• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರು ವಾಹನ ಸವಾರರ ಗಮನಕ್ಕೆ: ಶಾಲಾ ಸಮಯದಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 23, 2026 - 10:45 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ಅಲರ್ಟ್ (5)

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಶಾಲಾ ಮಕ್ಕಳ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಪೂರ್ವ ಬೆಂಗಳೂರಿನ ಪ್ರಮುಖ ಹಾಗೂ ಜನನಿಬಿಡ ಮಾರ್ಗಗಳಲ್ಲಿ ಒಂದಾಗಿರುವ ವರ್ತೂರು-ಗುಂಜೂರು ರಸ್ತೆಯಲ್ಲಿ ಶಾಲಾ ಸಮಯದಲ್ಲಿ ಭಾರಿ ಸರಕು ಸಾಗಣೆ ವಾಹನಗಳು ಮತ್ತು ಟ್ರಕ್‌ಗಳ ಸಂಚಾರಕ್ಕೆ ಹೆಚ್ಚುವರಿ ನಿರ್ಬಂಧ ವಿಧಿಸಲಾಗಿದೆ.

ವರ್ತೂರು-ಗುಂಜೂರು ಮಾರ್ಗವು ರಾಜ್ಯ ಹೆದ್ದಾರಿ-35ರ ವ್ಯಾಪ್ತಿಗೆ ಬರುತ್ತದೆ. ಈ ರಸ್ತೆಯಲ್ಲಿ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತವೆ. ಅದರಲ್ಲೂ ಶಾಲಾ ಬಸ್‌ಗಳು, ಕಾರುಗಳು ಹಾಗೂ ದ್ವಿಚಕ್ರ ವಾಹನಗಳ ಓಡಾಟ ಹೆಚ್ಚಿರುವ ಸಮಯದಲ್ಲಿ ಭಾರಿ ವಾಹನಗಳ ಸಂಚಾರದಿಂದ ಹಲವು ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿತ್ತು. ಇದರಿಂದ ಶಾಲೆಗೆ ತೆರಳುವ ಹಾಗೂ ಶಾಲೆಯಿಂದ ಮನೆಗೆ ಮರಳುವ ವಿದ್ಯಾರ್ಥಿಗಳು ಮತ್ತು ಪೋಷಕರು ತೊಂದರೆ ಅನುಭವಿಸುತ್ತಿದ್ದರು.

RelatedPosts

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

ADVERTISEMENT
ADVERTISEMENT

ಈ ಹಿಂದೆ ವರ್ತೂರು-ಗುಂಜೂರು ಮಾರ್ಗದಲ್ಲಿ ಬೆಳಿಗ್ಗೆ 7ರಿಂದ 11 ಗಂಟೆಯವರೆಗೆ ಮಾತ್ರ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ವಾಹನ ದಟ್ಟಣೆ ಮತ್ತಷ್ಟು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಿರ್ಬಂಧದ ಅವಧಿಯನ್ನು ವಿಸ್ತರಿಸಲಾಗಿದೆ.

ಮೂರು ಅವಧಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

ಹೊಸ ನಿಯಮದ ಪ್ರಕಾರ ವರ್ತೂರು-ಗುಂಜೂರು ಕ್ಯಾರಿಡಾರ್‌ನಲ್ಲಿ ಭಾರಿ ಸರಕು ಸಾಗಣೆ ವಾಹನಗಳು ಮತ್ತು ಟ್ರಕ್‌ಗಳ ಸಂಚಾರಕ್ಕೆ ದಿನದ ಮೂರು ಪ್ರಮುಖ ಅವಧಿಗಳಲ್ಲಿ ನಿರ್ಬಂಧ ಇರಲಿದೆ.

  • ಬೆಳಿಗ್ಗೆ 7ರಿಂದ 11 ಗಂಟೆವರೆಗೆ
  • ಮಧ್ಯಾಹ್ನ 1ರಿಂದ 3 ಗಂಟೆವರೆಗೆ
  • ಸಂಜೆ 4ರಿಂದ ರಾತ್ರಿ 9 ಗಂಟೆವರೆಗೆ

ಈ ಅವಧಿಯಲ್ಲಿ ಭಾರಿ ಸರಕು ಸಾಗಣೆ ವಾಹನಗಳು ಮತ್ತು ಟ್ರಕ್‌ಗಳು ವರ್ತೂರು-ಗುಂಜೂರು ಮಾರ್ಗವನ್ನು ಪ್ರವೇಶಿಸುವಂತಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಶಾಲಾ ಬಸ್‌ಗಳ ಸಂಚಾರದ ಸಮಯ ಹಾಗೂ ಬೆಳಗ್ಗೆ ಮತ್ತು ಸಂಜೆ ಪೀಕ್ ಅವರ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ವೇಳಾಪಟ್ಟಿಯನ್ನು ರೂಪಿಸಲಾಗಿದೆ. ವಿಶೇಷವಾಗಿ ಮಧ್ಯಾಹ್ನ ಶಾಲೆಗಳು ಬಿಡುವ ಸಮಯದಲ್ಲೂ ಭಾರಿ ವಾಹನಗಳ ಸಂಚಾರವನ್ನು ನಿಯಂತ್ರಿಸುವ ಮೂಲಕ ಮಕ್ಕಳ ಹಾಗೂ ಪೋಷಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.

