• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಚಂಡಮಾರುತ ಪರಿಚಲನೆ: ರಾಜ್ಯದಲ್ಲಿ ಮುಂದಿನ 3-5 ದಿನ ಭಾರೀ ಮಳೆ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 24, 2025 - 3:28 pm
in ಕರ್ನಾಟಕ
0 0
0
Untitled design 2025 04 24t151823.120

ಬೆಂಗಳೂರು, ಏಪ್ರಿಲ್ 24: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಪೂರ್ವ ಮುಂಗಾರು ಮಳೆ ಕೊಂಚ ತಗ್ಗಿದ್ದು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಈಗಾಗಲೇ ಆರಂಭವಾಗಿದೆ. ಬುಧವಾರದಂದು ಉತ್ತರ ಕರ್ನಾಟಕದ ಹಲವೆಡೆ ಉತ್ತಮ ಮಳೆ ದಾಖಲಾಗಿದ್ದು, ಹವಾಮಾನ ಇಲಾಖೆ ಮುಂದಿನ 3ರಿಂದ 5 ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ ಏಪ್ರಿಲ್ 27ರಿಂದ 29ರ ವರೆಗೆ ಬೆಂಗಳೂರಿನಲ್ಲಿ ವ್ಯಾಪಕ ಮಳೆ ಆಗಲಿದೆ. ಈ ದಿನಗಳಲ್ಲಿ ಸಂಜೆ ಬಳಿಕ ಗುಡುಗು ಮಿಂಚು ಸಹಿತ ಜೋರು ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ನಗರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದೆ. KSNDMC (ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ) ನೀಡಿರುವ ಮಾಹಿತಿ ಪ್ರಕಾರ, ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುವ ಸಾಧ್ಯತೆ ಇದೆ.

RelatedPosts

ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ADVERTISEMENT
ADVERTISEMENT
ರಾಜ್ಯದಲ್ಲಿ ಉಷ್ಣತೆಯ ಅಲೆ ಎಚ್ಚರಿಕೆ

ರಾಜ್ಯದ ಹಲವೆಡೆ ಈಗಾಗಲೇ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಕಲಬುರಗಿ, ಬೀದರ್, ಹಾವೇರಿ, ಬಳ್ಳಾರಿ, ದಕ್ಷಿಣ ಕನ್ನಡ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ತೀವ್ರ ಇಳಿಕೆ ಕಂಡುಬಂದಿಲ್ಲ. ಇಡೀ ದಿನ ಉಷ್ಣ ಅಲೆ, ಸೆಕೆ, ಮಂಜಿನ ವಾತಾವರಣದೊಂದಿಗೆ ಇರಲಿದೆ.

ಭಾರೀ ಮಳೆ ದಾಖಲಾಗಿರುವ ಪ್ರದೇಶಗಳು

ಕಳೆದ 24 ಗಂಟೆಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಅತ್ಯಧಿಕವಾಗಿ 64 ಮಿಲಿ ಮೀಟರ್ ಮಳೆ ದಾಖಲಾಗಿದ್ದು, ಇದರೊಂದಿಗೆ ದಕ್ಷಿಣ ಕನ್ನಡದಲ್ಲಿ 57.5 ಮಿ.ಮೀ, ಧಾರವಾಡದಲ್ಲಿ 44.5 ಮಿ.ಮೀ, ಉಡುಪಿ – 31.5 ಮಿ.ಮೀ, ಚಿಕ್ಕಮಗಳೂರು – 24.5 ಮಿ.ಮೀ, ವಿಜಯಪುರದಲ್ಲಿ 23.5 ಮಿ.ಮೀ ಮಳೆ ಸುರಿದಿದೆ. ಶಿವಮೊಗ್ಗ, ಉತ್ತರ ಕನ್ನಡ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳೂ ಸಾಧಾರಣ ಮಳೆಯ ದಾಖಲೆಗೆ ಸಾಕ್ಷಿಯಾಗಿವೆ.

