವಂದೇ ಭಾರತ್ ರೈಲು ಸೇವೆ ಈಗಾಗಲೇ ಅಂತಿಮ ಹಂತದಲ್ಲಿದೆ. ಕರ್ನಾಟಕದ ರಮಣೀಯ ಪಶ್ಚಿಮ ಘಟ್ಟಗಳ ಮೂಲಕ ಐಕಾನಿಕ್ ವಂದೇ ಭಾರತ್ ರೈಲುಗಳು ಶೀಘ್ರದಲ್ಲೇ ಓಡುವುದನ್ನು ಜನರು ಕಾಣಬಹುದು. ಇದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು ಎಂದು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನದಾಸ್ ಪೈ ಅವರು ಈ ರೈಲು ಮಾರ್ಗದ ಬಗ್ಗೆ ಮಾಡಿದ್ದ ಪೋಸ್ಟ್ ಹಾಗೂ ಸಾರ್ವಜನಿಕರ ನಿರಂತರ ಒತ್ತಾಯಕ್ಕೆ ಕೇಂದ್ರ ಸರ್ಕಾರ ಈ ಮೂಲಕ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಘಾಟ್ ವಿಭಾಗದಲ್ಲಿ ವಿದ್ಯುದೀಕರಣ ಪೂರ್ಣ

ಈ ಹೈಸ್ಪೀಡ್ ರೈಲು ಸಂಚಾರಕ್ಕೆ ಅತಿ ದೊಡ್ಡ ಸವಾಲಾಗಿದ್ದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿಮೀ ಘಾಟ್ ವಿಭಾಗದ ವಿದ್ಯುದೀಕರಣ ಕಾರ್ಯವು ಈಗ ಪೂರ್ಣಗೊಂಡಿದೆ. ಇದು ಅತ್ಯಂತ ಕಠಿಣ ಮೈಲಿಗಲ್ಲಾಗಿದ್ದು, ಈಗ ರೈಲು ಹಳಿ ಮೇಲೆ ಓಡಲು ಹಸಿರು ನಿಶಾನೆ ಸಿಕ್ಕಂತಾಗಿದೆ. ಘಾಟ್ ವಿಭಾಗದಲ್ಲಿ ಸಂಪೂರ್ಣ ವಿದ್ಯುದೀಕರಣವಾಗಿರುವುದರಿಂದ ರೈಲು ಕಾರ್ಯಾಚರಣೆಯು ಸ್ವಚ್ಛ, ತ್ವರಿತ ಮತ್ತು ಹೆಚ್ಚು ಇಂಧನ ಉಳಿತಾಯ ಮಾಡಲಿದೆ.

ಪ್ರಯಾಣಿಕರಿಗೆ ಆಗುವ ಲಾಭಗಳೇನು?
Exit mobile version