ಕಿರಿದಾದ ರಸ್ತೆಯಿಂದ ಹೆಚ್ಚಾಗಿದ್ದ ಸಮಸ್ಯೆ

ವರ್ತೂರು-ಗುಂಜೂರು ಭಾಗದ ಹಲವು ರಸ್ತೆಗಳು ಕಿರಿದಾಗಿದ್ದು, ಅನೇಕ ಟಿ-ಜಂಕ್ಷನ್‌ಗಳನ್ನು ಹೊಂದಿವೆ. ಇದರ ನಡುವೆ ರಾಜ್ಯ ಹೆದ್ದಾರಿ ಮಾರ್ಗವಾಗಿರುವುದರಿಂದ ನಿರಂತರವಾಗಿ ಭಾರಿ ವಾಹನಗಳ ಓಡಾಟವೂ ಇರುತ್ತದೆ. ಭಾರಿ ವಾಹನಗಳು ಜಂಕ್ಷನ್‌ಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ವಾಹನಗಳ ವೇಗ ಕುಂಠಿತವಾಗಿ ದಟ್ಟಣೆ ಉಂಟಾಗುತ್ತಿತ್ತು.

ಶಾಲಾ ಸಮಯದಲ್ಲಿ ಈ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತಿತ್ತು. ಶಾಲಾ ಬಸ್‌ಗಳು ಮತ್ತು ಇತರ ವಾಹನಗಳ ಸಂಖ್ಯೆ ಹೆಚ್ಚಾಗುವುದರಿಂದ ಕೆಲವು ಪ್ರಮುಖ ಜಂಕ್ಷನ್‌ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಇದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆಗೆ ತಲುಪಲು ಹಾಗೂ ಶಾಲೆ ಮುಗಿದ ಬಳಿಕ ಮನೆಗೆ ತೆರಳಲು ತೊಂದರೆ ಅನುಭವಿಸುತ್ತಿದ್ದರು.

ಪೋಷಕರ ದೂರು ಹಿನ್ನೆಲೆಯಲ್ಲಿ ಕ್ರಮ

ವರ್ತೂರು-ಗುಂಜೂರು ರಸ್ತೆಯ ಸಂಚಾರ ಸಮಸ್ಯೆ ಕುರಿತು ಸ್ಥಳೀಯ ಸಾರ್ವಜನಿಕರು ಮತ್ತು ಪೋಷಕರಿಂದ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ವೈಟ್‌ಫೀಲ್ಡ್ ಸಂಚಾರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಶಾಲಾ ಸಮಯದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಯಂತ್ರಿಸುವುದರಿಂದ ರಸ್ತೆ ಮೇಲಿನ ವಾಹನ ದಟ್ಟಣೆ ಕಡಿಮೆಯಾಗುವ ನಿರೀಕ್ಷೆ ಇದೆ.

ಹೊಸ ಸಂಚಾರ ನಿಯಮದಿಂದ ಶಾಲಾ ಮಕ್ಕಳಿಗೆ ಮಾತ್ರವಲ್ಲದೆ, ಶಾಲಾ ಬಸ್‌ಗಳ ಚಾಲಕರು, ಪೋಷಕರು ಹಾಗೂ ಸ್ಥಳೀಯ ನಿವಾಸಿಗಳಿಗೂ ಅನುಕೂಲವಾಗುವ ಸಾಧ್ಯತೆ ಇದೆ.

ರಸ್ತೆ ಅಗಲೀಕರಣದವರೆಗೆ ನಿಯಮ ಜಾರಿ

ವರ್ತೂರು-ಗುಂಜೂರು ಭಾಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಂಡು ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಬರುವವರೆಗೆ ಈ ನಿರ್ಬಂಧಗಳು ಮುಂದುವರಿಯಲಿವೆ ಎಂದು ತಿಳಿಸಲಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳ ಚಾಲಕರು ನಿಗದಿತ ಸಮಯದಲ್ಲಿ ಪರ್ಯಾಯ ಮಾರ್ಗಗಳನ್ನು ಬಳಸಬೇಕಾಗುತ್ತದೆ.

ಬೆಂಗಳೂರು ಪೂರ್ವ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ದಟ್ಟಣೆಯ ಹಿನ್ನೆಲೆಯಲ್ಲಿ ಶಾಲಾ ಸಮಯವನ್ನು ಗಮನದಲ್ಲಿಟ್ಟುಕೊಂಡು ಭಾರಿ ವಾಹನಗಳ ಸಂಚಾರವನ್ನು ನಿಯಂತ್ರಿಸುವ ಈ ಕ್ರಮವು ಸಂಚಾರ ನಿರ್ವಹಣೆಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (7)
    ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ
    September 25, 2026 | 0
  • Untitled design 2026 09 24T162805.563
    ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
  • ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)
    ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version