ಚಂಡಮಾರುತದ ಪ್ರಭಾವ

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೊಂಚ ಮಳೆಯ ಪ್ರಮಾಣ ಕಡಿಮೆಯಾಗಿದೆಯಾದರೂ, ಸಮುದ್ರ ಮಟ್ಟದಿಂದ ಸರಾಸರಿ 0.9 ಕಿಮೀ ಎತ್ತರದಲ್ಲಿ ಹರಿಯುವ ವೈಪರೀತ್ಯದ ಗಾಳಿಯ ಪರಿಣಾಮದಿಂದಾಗಿ ಮುಂಬರುವ ವಾರದ ಒಳಗೆ ಮತ್ತೆ ಭಾರೀ ಮಳೆಯ ಸಂಭವವಿದೆ. ತಮಿಳುನಾಡಿನ ದಕ್ಷಿಣ ಕರಾವಳಿಯ ಮೇಲೆ 1.5 ಕಿಮೀ ರಿಂದ 3.1 ಕಿಮೀ ಎತ್ತರದ ವ್ಯಾಪ್ತಿಯಲ್ಲಿ ಚಂಡಮಾರುತ ಪರಿಚಲನೆ ಇದೆ. ಈ ವೈಪರೀತ್ಯದ ಗಾಳಿಯ ಪರಿಣಾಮದಿಂದಾಗಿ ಚತ್ತೀಸ್‌ಗಢದಿಂದ ಮನ್ನಾರ್ ಕೊಲ್ಲಿಗೆವರೆಗೆ ತೆಲಂಗಾಣ, ವಿದರ್ಭ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ವಾತಾವರಣದ ಅಸ್ಥಿರತೆ ಹೆಚ್ಚಾಗಿದೆ.

ಉತ್ತರ ಕರ್ನಾಟಕದ ಪರಿಸ್ಥಿತಿ

ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರಗಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಗುಡುಗು ಮಿಂಚು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 50-60 ಕಿಲೋಮೀಟರ್‌ನಷ್ಟು ಬೀಸಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಜಿಲ್ಲಾವಾರು ಮುನ್ಸೂಚನೆ
  • ದಾವಣಗೆರೆ, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಬಳ್ಳಾರಿ, ತುಮಕೂರು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣದಿಂದ ಜೋರು ಮಳೆ ಸಾಧ್ಯವಿದೆ.

  • ಕಲಬುರಗಿ, ಬೀದರ್, ಕಾರವಾರ, ಹಾವೇರಿ, ಬೆಂಗಳೂರು ಭಾಗಗಳಲ್ಲಿ ಮಳೆಯ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಚಂಡಮಾರುತ ಪರಿಚಲನೆ, ವೈಪರೀತ್ಯದ ಗಾಳಿ ಹಾಗೂ ಸಮುದ್ರ ಮಟ್ಟದ ವಾತಾವರಣ ಬದಲಾವಣೆಯ ಪರಿಣಾಮದಿಂದಾಗಿ ಮುಂದಿನ ದಿನಗಳಲ್ಲಿ ರಾಜ್ಯದ ಬಹುಪಾಲು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (13)

ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್

by ದಿಶಾ ಕೆ. ಎಸ್.
October 2, 2026 - 1:12 pm
0

ಜ್ಞಾನೇಶ್ (12)

ಭಾರತೀಯ ಪೈಲಟ್ ಜೊತೆ ಪ್ರಧಾನಿ ಮೋದಿ ಮಾತುಕತೆ: ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌ ಧೈರ್ಯಕ್ಕೆ ಪ್ರಧಾನಿ ಮೆಚ್ಚುಗೆ

by ದಿಶಾ ಕೆ. ಎಸ್.
October 2, 2026 - 12:44 pm
0

ಜ್ಞಾನೇಶ್ (11)

ಏಷ್ಯನ್​ ಗೇಮ್ಸ್​: ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ಭಾರತ, ಲವ್ಲಿನಾ ಬೊರ್ಗೊಹೈನ್‌ಗೆ ಚಿನ್ನದ ಕಿರೀಟ

by ದಿಶಾ ಕೆ. ಎಸ್.
October 2, 2026 - 12:21 pm
0

ಜ್ಞಾನೇಶ್ (10)

ಚಿನ್ನ ಖರೀದಿದಾರರಿಗೆ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ

by ದಿಶಾ ಕೆ. ಎಸ್.
October 2, 2026 - 11:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (9)
    ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA
    October 2, 2026 | 0
  • ಜ್ಞಾನೇಶ್ (1)
    ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ
    October 2, 2026 | 0
  • Your paragraph text 2026 10 01T181922.337
    ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ
    October 1, 2026 | 0
  • Your paragraph text 2026 10 01T171602.410
    ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ
    October 1, 2026 | 0
  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version