ಬೆಂಗಳೂರು: ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರ (ಡಿಸೆಂಬರ್ 3, 2025) ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ವ್ಯವಸ್ಥೆಯಿಂದಾಗಿ ರಾಜ್ಯದಾದ್ಯಂತ ತಾಪಮಾನದಲ್ಲಿ ಗಣನೀಯ ಇಳಿಕೆ ಕಂಡುಡುವುದರ ಜೊತೆಗೆ ಚಳಿಗಾಳಿಯ ಪ್ರಮಾಣ ಹೆಚ್ಚಾಗಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಯಾವುದೇ ಕ್ಷಣದಲ್ಲಿ ಮಳೆ ಆರಂಭವಾಗಬಹುದು. ಬೆಳಗಿನ ಜಾವದಲ್ಲಿ ಹಲವೆಡೆ ದಟ್ಟವಾದ ಮಂಜು ಕವಿದು ದೃಶ್ಯಮಾನತೆ ಕಡಿಮೆಯಾಗುವ ಸಾಧ್ಯತೆಯೂ ಇದೆ.
ಹವಾಮಾನ ಇಲಾಖೆಯು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಸೇರಿದಂತೆ ಒಟ್ಟು 18ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಸೇರಿದಂತೆ 18ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಹಗುರದಿಂದ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು ನಗರದಲ್ಲಿ ಬುಧವಾರ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಸುಮಾರಿಗೆ ಇರಲಿದೆ ಎಂದು ಅಂದಾಜಿಸಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕರಾವಳಿ ಪ್ರದೇಶದಲ್ಲಿ ಆರ್ದ್ರತೆಯ ಪ್ರಮಾಣ ಹೆಚ್ಚಾಗಿರಲಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಹಲವೆಡೆ ತಾಪಮಾನ ಗಣನೀಯವಾಗಿ ಕುಸಿದಿದೆ. ಚಿಂತಾಮಣಿ (ಚಿಕ್ಕಬಳ್ಳಾಪುರ ಜಿಲ್ಲೆ) ರಾಜ್ಯದ ಅತಿ ಕಡಿಮೆ ಕನಿಷ್ಠ ತಾಪಮಾನವನ್ನು ದಾಖಲಿಸಿದ್ದು, ಕೇವಲ 18.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದೇ ಊರಿನ ಗರಿಷ್ಠ ತಾಪಮಾನ ಕೇವಲ 22.2 ಡಿಗ್ರಿ ಸೆಲ್ಸಿಯಸ್ ಮಾತ್ರ. ಮಂಡ್ಯ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 17.3 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದ್ದು, ಗರಿಷ್ಠ ತಾಪಮಾನ 26.5 ಡಿಗ್ರಿ ಸೆಲ್ಸಿಯಸ್ ಇತ್ತು. ಬೆಂಗಳೂರು ನಗರದಲ್ಲೂ ಕನಿಷ್ಠ ತಾಪಮಾನ 18-19 ಡಿಗ್ರಿ ಸೆಲ್ಸಿಯಸ್ ಸುಮಾರಿಗೆ ಇಳಿದಿದ್ದು, ಬೆಳಗ್ಗೆ ಮತ್ತು ರಾತ್ರಿ ಚಳಿ ಜಾಸ್ತಿಯಾಗಿ ಭಾಸವಾಗುತ್ತಿದೆ.
ಈ ಹವಾಮಾನ ವ್ಯವಸ್ಥೆಯು ಮುಂದಿನ 48-72 ಗಂಟೆಗಳ ಕಾಲ ರಾಜ್ಯದಲ್ಲಿ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ರೈತರು, ಪ್ರಯಾಣಿಕರು ಹಾಗೂ ಸಾರ್ವಜನಿಕರು ಮುಂಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಕೋರಿದೆ.





