ವಾಕಿಂಗ್ ಮಾಡೋ ಮಹಿಳೆಯರ ತುಟಿಗೆ ಕಿಸ್ ಕೊಟ್ಟು ಹೋಗುತ್ತಿದ್ದವ ಆರೋಪಿ ಅರೆಸ್ಟ್!

Untitled design 2025 06 10t141853.568

ಬೆಂಗಳೂರು : ನಗರದ ಕೂಕ್ ಟೌನ್‌ನ ಮಿಲ್ಟನ್ ಪಾರ್ಕ್‌ನಲ್ಲಿ ಸಂಜೆ ವಾಕಿಂಗ್ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಬಲವಂತವಾಗಿ ತಬ್ಬಿ, ತುಟಿಗೆ ಮುತ್ತಿಡುವ ಘಟನೆ ನಡೆದಿದೆ. ಆರೋಪಿ ಮದನ್ ಎಂಬುವವನನ್ನು ಪುಲಕೇಶಿನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ಹೆಸರು ಮದನ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಉದ್ಯಾನವನಗಳು, ಸಣ್ಣ ಪಾರ್ಕ್‌ಗಳು, ಮೈದಾನಗಳು ಮತ್ತು ಮಹಿಳೆಯರು ವಾಯುವಿಹಾರಕ್ಕೆ ತೆರಳುವ ರಸ್ತೆಗಳಲ್ಲಿ ಈ ಕೃತ್ಯವನ್ನು ನಡೆಸುತ್ತಿದ್ದ.

 

ಈ ಘಟನೆ ಜೂನ್ 6, 2025ರ ಸಂಜೆ 7 ಗಂಟೆ ಸುಮಾರಿಗೆ ಕಾಕ್ಸ್‌ಟೌನ್‌ನ ಮಿಲ್ಟನ್ ಪಾರ್ಕ್ ಬಳಿ ನಡೆದಿದೆ. ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಈ ಪ್ರದೇಶದಲ್ಲಿ ಆರೋಪಿಯು ಒಬ್ಬಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ತನ್ನ ಕಾಮಚೇಷ್ಟೆಯನ್ನು ಮೆರೆದಿದ್ದಾನೆ. ಬೆಳಗ್ಗೆ ಕುಟುಂಬದೊಂದಿಗೆ ವಾಯುವಿಹಾರಕ್ಕೆ ಬಂದಿದ್ದ ಒಬ್ಬ ಮಹಿಳೆಯ ಬಳಿ ಮುಗ್ಧವಾಗಿ ಹೋಗಿ, ಬಲವಂತವಾಗಿ ತಬ್ಬಿಕೊಂಡು ತುಟಿಗೆ ಮುತ್ತಿಟ್ಟಿದ್ದಾನೆ. ಇದೇ ಪಾರ್ಕ್‌ನಲ್ಲಿ ವಾಕಿಂಗ್ ಮಾಡುತ್ತಿದ್ದ ಇನ್ನೊಬ್ಬ ಮಹಿಳೆಯ ಮೇಲೂ ಇದೇ ರೀತಿಯ ಕೃತ್ಯವನ್ನು ಎಸಗಿದ್ದಾನೆ. ಮಹಿಳೆಯರು ಗಲಾಟೆ ಮಾಡಿ, ಆರೋಪಿಯನ್ನು ಪ್ರಶ್ನಿಸಿದಾಗ, “ನೀವು ಯಾರಿಗೆ ಹೇಳಿದರೂ ಏನೂ ಆಗಲ್ಲ” ಎಂದು ಬೆದರಿಕೆ ಹಾಕಿ, ಕಾರಿನಲ್ಲಿ ಪರಾರಿಯಾಗಿದ್ದಾನೆ.

ಮಹಿಳೆಯರು ತಡರಾತ್ರಿ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೋ (POCSO) ಕಾಯ್ದೆ ಮತ್ತು ಇತರ ಸಂಬಂಧಿತ ಕಾನೂನು ಕಲಂಗಳಡಿ ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆಯಿಂದ ಸ್ಥಳೀಯ ನಿವಾಸಿಗಳು, ಮಕ್ಕಳ ಪೋಷಕರು ಮತ್ತು ಮಹಿಳಾ ಹಕ್ಕು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಹೆಚ್ಚಿನ ಪೊಲೀಸ್ ಭದ್ರತೆ, ಸಿಸಿಟಿವಿ ಕಣ್ಗಾವಲು ಮತ್ತು ಕಠಿಣ ಕಾನೂನು ಜಾರಿಯನ್ನು ಒತ್ತಾಯಿಸಿದ್ದಾರೆ.

Exit mobile version